Homeಕರ್ನಾಟಕ‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

ಇಬ್ಬರು ಬಿಜೆಪಿ ಸಚಿವರು ಶಾಲೆಗಳಿಗೆ ಅಕ್ಷರಶಃ ಹಾನಿಯನ್ನುಂಟುಮಾಡಿದ್ದಾರೆ ಎಂದು ಪತ್ರದಲ್ಲಿ ದೂರಲಾಗಿದೆ

- Advertisement -
- Advertisement -

ರಾಜ್ಯದ ಸುಮಾರು 13,000 ಶಾಲೆಗಳನ್ನು ಪ್ರತಿನಿಧಿಸುವ ಎರಡು ಸಂಘಗಳು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ಸ್‌‌ ಮತ್ತು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘವು, ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ಪ್ರಮಾಣ ಪತ್ರ ನೀಡಲು ರಾಜ್ಯ ಶಿಕ್ಷಣ ಇಲಾಖೆಯು ಲಂಚಕ್ಕೆ ಬೇಡಿಕೆಯಿಡುತ್ತಿರುವ ಆರೋಪದ ಕುರಿತು ಪರಿಶೀಲಿಸುವಂತೆ ಪತ್ರ ಬರೆದು ಪ್ರಧಾನಿ ಮೋದಿಯನ್ನು ಒತ್ತಾಯಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವೈಜ್ಞಾನಿಕ, ತರ್ಕರಹಿತ, ತಾರತಮ್ಯ ಮತ್ತು ಅನುಸರಣೆಯ ಮಾನದಂಡಗಳನ್ನು ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಮಾತ್ರ ಅನ್ವಯಿಸಲಾಗುತ್ತಿದ್ದು, ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ” ಎಂದು ಪತ್ರವು ಆರೋಪಿಸಿದೆ.

ಇದನ್ನೂ ಓದಿ: ಶಿಕ್ಷಣವನ್ನು ವೈದಿಕಗೊಳಿಸುವ ಜಾಗತಿಕ ಹುನ್ನಾರ

ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಅನೇಕ ದೂರುಗಳು ಮತ್ತು ಮನವಿಗಳನ್ನು ನೀಡಿದರೂ ಅವರು ಅದನ್ನು ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಸಂಘಗಳು ಹೇಳಿಕೊಂಡಿದ್ದು, ಸಚಿವರ ರಾಜೀನಾಮೆಗೆ ಒತ್ತಾಯಿಸಿವೆ.

“ಶಿಕ್ಷಣ ಸಚಿವಾಲಯವು ಇಡೀ ವ್ಯವಸ್ಥೆಯ ದಯನೀಯ ಪರಿಸ್ಥಿತಿಯನ್ನು ಆಲಿಸಲು ಮತ್ತು ಅರ್ಥಮಾಡಿಕೊಳ್ಳಲು ಹಾಗೂ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಯಾವುದೆ ಕ್ರಮಕೈಗೊಳ್ಳುತ್ತಿಲ್ಲ. ಹೆಚ್ಚು ಹೆಚ್ಚು ಹೂಡಿಕೆದಾರರಿಗೆ ಅವಕಾಶ ನೀಡುವ ಮೂಲಕ ಇಬ್ಬರು ಬಿಜೆಪಿ ಸಚಿವರು ಅಕ್ಷರಶಃ ಶಿಕ್ಷಣವನ್ನು ವ್ಯಾಪಾರೀಕರಿಸುವ ಶಾಲೆಗಳಿಗಿಂತ ಬಜೆಟ್ ಶಾಲೆಗಳಿಗೆ ಹೆಚ್ಚಿನ ಹಾನಿಯನ್ನುಂಟುಮಾಡಿದ್ದಾರೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಹೊಸ ಶೈಕ್ಷಣಿಕ ವರ್ಷ ಆರಂಭಗೊಂಡರೂ ಸರಕಾರ ನಿಗದಿಪಡಿಸಿದ ಪಠ್ಯಪುಸ್ತಕಗಳು ಇನ್ನೂ ಶಾಲೆಗಳಿಗೆ ತಲುಪಿಲ್ಲ ಎಂದು ಸಂಘಗಳು ಆರೋಪಿಸಿವೆ.

ಇದನ್ನೂ ಓದಿ: ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ರಚನೆ ಪ್ರಕ್ರಿಯೆ; ಶಿಕ್ಷಣದ ಮೇಲಿನ ರಾಜ್ಯಗಳ ಅಧಿಕಾರವನ್ನು ಕಸಿಯುವ ಪ್ರಹಸನ

“ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳು ಪ್ರಾಯೋಗಿಕವಾಗಿ ಮತ್ತು ಭೌತಿಕವಾಗಿ ಜಾರಿಗೊಳಿಸಬಹುದಾದ ಕಠಿಣ ನಿಯಮಗಳನ್ನು ಉದಾರೀಕರಣಗೊಳಿಸಲು ಶಿಕ್ಷಣ ಸಚಿವರು ಯಾವುದೇ ಕಾಳಜಿ ವಹಿಸುತ್ತಿಲ್ಲ” ಎಂದು ಸಂಘಗಳು ಪ್ರಧಾನಿಗೆ ಬರೆದ ದೂರಿನಲ್ಲಿ ಹೇಳಿದ್ದಾರೆ.

ಈ ಎಲ್ಲಾ ಆರೋಪಗಳನ್ನು ಪರಿಶೀಲಿಸಬೇಕು ಮತ್ತು ಕರ್ನಾಟಕ ಶಿಕ್ಷಣ ಸಚಿವಾಲಯದ ವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಶಾಲಾ ಸಂಘಗಳು ಪ್ರಧಾನಿ ಮೋದಿಯವರನ್ನು ಒತ್ತಾಯಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕುರುಬನ ವಿರುದ್ಧ ಕುರಿಗಳು ತೋಳಕ್ಕೆ ಮನವಿ ಸಲ್ಲಿಸಿವೆ. 2023ರ ರಾಜ್ಯ ವಿಧಾನಸಭಾ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆಗಳಿಗಾಗಿ fund raising ಚಟುವಟಿಕೆಗಳು ರಭಸದಿಂದ ಸಾಗುತ್ತಿರುವಂತಿವೆ.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...