Homeಕರ್ನಾಟಕರಾಜ್ಯದ ಮಕ್ಕಳ ಭವಿಷ್ಯ ಕಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್‌: ಬಹುತ್ವ ಕರ್ನಾಟಕ ಆಕ್ರೋಶ

ರಾಜ್ಯದ ಮಕ್ಕಳ ಭವಿಷ್ಯ ಕಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್‌: ಬಹುತ್ವ ಕರ್ನಾಟಕ ಆಕ್ರೋಶ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, ಕರ್ನಾಟಕದ ಮಕ್ಕಳ ಭವಿಷ್ಯವನ್ನು ಕಸಿದುಕೊಂಡಿದ್ದಾರೆ ಎಂದು ‘ಬಹುತ್ವ ಕರ್ನಾಟಕ’ ವೇದಿಕೆಯು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದೆ. ಅವರು ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಅವರನ್ನು ಶಾಸಕ ಸ್ಥಾನದಿಂದ ಅಮಾನ್ಯಗೊಳಿಸಬೇಕು ಎಂದು ವೇದಿಕೆ ಸೋಮವಾರ ಆಗ್ರಹಿಸಿದೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ‘ಬಹುತ್ವ ಕರ್ನಾಟಕ’ ವೇದಿಕೆಯು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂಬ ಒತ್ತಾಯಕ್ಕೆ 6 ಕಾರಣಗಳನ್ನು ನೀಡಿದೆ. ಸಚಿವರು ತಮ್ಮ ಪಾತ್ರವನ್ನು ಸಕ್ರಿಯವಾಗಿ ಪಾಲಿಸಲು ವಿಫಲರಾಗಿದ್ದು, ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಅದು ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೊರೊನಾ ಬಿಕ್ಕಟ್ಟಿನ ಪರಿಸ್ಥಿತಿಯಿಂದಲೂ ಸತತವಾಗಿ ಮಕ್ಕಳ ಶಿಕ್ಷಣವನ್ನು ಪಣಕ್ಕೆ ಒಡ್ಡಿದ ಸಚಿವರು ರಾಜ್ಯದ ಶಿಕ್ಷಣವನ್ನು ಬಿಕ್ಕಟಿನಲ್ಲಿ ಸಿಲುಕಿಸಿದ್ದಾರೆ. ಹಾಗೆಯೇ ಅಪೌಷ್ಠಿಕಾಂಶ ಮಟ್ಟ ಹೆಚ್ಚುತ್ತಿದ್ದರೂ ಅದನ್ನು ನಿಯಂತ್ರಿಸಲು ಯಾವುದೇ ಕ್ರಮವನ್ನು ತೆಗೆದುಕೊಂಡಿರುವುದಿಲ್ಲ ಮತ್ತು ಶಿಕ್ಷಣವನ್ನು ಬ್ರಾಹ್ಮಣವಾದಿ ಹಿಡಿತಕ್ಕೆ ಸಿಲುಕಿಸುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ” ಎಂದು ಬಹುತ್ವ ಕರ್ನಾಟಕ ಆಕ್ರೊಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರೂ ಟಾರ್ಗೆಟ್‌?

ಸಚಿವರ ರಾಜೀನಾಮೆಗೆ ‘ಬಹುತ್ವ ಕರ್ನಾಟಕ’ ನೀಡಿರುವ ಕಾರಣಗಳು:

