Homeಮುಖಪುಟಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

- Advertisement -
- Advertisement -

ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ವಿಷಯವನ್ನು ಪ್ರಸ್ತಾಪಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಒಕ್ಕೂಟ ಸರ್ಕಾರವು ಪ್ರತಿಪಕ್ಷಗಳ ನೈತಿಕತೆಯನ್ನು ಕುಗ್ಗಿಸಲು ಮತ್ತು ಹೆದರಿಸಲು ಪ್ರಯತ್ನಿಸುತ್ತಿದೆ ಎಂದು ಗುರುವಾರ ಆರೋಪಿಸಿದ್ದಾರೆ. ಸಂಸತ್ತಿನ ಅಧಿವೇಶನ ನಡೆಯುತ್ತಿರುವ ಸಮಯದಲ್ಲಿ ಜಾರಿ ನಿರ್ದೇಶನಾಲಯದಿಂದ ತಮ್ಮನ್ನು ಕರೆಸಲಾಗಿದೆ ಎಂದು ಸೂಚಿಸಿದ ಖರ್ಗೆ, ಇಡಿ ಹಾಗೆ ಮಾಡುವುದು ನ್ಯಾಯವೇ ಎಂದು ಪ್ರಶ್ನಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ, ನಾಯಕರನ್ನು ಗುರಿಯಾಗಿಸಲು ಸರ್ಕಾರವು ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ ನಂತರ ಮಾತನಾಡಿದ ಕಾಂಗ್ರೆಸ್ ನಾಯಕ ಖರ್ಗೆ, “ಸದನ ಈಗ ಕಾರ್ಯನಿರ್ವಹಿಸುತ್ತಿದ್ದು, ನಾನು ವಿರೋಧ ಪಕ್ಷಗಳ ನಾಯಕನಾಗಿದ್ದೇನೆ. ಆದರೆ ಇದೀಗ ಸಂಸತ್ ಅಧಿವೇಶನ ನಡೆಯುತ್ತಿರುವಾಗಲೆ ಇಡಿ ಮುಂದೆ ಹಾಜರಾಗುವಂತೆ ನನಗೆ ಸಮನ್ಸ್ ಬಂದಿದೆ. ಸಂಸತ್ತು ಕಾರ್ಯನಿರ್ವಹಿಸುತ್ತಿರುವಾಗ ಇಡಿ ನನ್ನನ್ನು ಕರೆಸುವುದು ನ್ಯಾಯವೇ?” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಧ್ಯಾಹ್ನ 12.30ಕ್ಕೆ ಇಡಿ ಕಚೇರಿಗೆ ತೆರಳಬೇಕು ಎಂದು ಹೇಳಿದ ಖರ್ಗೆ, “ನಾನು ಕಾನೂನನ್ನು ಅನುಸರಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಿವಾಸಗಳನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. “ನಾವು ಹೀಗೆಯೇ ಮುಂದುವರಿದರೆ, ನಮ್ಮ ಪ್ರಜಾಪ್ರಭುತ್ವ ಜೀವಂತವಾಗಿ ಉಳಿಯುತ್ತದೆಯೇ? ನಮ್ಮ ಸಂವಿಧಾನದ ಪ್ರಕಾರ ನಾವು ಕಾರ್ಯನಿರ್ವಹಿಸುತ್ತೇವೆಯೇ? ಇದನ್ನು ಉದ್ದೇಶಪೂರ್ವಕವಾಗಿ ನಮ್ಮನ್ನು ಕುಗ್ಗಿಸಲು, ನಾಶಪಡಿಸಲು ಮತ್ತು ನಮ್ಮನ್ನು ಬೆದರಿಸಲು ಮಾಡಲಾಗುತ್ತಿದೆ. ಆದರೆ ನಾವು ಇದಕ್ಕೆ ಹೆದರುವುದಿಲ್ಲ, ಇದರ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಅವರು ಹೇಳಿದ್ದು, ಸದನದಲ್ಲಿ ಈ ವಿಷಯದ ಬಗ್ಗೆ ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭಾರತೀಯರನ್ನು ಸ್ಥಳಾಂತರಿಸುವಲ್ಲೂ ಪ್ರಚಾರ ಪಡೆಯುತ್ತಿರುವ ಬಿಜೆಪಿ; ಪ್ರಿಯಾಂಕ್ ಖರ್ಗೆ ತಿರುಗೇಟು

