Homeಮುಖಪುಟಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

- Advertisement -
- Advertisement -

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ದಾಳಿ ನಡೆಸಲಾಗಿದೆ ಎಂದು ವರದಿಗಳು ಹೇಳಿವೆ.

ಪಂಜಾಬ್‌ನ ಜಲಂಧರ್, ಫಗ್ವಾರಾ ಮತ್ತು ಹರಿಯಾಣದ ಗುರುಗ್ರಾಮ್‌ನ ಸುಮಾರು 8 ರಿಂದ 10 ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯ ನಡೆದಿದೆ.

ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ ಕ್ಯಾಂಪಸ್ ಮಾತ್ರವಲ್ಲದೆ, ಈ ಸಮೂಹಕ್ಕೆ ಸೇರಿದ ಲವ್ಲಿ ಆಟೋಸ್, ಲವ್ಲಿ ಸ್ವೀಟ್ಸ್, ಮತ್ತು ಗುರುಗ್ರಾಮ್‌ನಲ್ಲಿರುವ ಟೆಟರ್ ಕಾಲೇಜ್ ಆಫ್ ಬಿಸಿನೆಸ್ ಹಾಗೂ ಮಾಸ್ಟರ್ಸ್ ಯೂನಿಯನ್ ಕಾಲೇಜ್ ಆಫ್ ಬಿಸಿನೆಸ್ ಸಂಸ್ಥೆಗಳ ಮೇಲೆಯೂ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಸಂಸದ ಅಶೋಕ್ ಮಿತ್ತಲ್ ಅವರ ಮನೆ ಮತ್ತು ಅವರ ಸಹೋದರರಾದ ರಮೇಶ್ ಹಾಗೂ ನರೇಶ್ ಮಿತ್ತಲ್ ಅವರ ಮನೆಗಳ ಮೇಲೆಯೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಡಿ ಅಧಿಕಾರಿಗಳು ಪ್ರಸ್ತುತ ಹಣಕಾಸಿನ ದಾಖಲೆಗಳು ಮತ್ತು ವಿದೇಶಿ ವಹಿವಾಟುಗಳಿಗೆ ಸಂಬಂಧಿಸಿದ ಪುರಾವೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿಗಳು ವಿವರಿಸಿವೆ.

ಈ ಬೆಳವಣಿಗೆಯು ಅಶೋಕ್ ಮಿತ್ತಲ್ ಅವರು ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರ ಬದಲಿಗೆ ಎಎಪಿ ಉಪನಾಯಕರಾಗಿ ನೇಮಕಗೊಂಡ ಕೆಲವೇ ದಿನಗಳಲ್ಲಿ ನಡೆದಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಈ ಕ್ರಮವನ್ನು ಖಂಡಿಸಿದ್ದು, ಇದು ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಬಿಜೆಪಿ ಮಾಡುತ್ತಿರುವ ‘ರಾಜಕೀಯ ದ್ವೇಷದ ದಾಳಿ’ ಎಂದು ಟೀಕಿಸಿದ್ದಾರೆ. 

“ಮೋದಿ ಜಿ ಪಂಜಾಬ್‌ನಲ್ಲಿ ಚುನಾವಣೆಗೆ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ಆದರೆ ಪಂಜಾಬ್‌ನ ಜನರು ಇದನ್ನು ಸಹಿಸುವುದಿಲ್ಲ. ಅವರು ಬಿಜೆಪಿಗೆ ತಕ್ಕ ಉತ್ತರ ನೀಡುತ್ತಾರೆ” ಎಂದಿರುವ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು, ಇಡಿ ಕ್ರಮಕ್ಕೆ ಬಲವಾದ ಪ್ರತಿಕ್ರಿಯೆ ನೀಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...