Homeಮುಖಪುಟ'ED' ಸಮನ್ಸ್ ನೀಡುವಾಗ ಕನಿಷ್ಠ ಆರೋಪಗಳ ಸಾರವನ್ನು ಒದಗಿಸಬೇಕು: ಅಲಹಾಬಾದ್ ಹೈಕೋರ್ಟ್

‘ED’ ಸಮನ್ಸ್ ನೀಡುವಾಗ ಕನಿಷ್ಠ ಆರೋಪಗಳ ಸಾರವನ್ನು ಒದಗಿಸಬೇಕು: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಜಾರಿ ನಿರ್ದೇಶನಾಲಯದ ಪ್ರರಕಣದಲ್ಲಿ ಇಸಿಐಆರ್ ನೀಡದಿದ್ದಲ್ಲಿ ಕನಿಷ್ಠ ಪಕ್ಷ ಆರೋಪಗಳ ಸಾರಾಂಶವನ್ನು ಸಮನ್ಸ್ ಪಡೆದ ವ್ಯಕ್ತಿಗಳಿಗೆ ಒದಗಿಸಬೇಕು ಎಂದು ಅಲಹಬಾದ್‌ ಹೈಕೋರ್ಟ್‌ ಮಹತ್ವದ ತೀರ್ಪಿನಲ್ಲಿ ತಿಳಿಸಿದೆ.

ಜಾರಿ ನಿರ್ದೇಶನಾಲಯವು (ಇಡಿ) ‘ಜಾರಿ ಪ್ರಕರಣದ ಮಾಹಿತಿ ವರದಿಯ’ (ಇಸಿಐಆರ್) ನಕಲನ್ನು ಸಮನ್ಸ್ ಪಡೆದ ವ್ಯಕ್ತಿಗೆ ಒದಗಿಸದಿದ್ದಲ್ಲಿ, ಕನಿಷ್ಠ ಪಕ್ಷ ಆರೋಪದ ಬಗ್ಗೆ ತಿಳಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್  ಸೌರಭ್ ಮುಕುಂದ್/ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಇತ್ತೀಚೆಗೆ ಹೇಳಿದೆ.

ನ್ಯಾಯಮೂರ್ತಿ ಮೊಹಮ್ಮದ್ ಫೈಜ್ ಆಲಂ ಖಾನ್ ಅವರು ವಿಚಾರಣೆ ಅಥವಾ ತನಿಖೆ ಎಲ್ಲರಿಗೂ ನ್ಯಾಯಯುತವಾಗಿರುವ ಅಗತ್ಯವಿದೆ, ವಿಶೇಷವಾಗಿ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50ರ ಅಡಿಯಲ್ಲಿ ಇಡಿಯಿಂದ ಸಮನ್ಸ್ ಪಡೆಯುವಾಗ ನ್ಯಾಯಯುತವಾಗಿರಬೇಕು ಎಂದು ಹೇಳಿದ್ದಾರೆ. ಸಮನ್ಸ್ ಪಡೆದ ವ್ಯಕ್ತಿಗೆ ECIRನ ಪ್ರತಿಯನ್ನು ನೀಡುವುದು ಇಡಿ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂಬ ಅಂಶವನ್ನು ಗಮನಿಸಿ, ನ್ಯಾಯಮೂರ್ತಿ ಖಾನ್ ಹೇಳಿದ್ದಾರೆ.

ಸಾಮಾನ್ಯವಾಗಿ EDಯಿಂದ ಸಮನ್ಸ್‌ ಪಡೆದ ವ್ಯಕ್ತಿ, ECIRನ ನಕಲು ಇಲ್ಲದಿದ್ದರೆ ಕನಿಷ್ಠ ಈ ಬಗ್ಗೆ ತಿಳಿಯಬೇಕಿದೆ, ಆಗ ಅದಕ್ಕೆ ತಕ್ಕಂತೆ ತನ್ನನ್ನು ಆಪಾದಿತ ವ್ಯಕ್ತಿ ತಾನು ಸಿದ್ಧಪಡಿಸಿಕೊಳ್ಳಬಹುದು ಅಥವಾ ಸಮನ್ಸ್ ಪಡೆದ ವ್ಯಕ್ತಿಯನ್ನು ವಿಚಾರಣೆ ನಡೆಸುವಾಗ EDಯಿಂದ ಕೇಳಬಹುದಾದ ಪ್ರಶ್ನೆಗಳಿಗೆ ಉತ್ತರಿಸಲು ಸಂಬಂಧಿತ ದಾಖಲೆಗಳನ್ನು ಸಂಗ್ರಹಿಸಬಹುದು ಎಂದು ಹೇಳಿದ್ದಾರೆ. ಇದಲ್ಲದೆ ಬಂಧಿಸುವ ಸಾಧ್ಯತೆಯಿದೆ ಎಂಬ ಕಾರಣಕ್ಕಾಗಿ ಪಿಎಂಎಲ್‌ಎಯ ಸೆಕ್ಷನ್ 50ರ ಅಡಿಯಲ್ಲಿ ‘ಇಡಿ’ ನೀಡಿದ ಸಮನ್ಸ್‌ನಿಂದ ತಪ್ಪಿಸಿಕೊಳ್ಳಲು ಯಾವುದೇ ವ್ಯಕ್ತಿಗೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ತನಿಖಾ ಪ್ರಕ್ರಿಯೆಯ ಸಮಯದಲ್ಲಿ, ಸಮನ್ಸ್ ಪಡೆದ ವ್ಯಕ್ತಿಯು ಆರೋಪಿಯಲ್ಲ. ಕೇವಲ ECIR ನೋಂದಣಿಯು ಒಬ್ಬ ವ್ಯಕ್ತಿಯನ್ನು ಆರೋಪಿಯನ್ನಾಗಿ ಮಾಡುವುದಿಲ್ಲ. ಬಂಧನಕ್ಕೊಳಗಾದ ಮೇಲೆ ಅಥವಾ ವಿಚಾರಣೆಗೆ ಒಳಗಾದ ನಂತರ ಅವನು ಅಂತಿಮವಾಗಿ ಆರೋಪಿಯಾಗಬಹುದು ಎಂದು ಕೋರ್ಟ್‌ ಗಮನಿಸಿದೆ.

