Homeಮುಖಪುಟನಾರ್ವೆ ಪತ್ರಕರ್ತೆಯ ಭಾರತ ಭೇಟಿಗೆ ತಡೆ : ಕಾರಣ ತಿಳಿಸುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್ ಆಫ್...

ನಾರ್ವೆ ಪತ್ರಕರ್ತೆಯ ಭಾರತ ಭೇಟಿಗೆ ತಡೆ : ಕಾರಣ ತಿಳಿಸುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ

- Advertisement -
- Advertisement -

ನಾರ್ವೆ ಪತ್ರಕರ್ತೆ ಹೆಲ್ಲೆ ಲಿಂಗ್ ಅವರ ಭಾರತ ಭೇಟಿಗೆ ಕೊನೆ ಕ್ಷಣದಲ್ಲಿ ತಡೆಯೊಡ್ಡಿರುವುದಕ್ಕೆ ಕಾರಣ ತಿಳಿಸುವಂತೆ ಪತ್ರಕರ್ತರ ಸಂಘ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಗುರುವಾರ (ನ.12) ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆ, ಭಾರತ ಸರ್ಕಾರದ ವರ್ತನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

“ಹೈದರಾಬಾದ್‌ನಲ್ಲಿ ಆಯೋಜಿಸಿರುವ ‘ಭಾರತ್ ಸಮ್ಮಿಟ್’ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಬೇಕಿತ್ತು. ಭಾರತಕ್ಕೆ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಹೊರಡುವ ಕೆಲವೇ ನಿಮಿಷಗಳ ಮೊದಲು, ತಮಗೆ ಭಾರತ ಪ್ರವೇಶಿಸಲು ಅನುಮತಿ ಇಲ್ಲ ಎಂದು ನಾರ್ವೆಯಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ತಿಳಿಸಲಾಯಿತು” ಎಂದು ಲಿಂಗ್ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿಕೊಂಡಿದ್ದಾರೆ. ಈ ವೀಸಾ ರದ್ದತಿಗೆ ಕಾರಣವೇನು ಎಂಬುದು ಇಜಿಐಗೆ ಅರ್ಥವಾಗುತ್ತಿಲ್ಲ. ಹೆಲ್ಲೆ ಲಿಂಗ್ ಒಬ್ಬ ಅಧಿಕೃತ ಮತ್ತು ಗೌರವಾನ್ವಿತ ಅಂತಾರಾಷ್ಟ್ರೀಯ ಪತ್ರಕರ್ತೆ. ಮೇ 2026ರಲ್ಲಿ ಓಸ್ಲೋದಲ್ಲಿ ನಡೆದ ಪತ್ರಿಕಾಗೋಷ್ಠಿಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆಯೊಂದನ್ನು ಕೇಳಿದ್ದೇ ಅವರ ‘ಅಪರಾಧ’ ಎಂದು ತೋರುತ್ತದೆ ಎಂದು ಇಜಿಐ ಹೇಳಿದೆ.

“ಇಂತಹ ಕ್ರಮಗಳು ಅಧಿಕಾರಶಾಹಿಯ ಅತಿಯಾದ ಹಸ್ತಕ್ಷೇಪವನ್ನು ಸೂಚಿಸುತ್ತವೆ ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ವರ್ಚಸ್ಸಿಗೆ ಅಪಾರ ಹಾನಿಯನ್ನುಂಟುಮಾಡುತ್ತವೆ. ವಾಕ್ ಸ್ವಾತಂತ್ರ್ಯವು ಯಾವುದೇ ಕ್ರಿಯಾಶೀಲ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ತತ್ವಗಳಲ್ಲಿ ಒಂದಾಗಿದೆ. ಇದು ಸಂವಿಧಾನದ ವಿಧಿ 19(1)(a) ರ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕು ಕೂಡ ಆಗಿದೆ” ಎಂದಿದೆ.

