Homeಕರ್ನಾಟಕ‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುತ್ತಾ, ಈ ಭಾರಿ ಸರ್ಕಾರವನ್ನು ಬದಲಿಸಿ ಎಂದು ಪ್ರಚಾರ ಮಾಡುತ್ತಿದ್ದ ‘ಎದ್ದೇಳು ಕರ್ನಾಟಕ’ ಜಾಗೃತ ತಂಡದ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪ ಬಂದಿದೆ.

ಜಯಜನಗರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಕಡೆಯವರು ಬಂದು ಹಲ್ಲೆ ನಡೆಸಿದ್ದಾರೆ, ಈ ಕುರಿತು ಯಾವುದೇ ಕ್ರಮವನ್ನು ಈವರೆಗೆ ಜರುಗಿಸಿಲ್ಲ ಎಂದು ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ ದೂರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಎದ್ದೇಳು ಕರ್ನಾಟಕದ ಪ್ರಜ್ಞಾವಂತ ನಾಗರಿಕರು ಶಾಂತಿಯುತವಾಗಿ ಪ್ರಚಾರ ನಡೆಸುತ್ತಿದ್ದರು. ಆದರೆ ಜಯನಗರದ ಬಿಜೆಪಿ ಅಭ್ಯರ್ಥಿ (ಸಿ.ಕೆ.ರಾಮಮೂರ್ತಿ) ಮತ್ತು ಸಂಸದ ತೇಜಸ್ವಿಸೂರ್ಯ ಅವರ ನಿರ್ದೇಶನದ ಮೇರೆಗೆ ನಾಗರಿಕರ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ಅಶ್ಲೀಲ ಪದಗಳಿಂದ ನಿಂದಿಸಲಾಗಿದೆ” ಎಂದು ವಿಡಿಯೊ ಹಂಚಿಕೊಂಡಿದ್ದಾರೆ.

“ದೂರು ನೀಡಿದರೂ ಬೆಂಗಳೂರು ನಗರ ಪೊಲೀಸರಾಗಲಿ, ಜಯನಗರ ಪೊಲೀಸರಾಗಲೀ ಈ ಪುಂಡರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಸಾಕು, ಸಾಕು. ಬಿಜೆಪಿಯ ಗೂಂಡಾ ಸಂಸ್ಕೃತಿಯನ್ನು ಕೊನೆಗಾಣಿಸಬೇಕಾಗಿದೆ. ಎದ್ದೇಳು ಕರ್ನಾಟಕ, ಎದ್ದೇಳು. ನಾವು ಮಹಿಳೆಯರು- ನಮಗೆ ರಕ್ಷಣೆ ಬೇಕಿದೆ. ಮತ್ತೆ ನಮ್ಮ ಬೆಂಗಳೂರು ಸುರಕ್ಷಿತ ನಗರವಾಗಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ.

ವಾರ್ಡ್ ನಂ.170ರ (ಅರಸು ಕಾಲೋನಿ) ಬಿಜೆಪಿ ಅಧ್ಯಕ್ಷ ಷಣ್ಮುಗಂ, ಆತನ ಮೈದುನ ಮಣಿಕಂಠ ಮತ್ತು ಸಹಚರರು ಹಲ್ಲೆ ಮಾಡಿದ್ದಾರೆಂದು ತಿಳಿದುಬಂದಿದೆ. ಕಾರ್ಮಲ್ ಕಾನ್ವೆಂಟ್ ಪೊಲಿಂಗ್ ಬೂತ್ ವ್ಯಾಪ್ತಿಯಲ್ಲಿ ಘಟನೆ ನಡೆದೆ. ಎದ್ದೇಳು ಕರ್ನಾಟಕದ 17 ಮಂದಿ ಸಾಮಾಜಿಕ ಕಾರ್ಯಕರ್ತರು ಸ್ಥಳದಲ್ಲಿ ಹಾಜರಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾಡಿದ ಸಾಮಾಜಿಕ ಕಾರ್ಯಕರ್ತೆ ಗೌರಿಯವರು ಘಟನೆಯ ಕುರಿತು ವಿವರಿಸಿದರು. “ಎಂದಿನಂತೆ ನಾವು ಪ್ರಚಾರವನ್ನು ಮಾಡಿಕೊಂಡು ಹೋಗುತ್ತಿದ್ದೆವು. ಈ ವಾರ್ಡ್‌ನಲ್ಲಿ ಬಿಜೆಪಿ ಪ್ರಬಲವಾಗಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಹೆಣ್ಣುಮಕ್ಕಳ ಮತದಾನ ಈ ಕ್ಷೇತ್ರದಲ್ಲಿ ಕುಸಿದಿತ್ತು. ಹೀಗಾಗಿ ಜಾಗೃತಿ ಮಾಡುತ್ತಿದ್ದೆವು. ಸಂವಿಧಾನವನ್ನು ಎತ್ತಿಹಿಡಿಯುವವರ ಪರವಾಗಿ, ಕೋಮುವಾದಿಗಳ ವಿರುದ್ಧ ಪ್ರಚಾರ ಮಾಡಲು ಹಕ್ಕು ನಮಗಿದೆ. ಆದರೆ ಇದನ್ನು ಬಿಜೆಪಿಯವರು ಸಹಿಸಲಿಲ್ಲ” ಎಂದು ವಿವರಿಸಿದರು.

