Homeಮುಖಪುಟಭಾರತ್ ಜೋಡೋ ಯಾತ್ರೆಯಲ್ಲಿ ಪಾಕ್ ಪರ ಘೋಷಣೆ ಎಂದು ತಿರುಚಿದ ವಿಡಿಯೋ ಪೋಸ್ಟ್: ಬಿಜೆಪಿ ಮುಖಂಡನ...

ಭಾರತ್ ಜೋಡೋ ಯಾತ್ರೆಯಲ್ಲಿ ಪಾಕ್ ಪರ ಘೋಷಣೆ ಎಂದು ತಿರುಚಿದ ವಿಡಿಯೋ ಪೋಸ್ಟ್: ಬಿಜೆಪಿ ಮುಖಂಡನ ಮೇಲೆ FIR

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು ಮಧ್ಯ ಪ್ರದೇಶದಲ್ಲಿ ಸಂಚರಿಸುವಾಗ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂದು ತಿರುಚಿದ ವಿಡಿಯೋ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡನ ಮೇಲೆ ಛತ್ತೀಸ್‌ಘಡ ಪೊಲೀಸರು FIR ದಾಖಲಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಯಾತ್ರೆಯ ಮೂರನೇ ದಿನ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಲಾಗಿದೆ ಎಂದು ಬಿಜೆಪಿ ಮುಖಂಡ ವಿಡಿಯೋ ಒಂದನ್ನು ಟ್ವೀಟ್ ಮಾಡಿದ್ದರು. ಇದು ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಿಂದ ಬಂದಿದೆ ಎಂದು ಅವರು ಆರೋಪಿಸಿದ್ದರು. ಅಲ್ಲದೆ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ವಿರುದ್ಧ ದೂರು ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್, “ವಿಡಿಯೋ ತಿರುಚಲ್ಪಟ್ಟಿದೆ. ಭಾರತ್ ಜೋಡೋ ಯಾತ್ರೆಗೆ ಅಪಾರ ಜನಬೆಂಬಲ ವ್ಯಕ್ತವಾಗಿರುವುದರಿಂದ ಬಿಜೆಪಿ ಪಕ್ಷಕ್ಕೆ ಹತಾಶೆಯಾಗಿದೆ. ಹಾಗಾಗಿ ಅದು ತಿರುಚಿದ ವಿಡಿಯೋವನ್ನು ಪೋಸ್ಟ್ ಮಾಡಿದೆ. ಈ ಕುರಿತು ಕೂಡಲೇ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಮತ್ತು ಬಿಜೆಪಿಯ ಕುತಂತ್ರಗಳಿಗೆ ತಿರುಗೇಟು ನೀಡಲು ಸಿದ್ದರಿದ್ದೇವೆ” ಎಂದು ಟ್ವೀಟ್ ಮಾಡಿದ್ದಾರೆ.

ಆ ವೀಡಿಯೋವನ್ನು ವಿರೂಪಗೊಳಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಮಧ್ಯಪ್ರದೇಶ ಬಿಜೆಪಿ ಮಾಧ್ಯಮ ಉಸ್ತುವಾರಿ ಲೋಕೇಂದ್ರ ಪರಾಶರ್‌ ವಿರುದ್ಧ ಛತ್ತೀಸ್‌ಗಢದ ರಾಯ್‌ಪುರದ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಕಾಂಗ್ರೆಸ್ ಕಾನೂನು ವಿಭಾಗದ ವಕೀಲ ಅಂಕಿತ್ ಮಿಶ್ರಾ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು IPC ಸೆಕ್ಷನ್ 153-A, 504, 505 (1), 505 (2), ಮತ್ತು 120-B ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಛತ್ತೀಸ್‌ಗಢದ ಕಾಂಗ್ರೆಸ್ ವಕ್ತಾರ ಧನಂಜಯ್ ಸಿಂಗ್ ಮಾತನಾಡಿ “ಭಾರತ್ ಜೋಡೋ ಯಾತ್ರೆಯು ಮಧ್ಯಪ್ರದೇಶ ತಲುಪಿದೆ ಮತ್ತು ಮಧ್ಯಪ್ರದೇಶದಲ್ಲಿ ಸಾಕಷ್ಟು ಪ್ರೀತಿಯನ್ನು ಪಡೆಯುತ್ತಿದೆ. ಭಾರತೀಯ ಜನತಾ ಪಕ್ಷವು ನಕಲಿ ವೀಡಿಯೊಗಳನ್ನು ಮಾಡುವ, ತಪ್ಪುದಾರಿಗೆಳೆಯುವ ಮತ್ತು ಸುಳ್ಳು ಹೇಳುವ ಅಭ್ಯಾಸವನ್ನು ಹೊಂದಿದೆ. ಅವರು ಅದಕ್ಕೆ ಸಂಬಂಧಿಸಿದ ಕಲ್ಪಿತ ವೀಡಿಯೊವನ್ನು ಪ್ರಚಾರ ಮಾಡಿದ್ದಾರೆ. ಅದಕ್ಕಾಗಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ‘ಇಬ್ರಾಹಿಂ ಏಕೆ ಸಿಎಂ ಆಗಬಾರದು?, ಅವರೇನು ಅಸ್ಪೃಶ್ಯರಲ್ಲ’: ಎಚ್.ಡಿ ಕುಮಾರಸ್ವಾಮಿ ಅಸೂಕ್ಷ್ಮ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....