“ಹೆಲ್ಲೆ ಲಿಂಗ್ ಅವರ ವೀಸಾವನ್ನು ರದ್ದುಗೊಳಿಸಲು ಕಾರಣವೇನು ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕೆಂದು ಇಜಿಐ ಆಗ್ರಹಿಸುತ್ತದೆ. ಅಲ್ಲದೆ, ಈ ರದ್ದತಿಯನ್ನು ಹಿಂಪಡೆಯಬೇಕು ಮತ್ತು ಹೆಲ್ಲೆ ಲಿಂಗ್ ಅವರು ಭಾರತೀಯ ಜನರ ಮುಂದೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ನೀಡಬೇಕೆಂದು ಆಗ್ರಹಿಸುತ್ತದೆ” ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಳೆದ ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರ್ವೆಗೆ ಭೇಟಿ ನೀಡಿದ್ದಾಗ, ಅವರಿಗೆ ಪ್ರಶ್ನೆ ಕೇಳಿ ಸುದ್ದಿಯಾಗಿದ್ದ ಅಲ್ಲಿನ ಪತ್ರಕರ್ತೆ ಹೆಲ್ಲೆ ಲಿಂಗ್ ಅವರ ಭಾರತ ಭೇಟಿಗೆ ಕೊನೆ ಕ್ಷಣದಲ್ಲಿ ತಡೆಯೊಡ್ಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಗುರುವಾರ (ನ.11) ವಿಡಿಯೋ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹೆಲ್ಲೆ ಲಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ.

“ಬಹುಷ ನಾನು ಈ ಹಿಂದೆ ಪ್ರಧಾನಿ ಮೋದಿಯವರಿಗೆ ಪ್ರಶ್ನೆ ಕೇಳಿದ್ದಕ್ಕೆ ಅಥವಾ ಅವರ ಗೆಳೆಯರು ಎನ್ನಲಾದ ಅದಾನಿ ಮತ್ತು ಅಂಬಾನಿಯ ಬಗ್ಗೆ ಪ್ರಶ್ನಿಸಿದ್ದಕ್ಕೆ ನನ್ನ ಭಾರತ ಭೇಟಿಯನ್ನು ತಡೆದಿರಬಹುದು” ಎಂದಿದ್ದಾರೆ.

ಲಿಂಗ್ ಅವರು ವಿಡಿಯೋದಲ್ಲಿ ಮಾಹಿತಿ ಹಂಚಿಕೊಂಡ ಬಳಿಕ ಭಾರತ ಮಾತ್ರವಲ್ಲದೆ ಜಗತ್ತಿನಾದ್ಯಂತ ಇದು ಚರ್ಚೆಯ ವಿಷಯವಾಗಿದೆ. ಭಾರತದ ವಿಪಕ್ಷಗಳ ನಾಯಕರು ಈ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲು ಕ್ರಿಮಿನಲ್ ಪ್ರಕರಣಗಳ ಬಳಕೆ ಪ್ರಜಾಪ್ರಭುತ್ವಕ್ಕೆ ಕರಾಳ ದಿನ: ಬಾಂಬೆ ಹೈಕೋರ್ಟ್

ಮುಂಬೈ: ಜನರ ಮೂಲಭೂತ ಹಕ್ಕಾಗಿರುವ ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲು ಕ್ರಿಮಿನಲ್ ಪ್ರಕರಣಗಳನ್ನು ಅಸ್ತ್ರವಾಗಿ ಬಳಸಿದರೆ ಅದು ಪ್ರಜಾಪ್ರಭುತ್ವಕ್ಕೆ ದುಃಖದ ದಿನವಾಗಲಿದೆ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸಾರ್ವಜನಿಕ ಸಮಸ್ಯೆಗಳ ವಿರುದ್ಧ...

