ನವದೆಹಲಿಯ ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಆವರಣವನ್ನು ಜಾರಿ ನಿರ್ದೇಶನಾಲಯವು ಬುಧವಾರ ಸೀಲ್ ಮಾಡಿದೆ. ಇದರ ನಂತರ ಕಾಂಗ್ರೆಸ್ ಕೇಂದ್ರ ಕಚೇರಿ ಮತ್ತು ಪಕ್ಷದ ಅಧ್ಯಕ್ಷ ಸೋನಿಯಾ ಗಾಂಧಿ ನಿವಾಸಕ್ಕೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ. ಬೆಳವಣಿಗೆಯ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ,“ನೀವು ಏನು ಬೇಕಾದರೂ ಮಾಡಿ, ನಾನು ಪ್ರಧಾನಿ ನರೇಂದ್ರ ಮೋದಿಗೆ ಹೆದರುವುದಿಲ್ಲ; ದೇಶವನ್ನು, ಪ್ರಜಾಪ್ರಭುತ್ವವನ್ನು ಮತ್ತು ಸೌಹಾರ್ದತೆಯನ್ನ ಕಾಪಾಡುವುದು ನನ್ನ ಕರ್ತವ್ಯ. ಅದನ್ನು ನಾನು ಮಾಡುತ್ತಲೆ ಇರುತ್ತೇನೆ” ಎಂದು ಗುರುವಾರ ಹೇಳಿದ್ದಾರೆ.
ದೆಹಲಿಯಲ್ಲಿರುವ ಪಕ್ಷದ ಮುಖ್ಯ ಕಚೇರಿ ಸೇರಿದಂತೆ, ಕಾಂಗ್ರೆಸ್ ಸಂಯೋಜಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹನ್ನೆರಡು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಹುಡುಕಾಟ ನಡೆಸಿದ ಮರುದಿನ ಈ ಬೆಳವಣಿಗೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ನ್ಯಾಷನಲ್ ಹೆರಾಲ್ಡ್ ಅನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಪ್ರಕಟಿಸಿದ್ದು, ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಪತ್ರಿಕೆಯ ವಿರುದ್ಧ ತನಿಖೆ ನಡೆಯುತ್ತಿದೆ.
“ಕಾಂಗ್ರೆಸ್ ಪ್ರಧಾನ ಕಚೇರಿ ಮತ್ತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಮನೆಯ ಹೊರಗೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ” ಎಂದು ಎಎನ್‌ಐ ವರದಿ ಮಾಡಿದೆ.
Heavy police deployment at AICC headquarters, Delhi pic.twitter.com/xohfSmtSPC
— Supriya Bhardwaj (@Supriya23bh) August 3, 2022
ಮಲ್ಲಿಕಾರ್ಜುನ ಖರ್ಗೆ, ಸಲ್ಮಾನ್ ಖುರ್ಷಿದ್, ದಿಗ್ವಿಜಯ ಸಿಂಗ್, ಪಿ ಚಿದಂಬರಂ ಅವರಂತಹ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಬುಧವಾರ ಪಕ್ಷದ ಪ್ರಧಾನ ಕಚೇರಿಯನ್ನು ತಲುಪಿದ್ದಾರೆ. ಪಕ್ಷದ ಸಂಸದ ಜೈರಾಮ್ ರಮೇಶ್ ಅವರು ಕಾಂಗ್ರೆಸ್ ಕಚೇರಿಗೆ ದಿಗ್ಭಂಧನ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ’ಇಡಿ’ ಪರೀಕ್ಷೆ ಎದುರಿಸಬೇಕು- ಅಖಿಲೇಶ್ ಯಾದವ್
“ದೆಹಲಿ ಪೊಲೀಸರು ನಮ್ಮ ಕೇಂದ್ರ ಕಚೇರಿ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಮಾಜಿ ಅಧ್ಯಕ್ಷರ ಮನೆಗಳನ್ನು ಸುತ್ತುವರೆದಿದ್ದಾರೆ. ಇದು ಸೇಡಿನ ರಾಜಕಾರಣದ ಅತ್ಯಂತ ಕೆಟ್ಟ ರೂಪ. ನಾವು ಸಲ್ಲಿಸುವುದಿಲ್ಲ! ನಾವು ಮೌನವಾಗುವುದಿಲ್ಲ! ಮೋದಿ ಸರ್ಕಾರದ ಅನ್ಯಾಯ ಮತ್ತು ವೈಫಲ್ಯಗಳ ವಿರುದ್ಧ ನಾವು ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ!” ಎಂದು ಹೇಳಿದ್ದಾರೆ.
.@INCIndia is under siege. Delhi police has surrounded our HQs, and homes of INC President & ex-President.This is the worst form of vendetta politics. We will not submit! We will not be silenced! We will continue to raise our voice against injustices and failures of Modi Sarkar!
— Jairam Ramesh (@Jairam_Ramesh) August 3, 2022
ಈ ಮಧ್ಯೆ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ತನ್ನ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ನಿರಾಕರಿಸಿದೆ. ಈ ಹಿಂದೆ ಹೀಗೆ ವರದಿ ಮಾಡಿದ್ದ ಸುದ್ದಿ ಸಂಸ್ಥೆ ಎಎನ್‌ಐ, “ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನ ಆವರಣವನ್ನು ಮಾತ್ರ ಸೀಲ್ ಮಾಡಲಾಗಿದೆ” ಎಂದು ನಂತರ ಸ್ಪಷ್ಟೀಕರಣ ನೀಡಿತು.