  • ಕೋವಿಡ್‌ -19 ಶಿಕ್ಷಣದ ಮೇಲೆ ಬೀರಿದೆ ಪರಿಣಾಮವನ್ನು ತಡೆಗಟ್ಟಲು ವಿಫಲರಾಗಿದ್ದಾರೆ.
    ಕೋವಿಡ್‌ – 19 ತಡೆಗಟ್ಟಲು ಜಾರಿಗೊಳಿಸಿದ್ದ ಲಾಕ್‌ ಡೌನ್‌ ಸಮಯದಲ್ಲಿ ಲಕ್ನಾ೦ತರ ಮಕ್ಕಳು ಎರಡು ವರ್ಷದ ಶಿಕ್ಷಣವನ್ನು ಕಳೆದುಕೂಂಡಿದ್ದಾರೆ. ಈ ಕಾರಣ ಹಲವಾರು ಮಕ್ಕಳು ಶಿಕ್ಷಣಕ್ಕೆ ತಿಲಾಂಜಲಿ ನೀಡುವ ಪರಿಸ್ಥಿತಿಗೆ ನೂಕಲಾಗಿದೆ ಮತ್ತು ಇಂತಹ ಮಕ್ಕಳನ್ನು ಶಾಲೆಗಳಿಗೆ ವಾಪಸ್ಸು ಕರೆತರಲು ಯಾವುದೇ ರೀತಿಯ ಕ್ರಮವನ್ನು ಜರುಗಿಸಿರುವುದಿಲ್ಲ. ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೊಳಿಸದೆ ಸರ್ಕಾರವು ತನ್ನ ಜವಾಬ್ದಾರಿಗಳನ್ನು ಕೈಬಿಟ್ಟಂತಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಸಾವಿರಾರು ಮಕ್ಕಳು ಶಾಲೆಯನ್ನು ಬಿಟ್ಟಿದ್ದಾರೆ. ಈ ನಿಟ್ಟಿನಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ಒದಗಿಸಲು ಸರ್ಕಾರವು ವಿಫಲವಾಗಿದೆ. ಈ ಮಕ್ಕಳ ಕಲಿಕೆಗೆ ಧಕ್ಕೆ ಉಂಟಾಗುವುದಿಲ್ಲವೇ?
    ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಶಿಕ್ಷಕಿಯರನ್ನು ನೇಮಿಸಬೇಕೆಂದು ಇದ್ದರೂ, ಶಿಕ್ಷಕಿಯರ, ಆಡಳಿತ ಸಿಬ್ಬಂದಿಗಳ ನೇಮಕಾತಿ ಮಾಡದೆ, ಮಕ್ಕಳಿಗೆ ದೊರಕುವ ಕಲಿಯುವಿಕೆಗೆ ಧಕ್ಕೆ ಉ೦ಟು ಮಾಡಲಾಗಿದೆ. ಸರ್ಕಾರವು ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.
  • ಅಪೌಷ್ಠಿಕತೆಯನ್ನು ತಡೆಗಟ್ಟಲು ವಿಫಲರಾಗಿದ್ದಾರೆ.
    5ನೇ ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಶೇಖಡಾ 35.4 ಮಕ್ಕಳು ಕುಂಠಿತವಾಗಿದ್ದಾರೆ ಮತ್ತು ಶೇಖಡಾ 32.9 ಮಕ್ಕಳು ಕಡಿಮೆ ತೂಕ ಹೊಂದಿರುತ್ತಾರೆ ಎಂದು ವರದಿ ಆಗಿದೆ. ಇದನ್ನು ತಡೆಗಟ್ಟಲು ಮಕ್ಕಳಿಗೆ ಪ್ರತಿ ದಿನ ಮೊಟ್ಟೆ ನೀಡಬೇಕ೦ದು ರಾಷ್ಟ್ರೀಯ ಪೌಷ್ಠಿಕಾಂಶ ಸಂಸ್ಥೆ ಮತ್ತು ಹಲವಾರು ಪೌಷಿಕ ತಜ್ಞರು ಅಭಿಪ್ರಾಯಿಸಿದ್ದಾರೆ. ಹೀಗಿದ್ದರೂ ಸಹ ಸಚಿವ ನಾಗೇಶ್‌ ಅವರ ಸಚಿವಾಲಯವು ಅಪೌಷ್ಟಿಕ ಮಕ್ಕಳಿಗೆ ವಾರಕ್ಕೆ 5 ಬಾರಿ ಮೊಟ್ಟೆ ನೀಡುವಲ್ಲಿ ವಿಫಲರಾಗಿದ್ದಾರೆ. ಇದಕ್ಕೆ ಕಾರಣ ಧಾರ್ಮಿಕ ಗುಂಪುಗಳ ಜಾತೀಯ ಮನೋಭಾವನೆ ಒಂದೇ ಆಗಿದೆ.4ನೇ ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಸಮೀಕ್ಷೆಯ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ, ಶಾಲಾ ಮಕ್ಕಳಿಗೆ ಮೊಟ್ಟೆ ನೀಡಿದರೆ ಶೇಖಡಾ 83 ಜನರಿಗೆ ಯಾವುದೇ ರೀತಿಯ ಸಾಂಸ್ಕೃತಿಕ ಅಥವಾ ಧಾರ್ಮಿಕ ತಕರಾರು ಇರುವುದಿಲ್ಲ ಎಂದು ವರದಿ ಮಾಡಲಾಗಿದೆ. ಹೀಗಿದ್ದರೂ ಸಹ ಇಡೀ ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲಿ ಮಾತ್ರ ಬಿಸಿ ಊಟದೊಂದಿಗೆ ಮೊಟ್ಟೆ ನೀಡದಿರುವ ರಾಜ್ಯವಾಗಿದೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಗೆ ವಿರೋಧ: ನಾಳೆ ಕುಪ್ಪಳ್ಳಿಯಿಂದ ತೀರ್ಥಹಳ್ಳಿಗೆ ಪಾದಯಾತ್ರೆ – ಕಿಮ್ಮನೆ ರತ್ನಾಕರ್

