Homeಕರ್ನಾಟಕಶುಲ್ಕದ ನೆಪವೊಡ್ಡಿ ಶಿಕ್ಷಣ ವಂಚಿಸುವಂತಿಲ್ಲ: ಸಚಿವ ಹೆಚ್.ಸಿ ಮಹದೇವಪ್ಪ

ಶುಲ್ಕದ ನೆಪವೊಡ್ಡಿ ಶಿಕ್ಷಣ ವಂಚಿಸುವಂತಿಲ್ಲ: ಸಚಿವ ಹೆಚ್.ಸಿ ಮಹದೇವಪ್ಪ

- Advertisement -
- Advertisement -

ಇಂದು ರಾಜ್ಯದೆಲ್ಲೆಡೆ ಶಾಲೆಗಳು ಶಾಲಾ ಕಾಲೇಜುಗಳು ಆರಂಭವಾಗುತ್ತಿದ್ದು, ಶುಲ್ಕದ ನೆಪವೊಡ್ಡಿ ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ವಂಚಿಸುವಂತಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಕಳೆದ ಸರ್ಕಾರದ ಅವಧಿಯಲ್ಲಿ ಬಡ ಮಕ್ಕಳು ಶುಲ್ಕ ಪಾವತಿಸದೇ ಇದ್ದರೆ ಶಿಕ್ಷಣ ಪಡೆಯುವುದಕ್ಕೆ ಸಾಕಷ್ಟು ಅಡ್ಡಿ ಮಾಡಲಾಗುತ್ತಿತ್ತು. ಆದರೆ ಶಿಕ್ಷಣ ಎನ್ನುವುದು ಪ್ರಾಥಮಿಕವಾದ ಹಕ್ಕಾಗಿದ್ದು ಶುಲ್ಕದ ನೆಪವೊಡ್ಡಿ ಯಾವುದೇ ವಿದ್ಯಾರ್ಥಿಗೂ ಕೂಡಾ ಯಾರೂ ಸಹ ಶಿಕ್ಷಣದ ಸೌಲಭ್ಯವನ್ನು ವಂಚಿಸುವಂತಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಬಡ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡದೇ ತಮ್ಮದೇ ದುರಾಡಳಿತದಲ್ಲಿ ಮುಳುಗಿದ್ದ ಈ ಹಿಂದಿನ ಸರ್ಕಾರದ ಅರಾಜಕತೆಯನ್ನು ಖಂಡಿಸುತ್ತಾ ಎಲ್ಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಕಾಲಕ್ಕೆ ವಿದ್ಯಾರ್ಥಿ ವೇತನ ದೊರೆಯುವಂತೆ ಎಲ್ಲಾ ಅಧಿಕಾರಿಗಳಿಗೂ ಸಹ ಕಟ್ಟು ನಿಟ್ಟಿನ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿ ವೇತನದ ವಿಷಯದಲ್ಲಿ ತೊಂದರೆ ಉಂಟು ಮಾಡಿದರೆ ಅದನ್ನು ವಿದ್ಯಾರ್ಥಿಗಳು ನಮ್ಮ ಗಮನಕ್ಕೆ ತರಬೇಕು ಎಂದು ಈ ಮೂಲಕ ವಿನಂತಿಸುತ್ತೇನೆ. ಹಾಗೂ ಕಠಿಣ ಶ್ರಮದ ಮೂಲಕ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿ ಎಂದು ಮನದುಂಬಿ ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...