Homeಮುಖಪುಟಸ್ಪರ್ಧಾತ್ಮಕ ಪರೀಕ್ಷೆಗಳ ಸುಧಾರಣೆಗೆ 7 ಸದಸ್ಯರ ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಸ್ಪರ್ಧಾತ್ಮಕ ಪರೀಕ್ಷೆಗಳ ಸುಧಾರಣೆಗೆ 7 ಸದಸ್ಯರ ಸಮಿತಿ ರಚಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮೂಲಕ ಪರೀಕ್ಷೆಗಳನ್ನು ಪಾರದರ್ಶಕ ಮತ್ತು ನ್ಯಾಯಯುತವಾಗಿ ನಡೆಸಲು ಶಿಕ್ಷಣ ಸಚಿವಾಲಯ ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ ರಾಧಾಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದೆ. ಸಮಿತಿ ರಾಧಾಕೃಷ್ಣನ್ ಸೇರಿದಂತೆ ಏಳು ಸದಸ್ಯರನ್ನು ಒಳಗೊಂಡಿದೆ.

ಪರೀಕ್ಷಾ ಪ್ರಕ್ರಿಯೆಯ ಸುಧಾರಣೆಗಳನ್ನು ಶಿಫಾರಸು ಮಾಡುವುದು, ಮಾಹಿತಿ ಭದ್ರತೆಯನ್ನು ಉತ್ತಮಪಡಿಸಿಕೊಳ್ಳುವುದು ಹೇಗೆ ಮತ್ತು ಎನ್‌ಟಿಎಯ ರಚನೆ ಮತ್ತು ಕಾರ್ಯನಿರ್ವಹಣೆಯನ್ನು ಸುಧಾರಿಸುವ ಕುರಿತು ಸಮಿತಿಯು ಸಚಿವಾಲಯಕ್ಕೆ ತಿಳಿಸಲಿದೆ.

ಡಾ. ಕೆ ರಾಧಾಕೃಷ್ಣನ್ ಮುಖ್ಯಸ್ಥರಾಗಿರುವ ಉನ್ನತ ಮಟ್ಟದ ತಜ್ಞರ ಸಮಿತಿಯಲ್ಲಿ ದೆಹಲಿ ಏಮ್ಸ್‌ನ ಮಾಜಿ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ . ಬಿ.ಜೆ.ರಾವ್, ಐಐಟಿ ಮದ್ರಾಸ್‌ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಪ್ರೊ. ರಾಮಮೂರ್ತಿ ಕೆ, ಕರ್ಮಯೋಗಿ ಭಾರತ್ ಮಂಡಳಿಯ ಸದಸ್ಯ ಪಂಕಜ್ ಬನ್ಸಾಲ್, ಐಐಟಿ ದೆಹಲಿಯ ವಿದ್ಯಾರ್ಥಿ ವ್ಯವಹಾರಗಳ ಡೀನ್ ಪ್ರೊ. ಆದಿತ್ಯ ಮಿತ್ತಲ್, ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಗೋವಿಂದ್ ಜೈಸ್ವಾಲ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಸಮಿತಿಯು ಎರಡು ತಿಂಗಳ ಒಳಗಾಗಿ ತನ್ನ ವರದಿ ಸಲ್ಲಿಸುವಂತೆ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : 6 ಮಂದಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...