Homeಮುಖಪುಟಇಂದು ಇಡಿ ಎದುರು ಹಾಜರಾಗಲಿರುವ ರಾಹುಲ್ ಗಾಂಧಿ: ಶಕ್ತಿ ಪ್ರದರ್ಶನ ಆರಂಭಿಸಿರುವ ಕಾಂಗ್ರೆಸ್

ಇಂದು ಇಡಿ ಎದುರು ಹಾಜರಾಗಲಿರುವ ರಾಹುಲ್ ಗಾಂಧಿ: ಶಕ್ತಿ ಪ್ರದರ್ಶನ ಆರಂಭಿಸಿರುವ ಕಾಂಗ್ರೆಸ್

- Advertisement -
- Advertisement -

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯದ (ಇಡಿ) ಕ್ರಮವನ್ನು ಖಂಡಿಸಿ, ಸೋಮವಾರ ಬೆಳಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ನವದೆಹಲಿಯಲ್ಲಿ ಬೆಳಗ್ಗೆಯೇ ಪ್ರತಿಭಟನೆ ಆರಂಭಿಸಿ, ತಮ್ಮ ನಾಯಕರನ್ನು ಬೆಂಬಲಿಸಿ ಘೋಷಣೆ ಕೂಗುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಸ್‌ಗಳಲ್ಲಿ ಕರೆದುಕೊಂಡು ಹೋಗಿದ್ದಾರೆ. ಆದರೆ, ಪಕ್ಷವು ಶಕ್ತಿ ಪ್ರದರ್ಶನವಾಗಿ ಈ ಪ್ರತಿಭಟನೆಯನ್ನು ಯೋಜಿಸಿರುವ ಕಾರಣ ಇಂದು ಇನ್ನಷ್ಟು ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುವ ನಿರೀಕ್ಷೆಯಿದೆ.

ಮನಿ ಲಾಂಡರಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ರಾಹುಲ್ ಗಾಂಧಿ ಇಂದು ಹಾಜರಾಗಲಿದ್ದಾರೆ. ಏಜೆನ್ಸಿ ಕಚೇರಿ ಬಳಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ರಾಹುಲ್ ಗಾಂಧಿ ಅವರೊಂದಿಗೆ ಇಡಿ ಕಚೇರಿಗೆ ಬರಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಯುಪಿ: ಪ್ರತಿಭಟನಾಕಾರರ ಮನೆ ಮೇಲೆ 2ನೇ ದಿನವೂ ಮುಂದುವರೆದ ಬುಲ್ಡೋಜರ್‌ ದಾಳಿ

ಈ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರಿಗೂ ಕೇಂದ್ರ ಸಂಸ್ಥೆ ಸಮನ್ಸ್ ನೀಡಿದೆ. ಅವರು ಕೋವಿಡ್‌ನಿಂದ ಬಳಲುತ್ತಿದ್ದು, ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಸೋನಿಯಾ ಗಾಂಧಿ ಅವರು ಜೂನ್ 23 ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪ್ರತಿಪಕ್ಷಗಳ ಧ್ವನಿಯನ್ನು ಅಡಗಿಸಲು ಜಾರಿ ನಿರ್ದೇಶನಾಲಯ ಮತ್ತು ಇತರ ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದ್ದಾರೆ. ತನ್ನ ನಾಯಕರ ವಿರುದ್ಧದ ಆರೋಪಗಳು “ನಕಲಿ ಮತ್ತು ಆಧಾರರಹಿತ” ಮತ್ತು ಬಿಜೆಪಿಯು “ಸೇಡಿನ ರಾಜಕೀಯ” ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಯಂಗ್ ಇಂಡಿಯನ್‌ನಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ ಎಂದು ತನಿಖೆ ನಡೆಸಲಾಗುತ್ತಿದೆ. 2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಖಾಸಗಿ ಕ್ರಿಮಿನಲ್ ದೂರಿನ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಪರಿಗಣಿಸಿದ ನಂತರ ಇ.ಡಿ.ಯು ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿದೆ.


ಇದನ್ನೂ ಓದಿ: ಇಂದು ಇ.ಡಿ. ಎದುರು ರಾಹುಲ್‌ ಹಾಜರಿ: ಬೃಹತ್‌ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...