ಕುರ್ಚಿ ಹಾಕುವ ದಿನಗಳಿಂದಲೂ ಮಾಧ್ಯಮಗಳೊಂದಿಗೆ ದೀರ್ಘಕಾಲದ ಒಡನಾಟವಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ

ಪತ್ರಕರ್ತರ ಕಾರ್ಯಕ್ರಮಗಳಲ್ಲಿ ಅವರಿಗೆ ಕುರ್ಚಿ ಹಾಕುವ ಜವಾಬ್ದಾರಿ ನಿರ್ವಹಿಸುತ್ತಿದ್ದ ದಿನಗಳಿಂದಲೂ ಮಾಧ್ಯಮಗಳೊಂದಿಗೆ ತಮಗೆ ದೀರ್ಘಕಾಲದ ಸಂಬಂಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ (ನ.12) ಹೇಳಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಕರ್ತರಿಗಾಗಿ ಆಯೋಜಿಸಿದ್ದ...

ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧವೂ ಜನರು ಪ್ರತಿಭಟನೆ ನಡೆಸಬಹುದು: ಪ್ರಿಯಾಂಕಾ ಗಾಂಧಿ

ಪ್ರತಿಭಟನೆ ನಡೆಸುವ ಹಕ್ಕು ಸಂವಿಧಾನ ನೀಡಿರುವ ಮೂಲಭೂತ ಹಕ್ಕಾಗಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸುವವರೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ನೀತಿಗಳ ವಿರುದ್ಧವೂ ಜನರು ಹೋರಾಟ ನಡೆಸಲು ಸ್ವತಂತ್ರರು ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ...

ಎನ್‌ವಿಡಿಯಾ ಸಿಇಒ ವೈಯಕ್ತಿಕ ಸಂಬಂಧ ವಿವಾದ: ‘ಗೂಢಚಾರಿಕೆ ನಿರೂಪಣೆಗಳನ್ನು ಸೃಷ್ಟಿಸಿ ತಾಂತ್ರಿಕ ದಿಗ್ಬಂಧನ ಹೇರಬೇಡಿ’: ಅಮೆರಿಕಕ್ಕೆ ಚೀನಾ ಎಚ್ಚರಿಕೆ

ಅಮೆರಿಕವು ಚೀನಾದ ತಾಂತ್ರಿಕ ಪ್ರಗತಿಗೆ ಕಡಿವಾಣ ಹಾಕಲು ಗೂಢಚಾರಿಕೆಯ ಆರೋಪಗಳನ್ನು ನೆಪವಾಗಿ ಬಳಸುತ್ತಿದೆ ಎಂದು ಆರೋಪಿಸಿರುವ ಚೀನಾ, ಇಂತಹ ನಿರೂಪಣೆಗಳನ್ನು ಸೃಷ್ಟಿಸುವುದನ್ನು ನಿಲ್ಲಿಸುವಂತೆ ಅಮೆರಿಕವನ್ನು ಒತ್ತಾಯಿಸಿದೆ. ಎನ್‌ವಿಡಿಯಾ (Nvidia) ಸಿಇಒ ಜೆನ್ಸನ್ ಹುವಾಂಗ್...

ಯುಪಿ ವಿಧಾನಸಭೆ ಚುನಾವಣೆಗೆ ಓವೈಸಿ-ಆಝಾದ್ ಮೈತ್ರಿ : ಸಿಎಂ ಅಭ್ಯರ್ಥಿ ಘೋಷಣೆ

ವಿಧಾನಸಭೆ ಚುನಾವಣೆಗೆ ಮುನ್ನ ಉತ್ತರ ಪ್ರದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮತ್ತು ಚಂದ್ರಶೇಖರ್ ಆಝಾದ್ ಅವರ ಆಝಾದ್ ಸಮಾಜ ಪಕ್ಷ...

ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆಯ ಭಾರತ ಭೇಟಿಗೆ ತಡೆ : ಕೊನೆ ಕ್ಷಣದಲ್ಲಿ ವೀಸಾ ರದ್ದು

ಕಳೆದ ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರ್ವೆಗೆ ಭೇಟಿ ನೀಡಿದ್ದಾಗ, ಅವರಿಗೆ ಪ್ರಶ್ನೆ ಕೇಳಿ ಸುದ್ದಿಯಾಗಿದ್ದ ಅಲ್ಲಿನ ಪತ್ರಕರ್ತೆ ಹೆಲ್ಲೆ ಲಿಂಗ್ ಅವರ ಭಾರತ ಭೇಟಿಗೆ ಕೊನೆ ಕ್ಷಣದಲ್ಲಿ ತಡೆಯೊಡ್ಡಲಾಗಿದೆ ಎಂದು...

ಸ್ಥಳೀಯರ ಹೋರಾಟಕ್ಕೆ ಸಂದ ಜಯ: ‘ನಮ್ಮ ಮೆಟ್ರೋ’ ಪಿಂಕ್ ಲೈನ್‌ನ 3 ನಿಲ್ದಾಣಗಳ ಹೆಸರು ಬದಲಾವಣೆಗೆ ಕೇಂದ್ರದಿಂದ ಅನುಮೋದನೆ!

ಬೆಂಗಳೂರು: 'ನಮ್ಮ ಮೆಟ್ರೋ' ಗುಲಾಬಿ ಮಾರ್ಗದ (Pink Line) ಎಲಿವೇಟೆಡ್‌ ಕಾರಿಡಾರ್‌ನ ಮೂರು ಪ್ರಮುಖ ನಿಲ್ದಾಣಗಳ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ...

ಗಾಝಾದ ನಾಸರ್ ಆಸ್ಪತ್ರೆಯ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ : ಕನಿಷ್ಠ 6 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ದಕ್ಷಿಣ ಗಾಝಾದ ನಾಸರ್ ಆಸ್ಪತ್ರೆಯ ಕಟ್ಟಡವೊಂದರ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಖಾನ್ ಯೂನಿಸ್‌ನಲ್ಲಿರುವ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮೇಲೆ ದಾಳಿ...

ಮುಸ್ಲಿಂ ದಂಪತಿಗೆ ನಿಂದನೆ; ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಅಮಾನತು

ತಪ್ಪಾಗಿ ಬೇರೆ ಬಸ್ ಹತ್ತಿ ಇಳಿದ ಇಬ್ಬರು ಪ್ರಯಾಣಿಕರ ವಿರುದ್ಧ ಕೋಮುವಾದಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾದ ವೈರಲ್ ವಿಡಿಯೋ ಆಧರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಬಸ್ ಕಂಡಕ್ಟರ್ ಒಬ್ಬರನ್ನು...

ನೊಂದವರ ದನಿಯಾಗಿ, ಶೋಷಿತರ ಹೋರಾಟದ ಶಕ್ತಿಯಾಗಿ ಬೆಳೆದ ಶಿವರಾಮ ಮೋಘ: ಡಾ. ಪಿ. ನಂದಕುಮಾರ್

ಭಾರತದ ಸಾಂಸ್ಕೃತಿಕ ಚರಿತ್ರೆಯಲ್ಲಿ ಹೈದರಾಬಾದ್ ಕರ್ನಾಟಕ’ (ಕಲ್ಯಾಣ ಕರ್ನಾಟಕ) ಪ್ರದೇಶಕ್ಕೆ ವಿಶೇಷವಾದ ಸ್ಥಾನವಿದೆ. ಹಲವು ಸಾಂಸ್ಕೃತಿಕ ವಿಶೇಷತೆಯನ್ನು ಒಳಗೊಂಡಿರುವ ಈ ಪ್ರದೇಶವು ಕಲೆ, ಸಾಹಿತ್ಯ, ಸಂಸ್ಕೃತಿ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದೆ. ಶ್ರೀವಿಜಯ...