Homeಚಳವಳಿಪತ್ರಕರ್ತ ಜುಬೇರ್‌ ಬಂಧನವನ್ನು ಖಂಡಿಸಿ, ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್

ಪತ್ರಕರ್ತ ಜುಬೇರ್‌ ಬಂಧನವನ್ನು ಖಂಡಿಸಿ, ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್

ಡಿಜಿಟಲ್ ಸುದ್ದಿ ಮಾಧ್ಯಮ ಸಂಸ್ಥೆಗಳ ಸಂಘಟನೆ DIGIPUB ಕೂಡ ಜುಬೇರ್‌ ಬಂಧನವನ್ನು ಖಂಡಿಸಿದೆ.

- Advertisement -
- Advertisement -

2018ರ ಟ್ವೀಟ್ ಒಂದಕ್ಕೆ ಸಂಬಂಧಿಸಿ ದಿಟ್ಟ ಪತ್ರಕರ್ತ, ಆಲ್ಟ್‌ನ್ಯೂಸ್ ಸಹ ಸಂಪಾದಕ ಮೊಹಮ್ಮದ್ ಜುಬೇರ್‌ರನ್ನು ಬಂಧಿಸಿರುವ ದೆಹಲಿ ಪೊಲೀಸರ ಕ್ರಮಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕೂಡ ಜುಬೇರ್‍ ಬಂಧನವನ್ನು ಖಂಡಿಸಿದ್ದು, ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿದೆ.

ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ’ಆಲ್ಟ್‌ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪದ ಮೇಲೆ ಬಂಧಿಸಿರುವುದು “ಅತ್ಯಂತ ಗೊಂದಲದ ಸಂಗತಿ” ಎಂದಿದೆ. ಜೊತೆಗೆ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ.

“ಸಮಾಜದಲ್ಲಿ ಅಶಾಂತಿಗೆ ಮತ್ತು ರಾಷ್ಟ್ರೀಯತಾವಾದಿ ಭಾವನೆಗಳನ್ನು ಕೆರಳಿಸುವ ಸಾಧನವಾಗಿ ತಪ್ಪು ಮಾಹಿತಿಯನ್ನು ಬಳಸುವವರ ವಿರುದ್ಧ ಆಲ್ಟ್‌ನ್ಯೂಸ್‌ ಎಚ್ಚರಿಕೆಯನ್ನು ಮೂಡಿಸಿದೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಎಡಿಟರ್ಸ್ ಗಿಲ್ಡ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಹರಡುವ ಆರೋಪದ ಮೇಲೆ ಜುಬೇರ್ ಮೇಲೆ ಪ್ರಕರಣ ದಾಖಲಾಗಿದೆ. 2020ರ ಪ್ರಕರಣದ ವಿಚಾರಣೆಗೆಂದು ಅವರನ್ನು ದೆಹಲಿ ಪೊಲೀಸರು ಕರೆಸಿದ್ದರು. ಆ ಪ್ರಕರಣದಲ್ಲಿ ಜುಬೇರ್ ಬಂಧನದಿಂದ ರಕ್ಷಣೆ ಪಡೆದಿದ್ದರು. ಆನಂತರ ಪೊಲೀಸರು 2018ರ ಟ್ವೀಟ್‌ ಆಧರಿಸಿ ಬಂಧಿಸಿದ್ದೇವೆ ಎಂದಿದ್ದಾರೆ.

“ಜುಬೇರ್ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಮತ್ತು 295 ರ ಅಡಿಯಲ್ಲಿ ಬಂಧಿಸಲಾಗಿದೆ. ಇದು ಅತ್ಯಂತ ಗೊಂದಲದ ಸಂಗತಿಯಾಗಿದೆ ಏಕೆಂದರೆ ಜುಬೇರ್ ಮತ್ತು ಅವರ ವೆಬ್‌ಸೈಟ್ ಆಲ್ಟ್‌ನ್ಯೂಸ್ ಕಳೆದ ಕೆಲವು ವರ್ಷಗಳಿಂದ ವಸ್ತುನಿಷ್ಠ ಮತ್ತು ವಾಸ್ತವಿಕ ರೀತಿಯಲ್ಲಿ, ನಕಲಿ ಸುದ್ದಿಗಳನ್ನು ಗುರುತಿಸುವಲ್ಲಿ ಮತ್ತು ತಪ್ಪು ಮಾಹಿತಿಯ ಪ್ರಚಾರಗಳನ್ನು ಹೊರಗೆಳೆದು ಅನುಕರಣೀಯ ಕೆಲಸಗಳನ್ನು ಮಾಡಿವೆ” ಎಂದಿದೆ. ಕೂಡಲೇ ದೆಹಲಿ ಪೊಲೀಸರು ಮೊಹಮ್ಮದ್ ಜುಬೇರ್‌ ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಇದಕ್ಕೂ ಮೊದಲು, ಡಿಜಿಟಲ್ ಸುದ್ದಿ ಮಾಧ್ಯಮ ಸಂಸ್ಥೆಗಳ ಸಂಘಟನೆ DIGIPUB ಜುಬೇರ್‌ ಬಂಧನವನ್ನು ಖಂಡಿಸಿ, ಅವರ ವಿರುದ್ಧದ ಪ್ರಕರಣವನ್ನು ತಕ್ಷಣವೇ ಹಿಂಪಡೆಯುವಂತೆ ದೆಹಲಿ ಪೊಲೀಸರಿಗೆ ಒತ್ತಾಯಿಸಿದೆ.

“ಪ್ರಜಾಪ್ರಭುತ್ವದಲ್ಲಿ, ಪ್ರತಿಯೊಬ್ಬ ವ್ಯಕ್ತಿಯು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಚಲಾಯಿಸುವ ಹಕ್ಕನ್ನು ಹೊಂದಿರುವಾಗ, ಇಂತಹ ಕಠಿಣ ಕಾನೂನುಗಳನ್ನು ಪತ್ರಕರ್ತರ ವಿರುದ್ಧ ಸಾಧನವಾಗಿ ಬಳಸುತ್ತಿರುವುದು ಅಸಹನೀಯವಾಗಿದೆ. ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವೆಂದು ಪರಿಗಣಿಸಲ್ಪಟ್ಟಿರುವ ಪತ್ರಕರ್ತರ ವಿರುದ್ಧ ಇಂತಹ ಕಠಿಣ ಕಾನೂನುಗಳನ್ನು ಸಾಧನವಾಗಿ ಬಳಸುವುದನ್ನು ನಿಲ್ಲಿಸಬೇಕು. ನಾವು ಜುಬೇರ್ ಜೊತೆ ನಿಲ್ಲುತ್ತೇವೆ” ಎಂದು DIGIPUB ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ಆರೋಪ: ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...