  • ಶಿಕ್ಷಣ ಹಕ್ಕಿನ ನಿರಾಕರಣೆ
    ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪನ್ನು ಉದ್ದೇಶಪೂರ್ವಕವಾಗಿ ಸರಿಯಾಗಿ ಜಾರಿಗೊಳಿಸದೆ ತಮ್ಮದೇ ಇಲಾಖೆಯ ಆದೇಶದ ತದ್ವಿರುದ್ಧವಾಗಿ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರನ್ನು ಅವರ ಪರೀಕ್ಷೆ ಬರೆಯದ ಹಾಗೆ ಮಾಡಿ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಬಹುಸಂಖ್ಯಾತ ಸಮುದಾಯದ ಯುವಕರು ಕಾನೂನನ್ನುತಮ್ಮ ಕೈಗೆತ್ತಿಕೊಂಡು ಮುಸಲ್ಮಾನ ವಿದ್ಯಾರ್ಥಿನಿಯರನ್ನು ಶಿಕ್ಷಣ ಸಂಸ್ಥೆಗಳಲ್ಲಿ ಹೀಯಾಳಿಸಿ ಕಿರುಕುಳ ನೀಡಿದ ವಿರುದ್ಧ ಯಾವುದೇ ರೀತಿಯ ಕ್ರಮ ಜರುಗಿಸುವುದರಲ್ಲಿ ವಿಫಲರಾಗಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಂಸೆ ಮತ್ತು ತಾರತಮ್ಯವನ್ನು ರೂಢಿಗತಗೊಳಿಸಲಾಗಿದೆ.ಒಂದೇ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಎಲ್ಲಾ ಧರ್ಮದ ವಿದ್ಯಾರ್ಥಿಗಳ ಮಧ್ಯೆ ಸೌಹಾರ್ದತೆಯನ್ನು ಮುರಿಯಲು ಇವರೇ ಕಾರಣರಾಗಿರುತ್ತಾರೆ. ಮುಸಲ್ಮಾನ ವಿದ್ಯಾರ್ಥಿನಿಯರನ್ನು ಸಮರ್ಥಿಸಿಕೊಂಡ ಶಿಕ್ಷಕಿಯರ ವಿರುದ್ಧ ಅಪರಾಧಿಕ ಕ್ರಮ ಜರುಗಿಸುವ ಬೆದರಿಕೆಯನ್ನು ಒಡ್ಡಲಾಗಿದೆ. ಹೊಸ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ವಿರುದ್ಧ ಅಮಾನತುಗೊಳಿಸುವಿಕೆ, ಹಿಂಸೆ ಮತ್ತು ಸೌಹಾರ್ದತೆ ಮುರಿಯುವ ಕಾರ್ಯ ಚಟುವಟಿಕೆಗಳು ಕಂಡುಬರುತ್ತಿವೆ ಮತ್ತು ಅಹಿತಕಾರಿ ವಾತಾವರಣವನ್ನು ಸೃಷ್ಟಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಶಿಕ್ಷಣವನ್ನು ನಿರಾಕರಿಸಿದ್ದ ಏಕೈಕ ಸಚಿವರು ಇವರಾಗಿದ್ದಾರೆ.
