Homeಮುಖಪುಟಕಾಂಗ್ರೆಸ್ ಪ್ರತಿಭಟನೆ: ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ರನ್ನು ಎಳೆದೊಯ್ದ ಪೊಲೀಸರು

ಕಾಂಗ್ರೆಸ್ ಪ್ರತಿಭಟನೆ: ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ರನ್ನು ಎಳೆದೊಯ್ದ ಪೊಲೀಸರು

- Advertisement -
- Advertisement -

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿರುವುದನ್ನು ವಿರೋಧಿಸಿ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಭಾಗವಹಿಸದಂತೆ ತಡೆಯಲು ಪೊಲೀಸರು ಅವರನ್ನು ಎಳೆದುಕೊಂಡು ಹೋಗುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಸಂಸದರಾಗಿರುವ ವೇಣುಗೋಪಾಲ್‌ ಅವರನ್ನು ಪ್ರತಿಭಟನೆಯಲ್ಲಿ ಭಾಗವಹಿಸಲು ಬಿಡದೆ, ಎಳೆದುಕೊಂಡು ಹೋಗಿ ಬಸ್‌ನಲ್ಲಿ ಕೂರಿಸಲಾಗಿದೆ. ಅವರ ಬಟ್ಟೆಗಳು ಕೂಡ ಹರಿದಿದ್ದು, ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ನಾಯಕರು ಆರೋಪಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ವಿಚಾರಣೆಗೆ ಹಾಜರಾಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಜಾರಿ ನಿರ್ದೇಶನಾಲಯದ ಕಚೇರಿಗಳವರೆಗೆ ಮೆರವಣಿಗೆ ನಡೆಸಲು ಕಾಂಗ್ರೆಸ್ ಉದ್ದೇಶಿಸಿತ್ತು.  ಬೆಳಿಗ್ಗೆಯಿಂದಲೇ ದೆಹಲಿ ಪೊಲೀಸರು ಶಕ್ತಿ ಪ್ರದರ್ಶನಕ್ಕೆ ಪೂರ್ವಭಾವಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರನ್ನು ಸುತ್ತುವರಿಯಲು ಪ್ರಾರಂಭಿಸಿದ್ದರು.

ಇದನ್ನೂ ಓದಿ: ಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

 

ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ ಶ್ರೀನಿವಾಸ್ ತಮ್ಮ ಟ್ವಿಟರ್‌ ಖಾತೆಯಲ್ಲಿ ವಿಡಿಯೋವನ್ನು ಶೇರ್ ಮಾಡಿದ್ದು, “ಹಾಲಿ ರಾಜ್ಯಸಭಾ ಸಂಸದ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ದೆಹಲಿ ಪೊಲೀಸರ ಈ ವರ್ತನೆ ಅತ್ಯಂತ ಖಂಡನೀಯ” ಎಂದು ಹೇಳಿದ್ದಾರೆ.

ವಿಡಿಯೋದಲ್ಲಿ 59 ವರ್ಷದ ವೇಣುಗೋಪಾಲ್ ಅವರನ್ನು ಪೊಲೀಸರು ಎತ್ತಿಕೊಂಡು ಹೋಗಿ ಬಸ್‌ನ ಕಡೆಗೆ ಎಳೆದುಕೊಂಡು ಹೋಗುವುದನ್ನು ಕಾಣಬಹುದು.

ನಂತರ ಪ್ರಿಯಾಂಕಾ ಗಾಂಧಿ ವಾದ್ರಾ, ಬಂಧಿತ ಕೆ.ಸಿ.ವೇಣುಗೋಪಾಲ್‌ ಸೇರಿದಂತೆ ಇತರ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸ್‌ ಠಾಣೆಗೆ ಹೋಗಿ ಭೇಟಿಯಾದರು.

ಈ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರಿಗೂ ಕೇಂದ್ರ ಸಂಸ್ಥೆ ಸಮನ್ಸ್ ನೀಡಿದೆ. ಅವರು ಕೋವಿಡ್‌ನಿಂದ ಬಳಲುತ್ತಿದ್ದು, ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಸೋನಿಯಾ ಗಾಂಧಿ ಅವರು ಜೂನ್ 23 ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪ್ರತಿಪಕ್ಷಗಳ ಧ್ವನಿಯನ್ನು ಅಡಗಿಸಲು ಜಾರಿ ನಿರ್ದೇಶನಾಲಯ ಮತ್ತು ಇತರ ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದ್ದಾರೆ. ತನ್ನ ನಾಯಕರ ವಿರುದ್ಧದ ಆರೋಪಗಳು “ನಕಲಿ ಮತ್ತು ಆಧಾರರಹಿತ” ಮತ್ತು ಬಿಜೆಪಿಯು “ಸೇಡಿನ ರಾಜಕೀಯ” ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ರಾಜಸ್ಥಾನ: ಮದ್ಯಪಾನ ಮಾಡಲು ನಿರಾಕರಿಸಿದ ಬುಡಕಟ್ಟು ಯುವಕನ ಮೇಲೆ ಅಮಾನುಷ ಹಲ್ಲೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...