ಎಸ್‌ಎಫ್‌ಐಒ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದಲ್ಲಿ ಇಡಿ ದಾಖಲಿಸಿರುವ ಎರಡು ಇಸಿಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಪ್ರಕರಣದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯಗಳನ್ನು ನೀಡಿದೆ. ಎರಡು ಇಸಿಐಆರ್‌ಗಳಿಗೆ ಸಂಬಂಧಿಸಿದಂತೆ ಅರ್ಜಿದಾರ ಸೌರಭ್ ಮುಕುಂದ್ ಅವರಿಗೆ ಈ ವರ್ಷದ ಫೆಬ್ರವರಿಯಲ್ಲಿ ಇಡಿ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ನೀಡಿರುವುದು ತಮಗೆ ಕಿರುಕುಳ ನೀಡುವ ಪ್ರಯತ್ನವಾಗಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಪ್ರಕರಣದಲ್ಲಿ EDಯಿಂದ ECIRನ್ನು ಈಗಾಗಲೇ ದಾಖಲಿಸಿರುವುದರಿಂದ, ಅದೇ ಸಂದರ್ಭಗಳಲ್ಲಿ ಎರಡು ECIRಗಳನ್ನು ದಾಖಲಿಸಲು ಸಾಧ್ಯವಿಲ್ಲ ಎಂದು ವಾದಿಸಲಾಗಿದೆ. ಎರಡು ಇಸಿಐಆರ್‌ಗಳ ಬಗ್ಗೆ ಮುಕುಂದ್‌ಗೆ ಯಾವುದೇ ವಿವರಗಳನ್ನು ನೀಡಲಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಕೊನೆಯಲ್ಲಿ ನ್ಯಾಯಾಲಯವು ಪ್ರಸ್ತುತ ಅರ್ಜಿಯನ್ನು ಕೇವಲ ಆತಂಕದ ಮೇಲೆ ಸಲ್ಲಿಸಲಾಗಿದೆ ಎಂದು ಹೇಳಿದೆ, ಏಕೆಂದರೆ ಅರ್ಜಿದಾರರಿಗೆ ಆರೋಪಿ ಅಥವಾ ಸಾಕ್ಷಿಯಾಗಿ ಸಮನ್ಸ್ ನೀಡಲಾಗುತ್ತಿದೆಯೇ ಎಂದು ತಿಳಿದಿಲ್ಲ. ವ್ಯಕ್ತಿಯ ವಿರುದ್ಧ ಸಾಕಷ್ಟು ದಾಖಲೆಗಳೊಂದಿಗೆ ತನಿಖಾ ಸಂಸ್ಥೆಯು ಕಾನೂನಿನ ಪ್ರಕಾರ ಕಾರ್ಯನಿರ್ವಹಿಸಲು ಅವಕಾಶವಿದೆ ಮತ್ತು ಆರಂಭಿಕ ಹಂತದಲ್ಲಿ ತನಿಖೆ ಪ್ರಕ್ರಿಯೆಗೆ ಅಡ್ಡಿಯಾಗಬಾರದು ಎಂದು ಹೇಳಿದೆ. ಸೌರಭ್ ಮುಕುಂದ್/ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಅರ್ಜಿದಾರರಿಗೆ ನೀಡಲಾದ ಇಸಿಐಆರ್ ಮತ್ತು ಸಮನ್ಸ್ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

ಇದನ್ನು ಓದಿ: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನಕ್ಕೆ ತಿದ್ದುಪಡಿ: ವಿವಾದ ಸೃಷ್ಟಸಿದ ಬಿಜೆಪಿ ನಾಯಕಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...