Homeಮುಖಪುಟಶಿಕ್ಷಣವು ಸಾಂವಿಧಾನಿಕ ಹಕ್ಕು: JNU ಹೋರಾಟಕ್ಕೆ ಬೆಂಬಲ ಸೂಚಿಸಿದ ಬಾಲಿವುಡ್‌ ನಟಿ ಸ್ವರ ಭಾಸ್ಕರ್ 

ಶಿಕ್ಷಣವು ಸಾಂವಿಧಾನಿಕ ಹಕ್ಕು: JNU ಹೋರಾಟಕ್ಕೆ ಬೆಂಬಲ ಸೂಚಿಸಿದ ಬಾಲಿವುಡ್‌ ನಟಿ ಸ್ವರ ಭಾಸ್ಕರ್ 

ಸಾಮಾನ್ಯವಾಗಿ ಶಿಕ್ಷಣವು ನಮಗೆ ಆದ್ಯತೆಯಾಗದಿದ್ದರೆ ಹೆಣ್ಣು ಮಕ್ಕಳ ಶಿಕ್ಷಣ ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು JNU ಹಿರಿಯ ವಿದ್ಯಾರ್ಥಿ ಸ್ವರ ಭಾಸ್ಕರ್‌ ನುಡಿದಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಸ್ವರ ಭಾಸ್ಕರ್ ಅವರು ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿವಾದಾತ್ಮಕ ಶುಲ್ಕ ಹೆಚ್ಚಳ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. JNUವಿನ ಹಳೆಯ ವಿದ್ಯಾರ್ಥಿಯೂ ಆಗಿರುವ ಅವರು ಶಿಕ್ಷಣವು ಸಾಂವಿಧಾನಿಕ ಹಕ್ಕು ಎಂದು ಸಾರಿದ್ದಾರೆ.

ಈ ಮೂಲಕ ಜೆಎನ್‌ಯು ವಿದ್ಯಾರ್ಥಿಗಳು ನಡೆಸುತ್ತಿರುವ ಶುಲ್ಕ ಹೆಚ್ಚಳದ ವಿರುದ್ಧದ ಹೋರಾಟಕ್ಕೆ ಅವರು ಬೆಂಬಲ ಸೂಚಿಸಿದ್ದಾರೆ.

“ನಾನು ತೆರಿಗೆ ಪಾವತಿಸುವವಳು. ಉನ್ನತ ಶಿಕ್ಷಣವನ್ನು ಸಬ್ಸಿಡಿಯಾಗಿ ನೀಡಲು ನನ್ನ ತೆರಿಗೆಗಳನ್ನು ಬಳಸುವುದಕ್ಕೆ ನನಗೆ ಸಂಪೂರ್ಣ ಒಪ್ಪಿಗೆಯಿದೆ. ಏಕೆಂದರೆ ಶಿಕ್ಷಣವು ಹಣವುಳ್ಳ ಕೆಲವೇ ಜನರಿಗೆ ಮಾತ್ರ ಕೈಗೆಟುವಂಥ ಸರಕು ಆಗಬಾರದು ಎಂದು ನಾನು ದೃಢವಾಗಿ ನಂಬುತ್ತೇನೆ. ಇದು ಎಲ್ಲಾ ಜನರಿಗೂ ಸಿಗಬೇಕೆ ಹೊರತು ಕೆಲವೇ ಜನರ ಸ್ವತ್ತಾಗಬಾರದು” ಎಂದಿದ್ದಾರೆ.

ಇದನ್ನೂ ಓದಿ: ಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ ಮಹತ್ವದ ಸಭೆ.

“ಶಿಕ್ಷಣವು ಒಂದು ಹಕ್ಕು, ಸಾಂವಿಧಾನಿಕ ಹಕ್ಕು, ಇದು ಉನ್ನತ ಮಟ್ಟದವರೆಗೂ ಉಚಿತವಾಗಿ ಸಿಗಬೇಕಾಗಿದೆ. ಸಮಾಜದಲ್ಲಿ ಸಾಮಾನ್ಯವಾಗಿ ಶಿಕ್ಷಣವು ನಮಗೆ ಆದ್ಯತೆಯಾಗದಿದ್ದರೆ ಹೆಣ್ಣು ಮಕ್ಕಳ ಶಿಕ್ಷಣ ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು 31 ವರ್ಷದ ಸ್ವರ ಭಾಸ್ಕರ್‌ ಈ ತಿಂಗಳ ಆರಂಭದಲ್ಲಿ ನವದೆಹಲಿಯಲ್ಲಿ ನಡೆದ ಎಸ್‌ಡಿಜಿಗಳ ಪರಿಣಾಮ ಶೃಂಗಸಭೆಯಲ್ಲಿ ಹೇಳಿದ್ದಾರೆ.

ನಿಸ್ಸಂದೇಹವಾಗಿ ಧೈರ್ಯಶಾಲಿ ಹೇಳಿಕೆಗಳಿಗೆ ಹೆಸರುವಾಸಿಯಾದ ಸ್ವರ ಭಾಸ್ಕರ್‌, ಸುಸ್ಥಿರ ಅಭಿವೃದ್ಧಿ ಗುರಿಗಳ (ಎಸ್‌ಡಿಜಿ) ಸಭೆಯಲ್ಲಿ ಲಿಂಗ ಸಮಾನತೆಯಿಂದ ಹಿಡಿದು ಆರೋಗ್ಯ ಮತ್ತು ಶಿಕ್ಷಣದವರೆಗೆ ವ್ಯಾಪಕ ವಿಷಯಗಳ ಕುರಿತು ಮಾತನಾಡಿದ್ದಾರೆ.

ಈ ಹಿಂದೆಯು ಸಹ ಸ್ವರ ಭಾಸ್ಕರ್‌ ಹಲವು ವಿಷಯಳ ಪರವಾಗಿ ಮಾತಾಡಿದ್ದಲ್ಲದೇ ಕಳೆದ ಲೋಕಸಭೆ ಚುನಾವಣೆ ವೇಳೆ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ್ತು ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್‌ ಪರವಾಗಿ ಪ್ರಚಾರ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...