Homeಮುಖಪುಟಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

ಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ಖೇರಿಯಲ್ಲಿ ರೈತರ ಮೇಲೆ ಸಚಿವರ ಪುತ್ರ ಹಾಗೂ ಆತನ ಗೂಂಡಾಪಡೆ ವಾಹನಗಳನ್ನು ಹತ್ತಿಸಿ ಕೊಲ್ಲುವ ವೇಳೆ ಓರ್ವ ಪತ್ರಕರ್ತನೂ ಹತ್ಯೆಗೀಡಾಗಿದ್ದಾನೆ.

ವರದಿಗಾರಿಕೆಗೆ ತೆರಳಿದ್ದ ಪತ್ರಕರ್ತ ರಮಣ್‌ ಕಶ್ಯಪ್‌ ಅವರು ಭಾನುವಾರ ನಡೆದ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ಪತ್ರಕರ್ತನ ಸಾವಿನ ತನಿಖೆಗೆ ನ್ಯಾಯಾಂಗ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚಿಸಬೇಕು ಎಂದು ಭಾರತದ ಎಡಿಟರ್ಸ್ ಗಿಲ್ಡ್‌ ಒತ್ತಾಯಿಸಿದೆ.

ಘಟನೆಯ ತನಿಖೆ ನಡೆಸಲು ಕಶ್ಯಪ್‌ ಅವರ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪಡೆದುಕೊಳ್ಳಬೇಕು ಎಂದು ಪತ್ರಕರ್ತರ ಸಂಘ ಒತ್ತಾಯಿಸಿದೆ.

“ಭಯೋತ್ಪಾದಕರ ದಾಳಿ ಎಂದರೆ ರೈತರಲ್ಲಿ ಭಯವನ್ನು ಹುಟ್ಟಿಸುವುದು ಎಂದರ್ಥ. ಪತ್ರಕರ್ತ ಕಶ್ಯಪ್‌ ಅವರ ಕೊಲೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ” ಎಂದು ಗಿಲ್ಡ್‌ ಹೇಳಿಕೆ ನೀಡಿದೆ.

ಕಶ್ಯಪ್‌ ಅವರ ಸಾವಿನ ಕುರಿತು ವಿವಿಧ ಅಭಿಪ್ರಾಯಗಳಿವೆ. “ಸ್ಪಷ್ಟವಾಗುವ ಸಂಗತಿ ಎಂದರೆ ಪ್ರತಿಭಟನೆಗೆ ತೆರಳಿದ್ದ ರೈತರ ಮೇಲೆ ವಾಹನಗಳು ಹರಿದಾಗ, ರೈತರೊಂದಿಗೆ ತಪ್ಪಿಸಿಕೊಳ್ಳಲು ಯತ್ನಿಸುವಾಗ ಕಶ್ಯಪ್‌ ಅವರನ್ನೂ ಕೊಲ್ಲಲಾಗಿದೆ” ಎಂದು ಗಿಲ್ಡ್‌ ಅಭಿಪ್ರಾಯಪಟ್ಟಿದೆ.

ಕಶ್ಯಪ್‌ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವ ಜೊತೆಗೆ, ಕಶ್ಯಪ್‌ ಅವರ ಪತ್ನಿಗೆ ಸರ್ಕಾರ ಉದ್ಯೋಗವನ್ನು ನೀಡಬೇಕು ಎಂದು ಲಿಖಿಂಪುರ್‌ ಖೇರಿಯ ಪತ್ರಕರ್ತರು ಒತ್ತಾಯಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿರಿ: ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಸಚಿವರ ಪುತ್ರ ಕೃತ್ಯದಲ್ಲಿ ಭಾಗಿ: ಗಾಯಾಳು ರೈತ ಹೇಳಿಕೆ

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಎರಡು ದಿನಗಳ ನಂತರ ಗಾಯಾಳು ರೈತ ಮುಖಂಡ ಹೇಳಿಕೆ ನೀಡಿದ್ದು, ಪ್ರತಿಭಟನಾಕಾರರ ಮೇಲೆ ಹರಿದ ಕಾರನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಚಾಲನೆ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ರೈತ ಮುಖಂಡ ತೇಜಿಂದರ್ ಸಿಂಗ್ ವಿರ್ಕ್, 72 ಗಂಟೆಗಳ ನಂತರವೂ ಆರೋಪಿಗಳನ್ನು ಬಂಧಿಸದಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಭಾನುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಭೇಟಿ ಮತ್ತು ಉಪಮುಖ್ಯಮಂತ್ರಿ ಕೇಶವ್ ಶರ್ಮಾ ವಿರುದ್ಧ ನಡೆದ ಪ್ರತಿಭಟನೆಯನ್ನು ರೈತ ಮುಖಂಡ ಮತ್ತು ಎಸ್‌ಕೆಎಂ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಆಯೋಜಿಸಿದ್ದರು.

ಜೊತೆಗೆ ಮಾತನಾಡಿರುವ ತೇಜಿಂದರ್ ವಿರ್ಕ್, “ಇದು ನಮ್ಮನ್ನು ಕೊಲ್ಲುವ ಪಿತೂರಿಯಾಗಿತ್ತು. ಅಜಯ್ ಮಿಶ್ರಾ ಅವರು ಲಖಿಂಪುರವನ್ನು ಬಿಟ್ಟು ಉತ್ತರ ಪ್ರದೇಶದಲ್ಲಿ ರೈತರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೆವು. ನಾವು ಪೊಲೀಸರು ಮತ್ತು ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೆವು. ಅವರ ಮೇಲೆ ಕಪ್ಪು ಬಾವುಟ ಬೀಸಲು ಮಾರ್ಗದುದ್ದಕ್ಕೂ ನಿಂತಿದ್ದೆವು” ಎಂದಿದ್ದಾರೆ.

“ಅವರ ಮಾರ್ಗ ಬದಲಾಗಿದೆ ಎಂದು ನಮಗೆ ಮಧ್ಯಾಹ್ನ 3 ಗಂಟೆಗೆ ತಿಳಿಯಿತು. ನಾವು ಶಾಂತಿಯುತವಾಗಿ ಹಿಂತಿರುಗಲಾರಂಭಿಸಿದೆವು. ಇದ್ದಕ್ಕಿದ್ದಂತೆ, ವೇಗವಾಗಿ ಬಂದ ಕಾರುಗಳು ನಮಗೆ ಹಿಂದಿನಿಂದ ಡಿಕ್ಕಿ ಹೊಡೆದವು. ಕಾರು ಗಂಟೆಗೆ 100 ಕಿಮೀ ವೇಗದಲ್ಲಿತ್ತು. ಅವರು ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಕಾರು ಹರಿಸಿದರು. ಅಜಯ್ ಮಿಶ್ರಾ ಅವರ ಮಗ ಮತ್ತು ಅವನ ಸಹಚರರು ಕಾರಿನಲ್ಲಿದ್ದರು. ಆಗ ನನಗೆ ಪ್ರಜ್ಞೆ ತಪ್ಪಿತು” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿರುವ ರೈತ ಮುಖಂಡ, “ನಾನು ಸಾಕ್ಷಿ ಹೇಳಲು ಸಿದ್ಧನಿದ್ದೇನೆ. ಯೋಗಿ ಆದಿತ್ಯನಾಥ್ ಸರ್ಕಾರ ದಾಳಿಕೋರರಿಗೆ ಸಹಾಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಭಾನುವಾರದ ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಸದ್ಯ ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ವಕೀಲರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...