ಇದಕ್ಕೆ ಪ್ರತಿಕ್ರಿಯಿಸಿದ ಸದನದ ನಾಯಕ ಪಿಯೂಷ್ ಗೋಯಲ್, ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್ ನಾಯಕರು ಕಾನೂನನ್ನು ಎದುರಿಸಬೇಕು, ಅದರಿಂದ ಓಡಿಹೋಗಬಾರದು ಮತ್ತು ಸಂಸತ್ತಿನ ಕಾರ್ಯನಿರ್ವಹಣೆಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದ್ದಾರೆ. ತಮ್ಮ ಸರ್ಕಾರದ ಮೇಲಿನ ಆರೋಪಕ್ಕೆ ತಿರುಗೇಟು ನೀಡಿದ ಗೋಯಲ್, “ಅವರು (ಕಾಂಗ್ರೆಸ್) ಅಧಿಕಾರದಲ್ಲಿದ್ದಾಗ ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಹಸ್ತಕ್ಷೇಪ ಮಾಡಿರಬಹುದು…” ಎಂದು ಹೇಳಿದ್ದಾರೆ.

“ನಮ್ಮ ಸರ್ಕಾರವು ಕಾನೂನು ಜಾರಿ ಸಂಸ್ಥೆಗಳ ಕಾರ್ಯಚಟುವಟಿಕೆಯಲ್ಲಿ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅವರ ಕೆಲಸವನ್ನು ಮಾಡಲು ಅವರಿಗೆ ಅವಕಾಶ ನೀಡುತ್ತದೆ. ಕಾಂಗ್ರೆಸ್‌ ಸರ್ಕಾರವು ಕಾನೂನು ಜಾರಿ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿತ್ತು. ನಮ್ಮ ಸರ್ಕಾರ ಈ ರೀತಿ ಮಾಡಿಲ್ಲ” ಎಂದು ಗೋಯೆಲ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮಕ್ಕಳು ಶಿಕ್ಷಿತರಾಗುವುದಕ್ಕಿಂತ, ಮನುಸ್ಮೃತಿಯ ರೋಬೊಟ್‌ಗಳಾಗಬೇಕಿದೆ: ಪ್ರಿಯಾಂಕ್‌ ಖರ್ಗೆ ಆಕ್ರೋಶ

ಸಂಸತ್ತಿನ ಅಧಿವೇಶನದ ಮಧ್ಯದಲ್ಲಿ ಜಾರಿ ನಿರ್ದೇಶನಾಲಯವು ಖರ್ಗೆ ಅವರಿಗೆ ಸಮನ್ಸ್‌ ನೀಡಿರುವುದು “ಮೋದಿಶಾಹಿ” ಹೊಸ ಅಧೋಗತಿಗೆ ತಲುಪುತ್ತಿದೆ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಅವರು ಸಹಜವಾಗಿಯೇ ಮಧ್ಯಾಹ್ನ 12:20 ರ ಸುಮಾರಿಗೆ ಹೊರಟು ಸ್ವತಃ ಹಾಜರಾದರು. ಇದು ‘ಮೋದಿಶಾಹಿ’ ಹೊಸದಾಗಿ ತನ್ನ ಕನಿಷ್ಠ ಮಟ್ಟವನ್ನು ತಲುಪುತ್ತಿದೆ” ಎಂದು ಜೈರಾಮ್‌ ರಮೇಶ್ ಟ್ವೀಟ್ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

0
ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ...