Homeಮುಖಪುಟವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

ವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

- Advertisement -
- Advertisement -

ಕ್ಲಬ್ ಹೌಸ್ ಚರ್ಚೆಯ ತಿರುಚಿದ ವಿಡಿಯೋ ಪ್ರಸಾರ ಮಾಡಿ ನನ್ನ ತೇಜೋವಧೆ ಮಾಡಲಾಗಿದೆ. ನನ್ನ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೈಲಜಾ ಅಮರ್‌ನಾಥ್‌ರವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜೂನ್ 16ರ ಸಂಜೆ ಕ್ಲಬ್‌ಹೌಸ್‌ ಚರ್ಚೆಯಲ್ಲಿ ಶ್ರೀರಾಮ, ಸೀತೆ ಹಾಗೂ ಹನುಮಂತ ದೇವರನ್ನು ಅವಹೇಳನ ಮಾಡಿದ್ದೇನೆ ಎಂದು ನನ್ನ ಧ್ವನಿಯನ್ನು ಬಳಸಿ ವಿಕ್ರಮ ಟಿವಿ ತಿರುಚಿದ ವಿಡಿಯೋ ಪ್ರಕಟಿಸಿದೆ. ಅದನ್ನೆ ಬಿಜೆಪಿ ಪಕ್ಷವು ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿ ತೇಜೋವಧೆ ಮಾಡಿದೆ. ಇದರಿಂದಾಗಿ ದುಷ್ಕರ್ಮಿಗಳು ನನ್ನ ಮನೆ ಮೇಲೆ ದಾಳಿ ಮಾಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೂನ್ 16 ರಂದು ನಾನು ಯಾವುದೇ ಕ್ಲಬ್‌ಹೌಸ್ ಚರ್ಚೆಯಲ್ಲಿ ಭಾಗವಹಿಸಿಲ್ಲ. ಅಂದು ನಾನು ನನ್ನ ಪತಿಯೊಂದಿಗೆ ಬೆಂಗಳೂರಿನಲ್ಲಿದ್ದೆ. ಈ ಕುರಿತು ಯಾವುದೇ ತನಿಖೆಗೆ ಸಿದ್ದವಿದ್ದೇನೆ. ಆದರೆ ಪೊಲೀಸರು ತನಿಖೆ ಮಾಡುತ್ತಿಲ್ಲ ಏಕೆ? ನಾನು ದೇವರ ಭಕ್ತೆಯಾಗಿದ್ದು, ಯಾವುದೇ ಕಾರಣಕ್ಕೂ ದೇವರಿಗೆ ಅವಹೇಳನ ಮಾಡುವ ಹೆಣ್ಣುಮಗಳಲ್ಲ. ಶ್ರೀರಾಮ ಸೀತೆ, ಪುತ್ತೂರು ಮಹಾಲಿಂಗೇಶ್ವರ ದೇವರ ಸಹಿತ ಎಲ್ಲಾ ದೇವರುಗಳನ್ನು ನಂಬುವ ಹಾಗೂ ಹಿಂದೂ ಸಂಪ್ರದಾಯ-ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಮಹಿಳೆಯಾಗಿದ್ದೇನೆ. ನಾನು ಹಿಂದು ಧರ್ಮೀಯಳು ಹೌದೋ, ಅಲ್ಲವೋ ಅನ್ನುವುದಕ್ಕೆ ಯಾವುದೊ ಯುಟ್ಯೂಬ್ ಚಾನೆಲ್ ಅಥವಾ ಯಾವುದೇ ಸಂಘಟನೆಗಳ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಕ್ಲಬ್ ಹೌಸ್‌ನಲ್ಲಿ ಹಿಂದೆ ನಡೆದ ಚರ್ಚೆಯನ್ನು ತಿರುಚಿ, ವಿಡಿಯೋ ಎಡಿಟ್ ಮಾಡಿ ಪ್ರಸಾರ ಮಾಡಿದ ವಿಕ್ರಮ ಯುಟ್ಯೂಬ್ ಚಾನೆಲ್‌ ಮತ್ತು ನಿರೂಪಕಿಯ ವಿರುದ್ದ ಪೊಲೀಸರಿಗೆ ದೂರು ನೀಡಿದ್ದೇನೆ. ನನ್ನ ಮನೆ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳ ವಿರುದ್ಧ ದೂರು ನೀಡಿದ್ದೇನೆ. ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸುವ ಬದಲು ಸುಮ್ಮನಿದ್ದಾರೆ. ನನಗೆ 48 ಗಂಟೆಯೊಳಗೆ ನ್ಯಾಯ ಸಿಗದಿದ್ದರೆ ನನ್ನನ್ನು ಬಂಧಿಸಿ ಎಂದು ಪೊಲೀಸ್ ಠಾಣೆ ಎದುರು ಧರಣಿ ಕೂರುತ್ತೇನೆ. ಜಾಮೀನು ಕೂಡ ಪಡೆಯುವುದಿಲ್ಲ. ಇಡೀ ಪ್ರಕರಣದ ಸಮರ್ಪಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಡುತ್ತೇನೆ ಎಂದರು.

ನಾನು ಅಧರ್ಮಿ ಅಲ್ಲವೇ ಅಲ್ಲ. ಅದೇ ರೀತಿ ನಾನು ಹೆಮ್ಮೆಯ ಕಾಂಗ್ರೆಸಿಗಳು ಸಹ ಹೌದು. ಸಮಾಜದಲ್ಲಿ ಸಮಾನತೆಗಾಗಿ ಹೋರಾಡುತ್ತೇನೆ. ಆದರೆ ಬಿಜೆಪಿ ಧರ್ಮದ ಹೆಸರಲ್ಲಿ ಅಧರ್ಮ ಮಾಡುತ್ತಿದೆ. ಬಿಜೆಪಿ ಓಟು ಗಿಟ್ಟಿಸುವ ನಿಟ್ಟಿನಲ್ಲಿ ಹಿಂದೂಪರ ಸಂಘಟನೆಗಳನ್ನು ನನ್ನ ವಿರುದ್ಧ ಎತ್ತಿಕಟ್ಟಿದೆ ಎಂದು ಕಿಡಿಕಾರಿದರು.

ಇನ್ನು ನಾನು ಕ್ಷಮೆಯಾಚಿಸಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ತಪ್ಪು ಮಾಡಿಲ್ಲದ ನಾನ್ಯಾಕೆ ಕ್ಷಮೆ ಕೇಳಬೇಕು? ತನ್ನ ಪಟಲಾಂ ಬಿಟ್ಟು ಮಹಿಳೆಯ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ, ನಾನು ನಿಧನ ಹೊಂದಿದ್ದೇನೆ ಎಂದು ಬ್ಯಾನರ್ ಹಾಕಿ ಕ್ಷೇತ್ರದ ವ್ಯಾಪ್ತಿಯ ಮಹಿಳೆಯೊಬ್ಬಳ ತೇಜೋವಧೆ ಮಾಡುತ್ತಿರುವಾಗ ಸೂಕ್ತ ಭದ್ರತೆ ಒದಗಿಸದ ಶಾಸಕರೇ ಕ್ಷಮೆ ಯಾಚಿಸಬೇಕು. ನಾನು ಯಾವುದೇ ದೇವರಿಗೆ ಅವಹೇಳನ ಮಾಡಿಲ್ಲ. ನನಗೆ ದೇವರ ಬೆಂಬಲ ಇದೆ. ಶ್ರೀರಾಮಚಂದ್ರನೇ ನನ್ನನ್ನು ರಕ್ಷಿಸುತ್ತಾನೆ ಎಂದರು.

ಇದನ್ನೂ ಓದಿ: ಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಿಂದೂ ದೇವತೆಗಳಾದ ಶ್ರೀರಾಮ,ಸೀತೆ,ಹನುಮಂತ ಇವರುಗಳ ಬಗ್ಗೆ ಹೀಯಾಳಿಸಿದ ಇಂತ ಬೇವರ್ಸಿ ಹಂದಿಗಳನ್ನು ಸಿಕ್ಕ ಲ್ಲಿ ಗುಂಡುಹಿಟ್ಟು ಕೊಲ್ಲಬೇಕಿದೆ ,ಗುಲಾಮರ ತಳಿಗಳಿಂದ ಮಾತ್ರ ಇಂತ ಹೇಳಿಕೆಗಳು ಬರಲು ಸಾಧ್ಯ

  2. ಶೈಲಜಾ ಅಮರನಾಥ್ ನಿಮ್ಮ ನ್ಯಾಯಯುತ ಹೆಜ್ಜೆಗೆ ನಮ್ಮ ಬೆಂಬಲವಿದೆ , ರಾಮ ಸೀತೆ ಹನುಮಂತಪ್ಪ ರನ್ನು ಯಾರಿಗೂ ಸ್ವಂತಕ್ಕೆ ಬಿಟ್ಟು ಕೊಟ್ಟಿಲ್ಲ ,ಈ ದೇಶದ ಜನರ ನಡೆನುಡಿಗಳಲ್ಲಿ ಬೆರೆತುಹೋಗಿದ್ದಾರೆ .

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...