ಇದನ್ನೂ ಓದಿರಿ: ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

“ಬಿಜೆಪಿಯವರು ಬಂದು ನಮಗೆ ತಡೆ ನೀಡಿದರು. ಬೆಲೆ ಏರಿಕೆ ಬಗ್ಗೆ ಮಾತನಾಡಬೇಡಿ, ಜಿಎಸ್‌ಟಿ ಕುರಿತು ಪ್ರಸ್ತಾಪಿಸಬೇಡಿ ಎಂದು ಧಮ್ಕಿ ಹಾಕಿದರು. ಜನರಿಗೆ ಈ ಸಮಸ್ಯೆಗಳು ಬಾಧಿಸುತ್ತಿವೆ ಎಂದು ನಾವು ತಿಳಿಸಿದೆವು. ನಾಗರಿಕರಾಗಿ ಮಾತನಾಡುವ ಹಕ್ಕು ನಮಗಿದೆ ಎಂದೆವು. ನಮ್ಮೆಲ್ಲರ ವಿರುದ್ಧ ಕೆಟ್ಟದ್ದಾಗಿ ಮಾತನಾಡಲು ಶುರು ಮಾಡಿದರು. ನೀವು ಕಾಂಗ್ರೆಸ್ ಏಜೆಂಟಾರಾಗಿದ್ದು, ದುಡ್ಡು ತೆಗೆದುಕೊಂಡು ಬಂದು ಪ್ರಚಾರ ಮಾಡುತ್ತಿದ್ದೀರಿ ಎಂದು ಆರೋಪಿಸಿದರು. ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ ಎಂದರು. ಸಮಾಧಾನದಲ್ಲಿ ಚರ್ಚೆ ಮಾಡಲು ನಾವು ಕರೆದೆವು” ಎಂದು ತಿಳಿಸಿದರು.

“ಸಮಾಧಾನವಾಗಿಯೇ ನಾವು ಎಲ್ಲವನ್ನು ಹೇಳುತ್ತಿದ್ದೆವು. ನಮ್ಮ ಜೊತೆಯಲ್ಲಿದ್ದ ಗಂಡಸರನ್ನು ಟಾರ್ಗೆಟ್ ಮಾಡಲು ಮುಂದಾದರು. ನಾವು ಬೇರೆ ಜಾಗಕ್ಕೆ ತೆರಳಲು ಸಿದ್ಧವಾದೆವು. ಅಷ್ಟರಲ್ಲಿ ಒಂದಿಷ್ಟು ಜನರಿಗೆ ಸಂದೇಶ ಕಳುಹಿಸಿ ಕರೆಸಿಕೊಂಡಿದ್ದರು. ಮೂವತ್ತರಿಂದ ಐವತ್ತು ಮಂದಿ ಬಂದು, ನಮ್ಮನ್ನು ಸುತ್ತುವರಿದರು. ನಮ್ಮ ಕರಪತ್ರಗಳನ್ನು ಕಿತ್ತುಕೊಂಡರು. ನಾವೇನೂ ಮಾತನಾಡಲಿಲ್ಲ. ನಮಗೆ ಹೊಡೆಯಲು ಬಂದಿದ್ದಾರೆಂದು ತಿಳಿಯಿತು. ಆದರೆ ನಮ್ಮ ಇಬ್ಬರು ಕಾರ್ಯಕರ್ತರ ಮುಖಕ್ಕೆ ಹೊಡೆದೇಬಿಟ್ಟರು. ಜಾಗ ಬಿಟ್ಟು ಹೊರಹೋಗುವಂತೆ ಧಮ್ಕಿ ಹಾಕಿದರು. ನಾವು ಬೆಂಗಳೂರಿನವರೇ ಆಗಿದ್ದೇವೆ. ಹೊರಗಡೆಯಿಂದ ಬಂದಿಲ್ಲ ಎಂದು ತಿಳಿಸಿ ಅಲ್ಲಿಂದ ಹೊರಟುಬಂದೆವು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...