“ನ್ಯಾಷನಲ್ ಹೆರಾಲ್ಡ್ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂದು ಕೆಲವು ಮಾಧ್ಯಮಗಳು ಸುಳ್ಳು ವರದಿಗಳನ್ನು ಮಾಡಿವೆ. ನಾವು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದೇವೆ” ಎಂದು ಪತ್ರಿಕೆ ಟ್ವೀಟ್‌ನಲ್ಲಿ ತಿಳಿಸಿದೆ.
There are a few false media reports that the National Herald office has been sealed.
We are functioning as usual.
This is a broadcast request to media to correct the erroneous reports.
— National Herald (@NH_India) August 3, 2022
ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷ್ಯಗಳನ್ನು ಸಂಗ್ರಹಿಸಲು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ದಾಳಿ ನಡೆಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ತಿಳಿಸಿತ್ತು.
ಇದನ್ನೂ ಓದಿ: ಪ್ರತಿಭಟನೆ ವೇಳೆ ಪೊಲೀಸರಿಂದ ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯ ಹಲ್ಲೆ-ಆರೋಪ
ಪ್ರಕರಣಕ್ಕೆ ಸಂಬಂಧಿಸಿದ “ಹಲವು ಜನರನ್ನು” ಪ್ರಶ್ನಿಸಿದ ನಂತರ ಜಾರಿ ನಿರ್ದೇಶನಾಲಯವು ಹೊಸದಾಗಿ ಪುರಾವೆಗಳನ್ನು ಪಡೆದು ಹುಡುಕಾಟ ನಡೆಸುತ್ತಿದೆ ಎಂದು ಕೆಲವು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಯ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ,“ಸತ್ಯಕ್ಕೆ ಅಡ್ಡಗಾಲು ಹಾಕಲು ಸಾಧ್ಯವಿಲ್ಲ. ನೀವು ಏನು ಬೇಕಾದರೂ ಮಾಡಿ, ನಾನು ಪ್ರಧಾನಿ ನರೇಂದ್ರ ಮೋದಿಗೆ ಹೆದರುವುದಿಲ್ಲ. ನಾನು ಯಾವಾಗಲೂ ದೇಶದ ಹಿತದೃಷ್ಟಿಯಿಂದ ಕೆಲಸ ಮಾಡುತ್ತೇನೆ. ಕೇಳಿಸಿಕೊಳ್ಳಿ ಮತ್ತು ಅರ್ಥಮಾಡಿಕೊಳ್ಳಿ!”
सच्चाई को बैरिकेड नहीं किया जा सकता।
कर लें जो करना है, मैं प्रधानमंत्री से नहीं डरता, मैं हमेशा देश हित में काम करता रहूंगा।
सुन लो और समझ लो! pic.twitter.com/akqfS8AYaS
— Rahul Gandhi (@RahulGandhi) August 4, 2022
ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈನಲ್ಲಿ ಕೇಂದ್ರ ತನಿಖಾ ಸಂಸ್ಥೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿತ್ತು. ಜೊತೆಗೆ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರನ್ನು ಜೂನ್‌ನಲ್ಲಿ ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯವು 50 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.
ಇದನ್ನೂ ಓದಿ: ‘ಮೋದಿ ಪೊಲೀಸ್ ರಾಜ್ಯದ ದೊರೆ’: ಪ್ರತಿಭಟನೆ ವೇಳೆ ರಾಹುಲ್ ಗಾಂಧಿ; ವಶಕ್ಕೆ ಪಡೆದ ಪೊಲೀಸರು
ಗಾಂಧಿ ಕುಟುಂಬದ ವಿರುದ್ಧ ಕೇಸು
ನ್ಯಾಷನಲ್ ಹೆರಾಲ್ಡ್ ಅನ್ನು ಜವಾಹರಲಾಲ್ ನೆಹರು ಅವರು ಭಾರತದ ಮೊದಲ ಪ್ರಧಾನಿಯಾಗುವ ಮೊದಲು ಸ್ಥಾಪಿಸಿದ್ದರು ಮತ್ತು ಅದರ ಸಂಪಾದಕರಾಗಿದ್ದರು. ಏಪ್ರಿಲ್ 2008 ರಲ್ಲಿ, ಪತ್ರಿಕೆಯು 90 ಕೋಟಿ ರೂಪಾಯಿಗಿಂತ ಹೆಚ್ಚಿನ ಸಾಲವನ್ನು ಹೊಂದಿದ್ದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು.
ಆದರೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ, “ಕಾಂಗ್ರೆಸ್‌ನ ಹಣವನ್ನು ಬಳಸಿಕೊಂಡು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.
ನ್ಯಾಯಾಲಯದ ದಾಖಲೆಗಳ ಪ್ರಕಾರ, ಪಕ್ಷವು ಬಡ್ಡಿರಹಿತ ಆಧಾರದ ಮೇಲೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ ಸಾಲವನ್ನು ನೀಡಿದೆ. ಯಾವುದೆ ಹಣ ವಿನಿಮಯವಿಲ್ಲದೆ ಸಂಬಳದಂತಹ ಬಾಕಿಗಳನ್ನು ಪಾವತಿಸಲು ಸಾಲವನ್ನು ಈಕ್ವಿಟಿಯಾಗಿ ಪರಿವರ್ತಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.


