Homeಸಿನಿಮಾಕ್ರೀಡೆ'ಈ ಸಲ ಕಪ್ ನಮ್ದೆ' ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ...

‘ಈ ಸಲ ಕಪ್ ನಮ್ದೆ’ ಚರ್ಚೆ ಆರಂಭ: ಚಾಂಪಿಯನ್ ಆಗಲು RCB ಗೆ ಎರಡು ಹೆಜ್ಜೆ ಬಾಕಿ

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ.

- Advertisement -
- Advertisement -

ಬುಧವಾರ ಮಧ್ಯರಾತ್ರಿ ಲಕ್ನೋ ವಿರುದ್ಧ ಬೆಂಗಳೂರು 14 ರನ್‌ಗಳ ಅಂತರದ ಗೆಲುವು ಸಾಧಿಸುತ್ತಲೇ RCB ಅಭಿಮಾನಿಗಳು ಈ ಸಲ ಕಪ್ ನಮ್ದೆ ಎಂಬ ಘೋಷಣೆ ಶುರು ಮಾಡಿದ್ದಾರೆ. ಆರ್‌ಸಿಬಿ ಸತತ ಇನ್ನೆರೆಡು ಮಹತ್ವದ ಪಂದ್ಯಗಳನ್ನು ಗೆದ್ದಲ್ಲಿ ಆ ಘೋಷಣೆ ನಿಜರೂಪಕ್ಕೆ ಬರಲಿದೆ.

2020ರಲ್ಲಿ ಪ್ಲೇ ಆಫ್‌ ಪ್ರವೇಶಿಸಿದ್ದ RCB ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಸೋಲು ಅನುಭವಿಸಿ ಹೊರಬಂದಿತ್ತು. 2021ರ 14ನೇ ಐಪಿಎಲ್ ಸೀಸನ್‌ನಲ್ಲಿಯೂ ಸಹ ಪ್ಲೇ ಆಫ್‌ ಪ್ರವೇಶಿಸಿದ ಅದು ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ಎದುರು ಸೋತು ಟೂರ್ನಿಯಿಂದ ನಿರ್ಗಮಿಸಿತ್ತು. ಆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಈ ಸಲ ಕಪ್ ನಮ್ದೆ ಎನ್ನುವ ಆಸೆಗೆ ತಣ್ಣೀರು ಎರಚಿದ್ದರು. ಆದರೆ 2022ರ 15ನೇ ಆವೃತ್ತಿಯಲ್ಲಿ ಅದೃಷ್ಟದ ಮೂಲಕ ಪ್ಲೇ ಆಫ್ ಪ್ರವೇಶಿಸಿದ ಆರ್‌ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಅದೃಷ್ಟದ ಮೂಲಕವೇ ಮಣಿಸಿ ಮುಂದಿನ ಕ್ವಾಲಿಫೈಯರ್ ಹಂತಕ್ಕೆ ತಲುಪಿದೆ. ಆ ಮೂಲಕ ಕಪ್ ತನ್ನದಾಗಿಸಿಕೊಳ್ಳಲು ಆರ್‌ಸಿಬಿಗೆ ಎರಡು ಹೆಜ್ಜೆ ಮಾತ್ರ ಬಾಕಿ ಇದೆ. ಆದರೆ ಆ ಎರಡು ಹೆಜ್ಜೆಗಳು ತೀವ್ರ ಕಠಿಣವಾಗಿವೆ.

ಬುಧವಾರ ರಾತ್ರಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಜಯ ಗಳಿಸಿತು. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ರಜತ್ ಪಾಟಿದಾರ್‌ರವರ ಸ್ಪೋಟಕದ ಶತಕದ (54 ಎಸೆತಗಳಲ್ಲಿ 112ರನ್) ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್‌ ಗಳಿಸಿತು. ಕಡೆಯಲ್ಲಿ ಕ್ರೀಸ್‌ಗಿಳಿಸಿದ ದಿನೇಶ್ ಕಾರ್ತಿಕ್ ಸಹ 23 ಎಸೆತಗಳಲ್ಲಿ 37 ರನ್ ಗಳಿಸಿ 200 ರ ಗಡಿ ದಾಟಲು ನೆರವಾದರು.

ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಲಕ್ನೋ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 193 ರನ್ ಗಳಿಸಲಷ್ಟೆ ಸಾಧ್ಯವಾಯಿತು. ಕೆ.ಎಲ್ ರಾಹುಲ್ 79 ರನ್ ಮತ್ತು ದೀಪಕ್ ಹೂಡಾ 45 ರನ್ ಗಳಿಸಿದರೂ ತಂಡ ಗೆಲುವಿನ ಗೆರೆ ದಾಟಲಾಗಲಿಲ್ಲ. ಆರ್‌ಸಿಬಿ ಬೌಲರ್ ಹರ್ಷಲ್ ಪಟೇಲ್‌ ನಡೆಸಿದ ಬಿಗುವಿನ ದಾಳಿಯೇ ಅದಕ್ಕೆ ಪ್ರಮುಖ ಕಾರಣ. ಅವರು 4 ಓವರ್‌ಗಳಲ್ಲಿ 1 ವಿಕೆಟ್ ಗಳಿಸಿ ಕೇವಲ 25 ರನ್ ನೀಡಿದರು.

ಈ ಗೆಲುವಿನ ಮೂಲಕ ಆರ್‌ಸಿಬಿ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡದ ಎದುರು ಮೇ 27ರ ಶುಕ್ರವಾರ ಕಣಕ್ಕಿಳಿಯಲಿದೆ. ಅಲ್ಲಿ ಗೆದ್ದಲ್ಲಿ ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಬೇಕಿದೆ. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ರಾಜಸ್ಥಾನ ಮತ್ತು ಗುಜರಾತ್ ಎದುರು ಗೆಲ್ಲುವುದು ಸುಲಭದ ಮಾತಲ್ಲ. ಆದರೆ ಆರ್‌ಸಿಬಿಯಲ್ಲಿಯೂ ಪ್ರತಿಭಾವಂತ ಆಟಗಾರರಿದ್ದಾರೆ. ಅವರು ಪ್ರದರ್ಶನ ನೀಡಿದ್ದಲ್ಲಿ ಈ ಬಾರಿ ಆರ್‌ಸಿಬಿ ಚಾಂಪಿಯನ್‌ ಆಗಬಹುದಾಗಿದೆ.

2009, 2011 ಮತ್ತು 2016ರಲ್ಲಿ ಆರ್‌ಸಿಬಿ ತಂಡ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಕಪ್ ಗೆಲ್ಲಲಾಗಿಲ್ಲ. ಈ ಬಾರಿಯಾದರೂ ಗೆದ್ದು ಅಭಿಮಾನಿಗಳ ಮನ ತಣಿಸಲಿದೆಯೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಬದಲಿಸಿದವರ ಗುರಿ ’ಕರ್ನಾಟಕ’ವೂ ಆಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...