  • ಪಠ್ಯಪುಸ್ತಕ ಪರಿಷ್ಕರಣೆ
    ಪಠ್ಯಪುಸ್ತಕಗಳು, ಪ್ರಜಾಪ್ರಭುತ್ವದಲ್ಲಿ ಸಕ್ರಿಯ ನಾಗರಿಕರಾಗಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
    ನೀಡಬೇಕು. ಅವೈಜ್ಞಾನಿಕ ಮತ್ತು ಜಾತಿವಾದಿ ಪಠ್ಯಪುಸ್ತಕ ಪರಿಷ್ಕರಣೆ ಪ್ರಕ್ರಿಯೆಯು ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್‌ 29 ರ ಉಲ್ಲಂಘನೆಯಾಗಿದೆ. 2005 ರ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು (National Curriculum Framework) ಭಾರತವು ಹಲವಾರು ಪ್ರಾದೇಶಿಕ ಮತ್ತು ಸ್ಥಳೀಯ ಸಂಸ್ಕೃತಿಗಳಿಂದ ಮಾಡಲ್ಪಟ್ಟ ಬಹುಸಂಸ್ಕೃತಿಯ ಸಮಾಜವಾಗಿದ್ದು, ಎಲ್ಲಾ ಗುಂಪುಗಳು ಸಹಬಾಳ್ವೆಯಿಂದ ಬಾಳಲು ಹಾಗು ಬೆಳೆಯಲು ಸಮಾನ ಹಕ್ಕುಗಳನ್ನು ಹೊಂದಿವೆ ಹಾಗೂ ಶಿಕ್ಷಣ ವ್ಯವಸ್ಥೆಯು ಸಾಂಸ್ಕೃತಿಕ ಬಹುತ್ವಕ್ಕೆ ಪ್ರತಿಕ್ರಿಯಿಸುವ ಅಗತ್ಯವಿದೆ ಎಂದು ಸ್ಪಷ್ಟವಾಗಿ ಹೇಳುತ್ತದೆ.ದಲಿತ ಲೇಖಕರು, ಪಿ.ಲಂಕೇಶ್‌, ಸಾರಾ ಅಬೂಬಕರ್‌ ಅವರ ಕೃತಿಗಳನ್ನು ತೆಗೆದುಹಾಕುವ ಮೂಲಕ ಮತ್ತು ಡಾ.ಅ೦ಬೇಡ್ಕರ್‌ ಮತ್ತು ಬಸವಣ್ಣ ಅವರಿಗೆ ಸಂಬಂಧಿಸಿದ ಐತಿಹಾಸಿಕ ಸಂಗತಿಗಳನ್ನು ತಿರುಚಿ ಪಠ್ಯಪುಸ್ತಕ ಪರಿಷ್ಕರಣೆ ಪ್ರಕ್ರಿಯೆಯು ಎನ್‌ಸಿಎಫ್‌ ಮತ್ತು ಆರ್‌ಟಿಇ ಕಾಯ್ದೆಯನ್ನು ಉಲ್ಲಂಘಿಸುತ್ತದೆ.

