ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮೂಲಕ ಪರೀಕ್ಷೆಗಳನ್ನು ಪಾರದರ್ಶಕ ಮತ್ತು ನ್ಯಾಯಯುತವಾಗಿ ನಡೆಸಲು ಶಿಕ್ಷಣ ಸಚಿವಾಲಯ ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ ರಾಧಾಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದೆ. ಸಮಿತಿ ರಾಧಾಕೃಷ್ಣನ್ ಸೇರಿದಂತೆ ಏಳು ಸದಸ್ಯರನ್ನು ಒಳಗೊಂಡಿದೆ.
ಪರೀಕ್ಷಾ ಪ್ರಕ್ರಿಯೆಯ ಸುಧಾರಣೆಗಳನ್ನು ಶಿಫಾರಸು ಮಾಡುವುದು, ಮಾಹಿತಿ ಭದ್ರತೆಯನ್ನು ಉತ್ತಮಪಡಿಸಿಕೊಳ್ಳುವುದು ಹೇಗೆ ಮತ್ತು ಎನ್‌ಟಿಎಯ ರಚನೆ ಮತ್ತು ಕಾರ್ಯನಿರ್ವಹಣೆಯನ್ನು ಸುಧಾರಿಸುವ ಕುರಿತು ಸಮಿತಿಯು ಸಚಿವಾಲಯಕ್ಕೆ ತಿಳಿಸಲಿದೆ.
Ministry of Education constitutes a High-Level Committee of Experts under the chairmanship of Dr. K. Radhakrishnan, Former Chairman, ISRO and Chairman BoG, IIT Kanpur, to ensure transparent, smooth and fair conduct of examinations.
The Committee to make recommendations on…
— Ministry of Education (@EduMinOfIndia) June 22, 2024
ಡಾ. ಕೆ ರಾಧಾಕೃಷ್ಣನ್ ಮುಖ್ಯಸ್ಥರಾಗಿರುವ ಉನ್ನತ ಮಟ್ಟದ ತಜ್ಞರ ಸಮಿತಿಯಲ್ಲಿ ದೆಹಲಿ ಏಮ್ಸ್‌ನ ಮಾಜಿ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ . ಬಿ.ಜೆ.ರಾವ್, ಐಐಟಿ ಮದ್ರಾಸ್‌ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಪ್ರೊ. ರಾಮಮೂರ್ತಿ ಕೆ, ಕರ್ಮಯೋಗಿ ಭಾರತ್ ಮಂಡಳಿಯ ಸದಸ್ಯ ಪಂಕಜ್ ಬನ್ಸಾಲ್, ಐಐಟಿ ದೆಹಲಿಯ ವಿದ್ಯಾರ್ಥಿ ವ್ಯವಹಾರಗಳ ಡೀನ್ ಪ್ರೊ. ಆದಿತ್ಯ ಮಿತ್ತಲ್, ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಗೋವಿಂದ್ ಜೈಸ್ವಾಲ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ಸಮಿತಿಯು ಎರಡು ತಿಂಗಳ ಒಳಗಾಗಿ ತನ್ನ ವರದಿ ಸಲ್ಲಿಸುವಂತೆ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : 6 ಮಂದಿಯ ಬಂಧನ


