Homeಕರ್ನಾಟಕ‘ಭಾರತ ಐಕ್ಯತಾ ಯಾತ್ರೆ’ ನಡುವೆ ಡಿ.ಕೆ. ಶಿವಕುಮಾರ್‌‌ಗೆ ಇಡಿ ಸಮನ್ಸ್

‘ಭಾರತ ಐಕ್ಯತಾ ಯಾತ್ರೆ’ ನಡುವೆ ಡಿ.ಕೆ. ಶಿವಕುಮಾರ್‌‌ಗೆ ಇಡಿ ಸಮನ್ಸ್

ಯಾತ್ರೆಯು ಒಕ್ಕಲಿಗ ಸಮುದಾಯದ ಶಕ್ತಿ ಕೇಂದ್ರವಾದ ಆದಿಚುಂಚನಗಿರಿ ಮಠದಲ್ಲಿ ವಾಸ್ತವ್ಯ ಹೂಡಲಿರುವ ದಿನವೆ ಹಾಜರಾಗುವಂತೆ ಇಡಿ ಅವರಿಗೆ ಹೇಳಿದೆ

- Advertisement -
- Advertisement -

ಯಂಗ್ ಇಂಡಿಯನ್‌ ಲಿಮಿಟೆಡ್ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದ್ದು, ಇಬ್ಬರೂ ಅಕ್ಟೋಬರ್ 7 ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಸೂಚಿಸಿದೆ.

ಮೈಸೂರು ಜಿಲ್ಲೆಯ ಬದನವಾಳುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, “ರಾಜ್ಯದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಇರುವುದರಿಂದ, ವಿಚಾರಣೆಗೆ ಹಾಜರಾಗಲು ಮತ್ತೊಂದು ದಿನಾಂಕವನ್ನು ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಪ್ರಕರಣವು ನ್ಯಾಷನಲ್ ಹೆರಾಲ್ಡ್‌ನ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವಾಗ ಯಂಗ್ ಇಂಡಿಯಾ ಲಿಮಿಟೆಡ್ ಎಸಗಿರುವ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದೆ.

ಇದನ್ನೂ ಓದಿ: ಬಿಜೆಪಿಯ ಕೊನೆಯ ದಿನಗಳು ಆರಂಭ, ಬೊಮ್ಮಾಯಿ ಧಮ್ ಇಳಿಯುತ್ತದೆ: ಡಿ.ಕೆ. ಶಿವಕುಮಾರ್‌

“ನಾನು ಕಾನೂನು ಗೌರವಿಸಿ, ಇಡಿ ಮುಂದೆ ಹಾಜರಾಗಲು ನಿರ್ಧರಿಸಿದ್ದೇನೆ …ಆದರೆ ನಮಗೆ ಇನ್ನೊಂದು ದಿನಾಂಕವನ್ನು ಒದಗಿಸುವಂತೆ ಅವರಿಗೆ ಪತ್ರ ಬರೆಯುತ್ತೇನೆ. ಅವರಿಗೆ ಖಂಡಿತ ಸಹಕಾರ ನೀಡುತ್ತೇನೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ  ಐಕ್ಯತಾ ಯಾತ್ರೆಯು ಮಂಡ್ಯ ಜಿಲ್ಲೆಯ ನಾಗಮಂಗಲ ಸಮೀಪದ ಒಕ್ಕಲಿಗ ಸಮುದಾಯದ ಶಕ್ತಿ ಕೇಂದ್ರವಾದ ಆದಿಚುಂಚನಗಿರಿ ಮಠದಲ್ಲಿ ವಾಸ್ತವ್ಯ ಹೂಡಲಿರುವ ದಿನದಂದೆ ಇಡಿ ಅವರಿಗೆ ಸಮನ್ಸ್‌‌ ಜಾರಿ ಮಾಡಿದೆ.

“ಇದು ನಮ್ಮ ಮಠವಾಗಿದ್ದು, ನಾನು ಆ ದಿನ ಹಾಜರಾಗದಿದ್ದರೆ ಅದು ಸರಿಯಲ್ಲ. ಯಾತ್ರೆಯ ಸಂಪೂರ್ಣ ಜವಾಬ್ದಾರಿಯನ್ನು ನಾನು ಮತ್ತು ನನ್ನ ಸಹೋದರ ವಹಿಸಿಕೊಂಡಿದ್ದೇವೆ” ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸ್ಥಿತಿ ಗೋವಿಂದಾ, ಗೋವಿಂದ! – ಡಿ.ಕೆ. ಶಿವಕುಮಾರ್

ಕಳೆದ ತಿಂಗಳಿನಿಂದ ಇದು ಎರಡನೇ ಬಾರಿಗೆ ಇಡಿ ಶಿವಕುಮಾರ್‌ ಅವರಿಗೆ ಸಮನ್ಸ್ ನೀಡಿದೆ. ಸೆಪ್ಟೆಂಬರ್‌ನಲ್ಲಿ ಅವರು ತಮ್ಮ ವಿರುದ್ಧ ದಾಖಲಾದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಇಡಿ ಮುಂದೆ ಹಾಜರಾಗಿದ್ದರು. ಅಲ್ಲದೆ, ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ರಾಮನಗರ ಜಿಲ್ಲೆಯಲ್ಲಿರುವ ಅವರ ಆಸ್ತಿಗಳಿಗೆ ಪರಿಶೀಲನೆ ಉದ್ದೇಶಗಳಿಗಾಗಿ ಕಳೆದ ವಾರ ಭೇಟಿ ನೀಡಿದ್ದರು.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನ್ನ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ ಎಂದು ಶಿವಕುಮಾರ್ ಹೇಳಿದ್ದಾರೆ.

“ಆದರೂ, ಭ್ರಷ್ಟಾಚಾರ ನಿಗ್ರಹ ದಳದ ಮಟ್ಟದಲ್ಲಿ ಇತ ನಾಯಕರ ಅಂತಹ ಪ್ರಕರಣಗಳನ್ನು ತನಿಖೆ ಮಾಡಲಾಗುತ್ತಿದೆ. ಅಡ್ವೊಕೇಟ್ ಜನರಲ್ ಅವರು ಸಿಬಿಐ ತನಿಖೆಗೆ ಯೋಗ್ಯವಾದ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿದ್ದರೂ, ಸರ್ಕಾರ ಅದನ್ನು ಹಸ್ತಾಂತರಿಸಿದೆ. ನನಗೆ ರಾಜಕೀಯವಾಗಿ ಕಿರುಕುಳ ನೀಡಲು ಈ ರೀತಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್‌, ನನ್ನ ನಡುವೆ ಬಿರುಕಿಲ್ಲ, ಅದು ಮಾಧ್ಯಮ ಸೃಷ್ಟಿ: ಅಮೃತ ಮಹೋತ್ಸವದಲ್ಲಿ ಸಿದ್ದರಾಮಯ್ಯ ಮನದ ಮಾತು

2017ರಲ್ಲಿ ರಾಜ್ಯಸಭಾ ಚುನಾವಣೆಗೆ ಮುನ್ನ ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆಶ್ರಯ ನೀಡುತ್ತಿದ್ದ ವೇಳೆ ಡಿಕೆ ಶಿವಕುಮಾರ್‌‌ ವಿರುದ್ಧ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಇದರ ನಂತರ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಇಡಿ ದಾಖಲಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...