Homeಮುಖಪುಟಎಎಪಿ ಶಾಸಕ ಅಮಾನತುಲ್ಲಾ ಖಾನ್ ನಿವಾಸದ ಮೇಲೆ ಇಡಿ ದಾಳಿ

ಎಎಪಿ ಶಾಸಕ ಅಮಾನತುಲ್ಲಾ ಖಾನ್ ನಿವಾಸದ ಮೇಲೆ ಇಡಿ ದಾಳಿ

- Advertisement -
- Advertisement -

ದೆಹಲಿಯ ಎಎಪಿ ಶಾಸಕ, ವಕ್ಫ್‌ಬೋರ್ಡ್‌ ಅಧ್ಯಕ್ಷ ಅಮಾನತುಲ್ಲಾ ಖಾನ್ ಮತ್ತು ಇತರ ಕೆಲವರಿಗೆ ಸಂಬಂಧಿಸಿದ ಸ್ಥಳದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

49ರ ಹರೆಯದ ಶಾಸಕ ಅಮಾನತುಲ್ಲಾ ಖಾನ್ ಅವರು ದೆಹಲಿಯ ಓಖ್ಲಾ ಕ್ಷೇತ್ರದ ಶಾಸಕರಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ಡೆಯಡಿ ಈ ದಾಳಿ ನಡೆಸಿ ಶೋಧಗಳನ್ನು ನಡೆಸಲಾಗುತ್ತಿದೆ ಎಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಹೇಳಿದ್ದಾರೆ.

ದೆಹಲಿ ವಕ್ಫ್ ಬೋರ್ಡ್‌ನಲ್ಲಿನ ಅಕ್ರಮ ನೇಮಕಾತಿಗಳಿಗೆ ಸಂಬಂಧಿಸಿದ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಶಾಸಕರ ವಿರುದ್ಧ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಸಿಬಿಐ ದಾಖಲಿಸಿದ ಎಫ್‌ಐಆರ್‌ನ ಭಾಗವಾಗಿ ಈ ದಾಳಿ ನಡೆದಿದೆ.

ಎಎಪಿ ಶಾಸಕ ಅಮಾನತುಲ್ಲಾ ಖಾನ್ ದೆಹಲಿಯ ವಕ್ಪ್‌ ಬೋರ್ಡ್‌ನ ಅಧ್ಯಕ್ಷರು ಕೂಡ ಆಗಿದ್ದಾರೆ.

ಕಳೆದ ಎರಡು ದಿನಗಳ ಮೊದಲು ಎಎಪಿಯ ರಾಜ್ಯಸಭಾ ಸಂಸದ ಸಂಜಯ್‌ ಸಿಂಗ್‌ ಮನೆಯ ಮೇಲೆ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಮತ್ತೋರ್ವ ಎಎಪಿ ನಾಯಕನ ನಿವಾಸದ ಮೇಲೆ ಇದೀಗ ಇಡಿ ದಾಳಿ ನಡೆದಿದೆ.

ಇದನ್ನು ಓದಿ: ದೆಹಲಿ; ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಬಂಧಿಸಿದ ಇಡಿ ಅಧಿಕಾರಿಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...