ಇದನ್ನೂ ಓದಿ: ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ಬಿಜೆಪಿಯ ವಿನಯ್‌ ಬಿದರೆ ಸಮರ್ಥನೆ

  • ಪಠ್ಯಪುಸ್ತಕ ವಿತರಣೆಯಲ್ಲಿ ವಿಳಂಬ
    ಸಚಿವ ನಾಗೇಶ್‌ ಅವರು ಶೈಕ್ಷಣಿಕ ವರ್ಷದಲ್ಲಿ ಒಂದು ತಿಂಗಳಿಗಿಂತ ಹೆಚ್ಚು ಕಾಲ ಪಠ್ಯಪುಸ್ತಕಗಳ ವಿತರಣೆಯನ್ನು ವಿಳಂಬಗೊಳಿಸಿದ್ದಾರೆ. ಇದು 2023 ರಲ್ಲಿ ತಮ್ಮ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಮೇಲೆ ಬೀರುವ ದುಷ್ಪರಿಣಾಮಗಳನ್ನು ಕಾಳಜಿ ವಹಿಸಿಲ್ಲ.
  • ಸಾಂವಿಧಾನಿಕ ಪ್ರತಿಜ್ಞೆಯನ್ನು ಅನುಸರಿಸಲು ವಿಫಲತೆ
    ಭಾರತದ ಸಂವಿಧಾನದ ಮೌಲ್ಯಗಳಿಗೆ ನಂಬಿಕೆಯಿರಿಸಿ ಅದರಂತೆ ನಡೆದುಕೊಳ್ಳುವರೆಂದು ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಆರ್‌ಟಿಇ ಕಾಯಿದೆಗೆ ಬದ್ಧವಾಗದೆ, ಯುವ ವಿದ್ಯಾರ್ಥಿಗಳಿಗೆ ನಿರ್ಣಾಯಕ ಪೋಷಕಾಂಶಗಳನ್ನು ನಿರಾಕರಿಸುವ ಮೂಲಕ ಮತ್ತು ಶೈಕ್ಷಣಿಕ ಜಾಗದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಹೊರಗಿಡುವ ಮೂಲಕ, ನ್ಯಾಯಾಲಯದ ತೀರ್ಪನ್ನು ತಪ್ಪಾಗಿ ಅರ್ಥ್ಯಸುವ ಮೂಲಕ ಬಿ.ಸಿ.ನಾಗೇಶ್‌‌ ಅವರು ಸಂವಿಧಾನದ ಆಶಯಗಳಿಗೆ, ಮೌಲ್ಯಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದು ಅವರ ಪ್ರಮಾಣ ವಚನದ ಉಲ್ಲಂಘನೆಯಾಗಿದೆ.

ಬಹುತ್ವ ಕರ್ನಾಟಕದ ಒತ್ತಾಯಗಳು

  • ಸಚಿವ ಬಿ ಸಿ ನಾಗೇಶ್‌ ಅವರು ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಅವರನ್ನು ಶಾಸಕ ಸ್ಥಾನದಿಂದ ಅಮಾನ್ಯಗೊಳಿಸಬೇಕು.
  • ಸರ್ಕಾರವು ಎಲ್ಲಾ ಜಿಲ್ಲೆಗಳ ಸರ್ಕಾರಿ ಶಾಲೆಗಳಿಗೆ ವಾರದಲ್ಲಿ 5 ದಿನ ಮೊಟ್ಟೆಗಳನ್ನು ನೀಡಬೇಕು.
  • ಎಲ್ಲಾ ಮಕ್ಕಳು ಶಾಲೆಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ವಿಶೇಷ ಕ್ರಮಗಳನ್ನು ಜಾರಿಗೊಳಿಸಬೇಕು ಮತ್ತು ಕಲಿಕೆಯ ಅಂತರವನ್ನು ಖಚಿತಪಡಿಸಿಕೊಳ್ಳಲು ತಮಿಳುನಾಡಿನಂತೆ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು.

ಇದನ್ನೂ ಓದಿ: ಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

  • ಮುಸ್ಲಿಂ ವಿದ್ಯಾರ್ಥಿನಿಯರು ಕಿರುಕುಳಕ್ಕೆ ಒಳಗಾಗದಂತೆ ಮತ್ತು ಅವರ ಶಿಕ್ಷಣದ ಹಕ್ಕು ಮತ್ತು ಇತರ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ಖಚಿತಪಡಿಸಿಕೊಳ್ಳಬೇಕು.
  • ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿ೦ಂಪಡಯಬೇಕು ಮತ್ತು ಹಳೆಯ ಪಠ್ಯಪುಸ್ತಕಗಳನ್ನು ತಕ್ಷಣವೇ ನೀಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...