Homeಮುಖಪುಟಹರ್ಯಾಣ: ED ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕರಿಗೆ ಸೇರಿದ 20ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ

ಹರ್ಯಾಣ: ED ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕರಿಗೆ ಸೇರಿದ 20ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹರ್ಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಮತ್ತು ಐಎನ್‌ಎಲ್‌ಡಿ ಮಾಜಿ ಶಾಸಕ ದಿಲ್‌ಬಾಗ್ ಸಿಂಗ್ ನಿವಾಸ ಸೇರಿ ಹಲವೆಡೆ ದಾಳಿಯನ್ನು ನಡೆಸಿದ್ದಾರೆ.

ಶಾಸಕ ಸುರೇಂದರ್ ಪನ್ವಾರ್, ಮಾಜಿ ಐಎನ್‌ಎಲ್‌ಡಿ ಶಾಸಕ ದಿಲ್‌ಬಾಗ್ ಸಿಂಗ್‌ಗೆ ಸೇರಿದ 20 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಮುನಾ ನಗರ, ಸೋನಿಪತ್, ಮೊಹಾಲಿ, ಫರಿದಾಬಾದ್, ಚಂಡೀಗಢ ಮತ್ತು ಕರ್ನಾಲ್‌ನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇ.ಡಿ ಅಧಿಕಾರಿಗಳಿಗೆ ಕೇಂದ್ರೀಯ ಅರೆಸೇನಾ ಪಡೆಗಳ ಮೂಲಕ ರಕ್ಷಣೆಯನ್ನು ಕೂಡ ನೀಡಲಾಗಿದೆ.

ಸುರೇಂದರ್ ಪನ್ವಾರ್ ಸೋನಿಪತ್‌ ಕ್ಷೇತ್ರದ ಕಾಂಗ್ರೆಸ್‌ ಶಾಸಕರಾಗಿದ್ದು, ದಿಲ್‌ಬಾಗ್ ಸಿಂಗ್  ಅವರು ಭಾರತ ರಾಷ್ಟ್ರೀಯ ಲೋಕ ದಳದಿಂದ (ಐಎನ್‌ಎಲ್‌ಡಿ) ಯಮುನಾ ನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಈ ಹಿಂದೆ ಯಮುನಾ ನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಅಕ್ರಮ ಗಣಿಗಾರಿಕೆ  ಕುರಿತು ಹಲವು ಎಫ್‌ಐಆರ್‌ಗಳು ದಾಖಲಾದ ಬಳಿಕ ಇಡಿ ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದರು. ಗಣಿಗಾರಿಕ ನಡೆಸದಂತೆ ನ್ಯಾಯಾಲಯದ ಆದೇಶವಿದ್ದರೂ ಅಕ್ರಮವಾಗಿ ನಡೆಸುತ್ತಿರುವ  ಆರೋಪ ಕೇಳಿ ಬಂದಿತ್ತು.

ಇದಲ್ಲದೆ ತೆರಿಗೆಗಳ ಸಂಗ್ರಹವನ್ನು ಸರಳಗೊಳಿಸಲು ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ತೆರಿಗೆ ವಂಚನೆಯನ್ನು ತಡೆಗಟ್ಟಲು ಹರ್ಯಾಣ ಸರ್ಕಾರ 2020ರಲ್ಲಿ ಜಾರಿಗೆ ತಂದ ಆನ್‌ಲೈನ್ ಪೋರ್ಟಲ್ ‘ಇ-ರಾವಣ್’ ಯೋಜನೆಯಲ್ಲಿನ ವಂಚನೆಯನ್ನು ಕೂಡ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಜಾರ್ಖಂಡ್‌ ಮತ್ತು ರಾಜಸ್ಥಾನದಲ್ಲಿ ನಿನ್ನೆ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯವು ರಾಂಚಿಯಲ್ಲಿ ದಾಳಿ ನಡೆಸಿದೆ. ಇಡಿ ದಾಳಿಗೆ ಒಳಗಾಗಿರುವ ಅಭಿಷೇಕ್ ಪ್ರಸಾದ್ ಅವರು ಸಿಎಂ ಹೇಮಂತ್ ಅವರ ಮಾಧ್ಯಮ ಸಲಹೆಗಾರರಾಗಿದ್ದಾರೆ. ಅಭಿಷೇಕ್ ಪ್ರಸಾದ್ ಅವರ ನಿವಾಸ ಮತ್ತು ಸಾಹೇಬ್‌ಗಂಜ್ ಜಿಲ್ಲಾಧಿಕಾರಿ ನಿವಾಸ ಸೇರಿದಂತೆ 12 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗಿದೆ.

ಇಡಿ ನೀಡಿದ ಸಮನ್ಸ್‌ಗಳನ್ನು ಮುಖ್ಯಮಂತ್ರಿ ನಿರ್ಲಕ್ಷಿಸಿದ್ದರಿಂದ ಈ ದಾಳಿಗಳು ನಡೆಯುತ್ತಿದ್ದು, ಈಗಾಗಲೇ ಅವರು ತಮ್ಮ ಆಸ್ತಿಯ ಎಲ್ಲ ವಿವರಗಳನ್ನು ತನಿಖಾ ಸಂಸ್ಥೆಗೆ ಒದಗಿಸಿದ್ದಾರೆ. ಈಗ ನೀಡುತ್ತಿರುವ ಸಮನ್ಸ್ ಕಾನೂನುಬಾಹಿರವಾಗಿದೆ ಎಂದು ಹೇಮಂತ್ ಸೋರೆನ್ ಆಪ್ತರು ಹೇಳಿದ್ದರು.

ಇದನ್ನು ಓದಿ: ಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...