Homeಮುಖಪುಟಕೇರಳ ರಾಜ್ಯಪಾಲರ ಪ್ರತಿಕೃತಿ ದಹನ; ಎಸ್ಎಫ್ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ಕೇರಳ ರಾಜ್ಯಪಾಲರ ಪ್ರತಿಕೃತಿ ದಹನ; ಎಸ್ಎಫ್ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪಯ್ಯಂಬಲಂ ಬೀಚಿನಲ್ಲಿ ಭಾನುವಾರ ಸಂಜೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಬೃಹತ್ ಪ್ರತಿಕೃತಿಯನ್ನು ಪೆಟ್ರೋಲ್ ಬಳಸಿ ದಹಿಸಿದ ಅಪಾಯಕಾರಿ ಕೃತ್ಯಕ್ಕಾಗಿ, ಎಸ್ಎಫ್ಐ ರಾಜ್ಯ ಅಧ್ಯಕ್ಷೆ ಕೆ. ಅನುಶ್ರೀ ಮತ್ತು ಇತರ ಎಂಟು ಜನರ ವಿರುದ್ಧ ಕೇರಳ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

143 (ಕಾನೂನುಬಾಹಿರ ಸಭೆ), 147 (ಗಲಭೆ), ಮತ್ತು 285 (ಬೆಂಕಿ ಅಥವಾ ದಹನಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಸ್ಎಫ್ಐ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ರಾಜ್ಯಪಾಲರು ರಾಜ್ಯದ ಶೈಕ್ಷಣಿಕ ಕ್ಷೇತ್ರವನ್ನು ಕೇಸರೀಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಎಸ್ಎಫ್ಐ, ಹೊಸ ವರ್ಷದ ಮುನ್ನಾದಿನದಂದು ಅವರ 30 ಅಡಿ ಎತ್ತರದ ಪ್ರತಿಕೃತಿಯನ್ನು ಕಡಲತೀರದಲ್ಲಿ ದಹಿಸಿದ್ದಾರೆ. ಘಟನೆ ನಂತರ ಕಣ್ಣೂರು ಪಟ್ಟಣ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಶ್ವವಿದ್ಯಾನಿಲಯಗಳ ಕುಲಪತಿಯಾಗಿರುವ ಖಾನ್ ಅವರು ರಾಜ್ಯದಲ್ಲಿ ಹಿಂದೂ ಬಲಪಂಥೀಯ ಕಾರ್ಯಕರ್ತರನ್ನು ವಿಶ್ವವಿದ್ಯಾಲಯದ ಸೆನೆಟ್‌ಗಳಿಗೆ ನಾಮನಿರ್ದೇಶನ ಮಾಡುವುದರ ವಿರುದ್ಧ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಎಸ್ಎಫ್ಐ ಹೇಳಿದೆ.

ರಾಜ್ಯದ ಕೆಲವು ವಿಶ್ವವಿದ್ಯಾನಿಲಯಗಳ ಸೆನೆಟ್‌ಗೆ ಖಾನ್ ಅವರು ನೇಮಿಸಿದ ನಂತರ ರಾಜ್ಯಪಾಲರು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಎಸ್ಎಫ್ಐ ಕಾರ್ಯರ್ತರ ನಡುವೆ ಮಾತಿನ ವಿನಿಮಯ ನಡೆಯುತ್ತಿವೆ.

ಕಣ್ಣೂರು ವಿಶ್ವವಿದ್ಯಾನಿಲಯದ ಉಪಕುಲಪತಿಯಾಗಿ ಗೋಪಿನಾಥ್ ರವೀಂದ್ರನ್ ಅವರ ಮರುನೇಮಕವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಇತ್ತೀಚಿನ ಆದೇಶವನ್ನು ಉಲ್ಲೇಖಿಸಿ, ‘ರಾಜ್ಯ ಸರ್ಕಾರ ಮತ್ತು ಎಸ್ಎಫ್ಐ ಇನ್ನು ಮುಂದೆ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ ನಿಯಂತ್ರಣ ಹೊಂದಿಲ್ಲದ ಕಾರಣ ನನ್ನ ಮೇಲೆ ದಾಳಿ ಮಾಡಲಾಗುತ್ತಿದೆ’ ಎಂದು ರಾಜ್ಯಪಾಲರು ಆರೋಪಿಸಿದ್ದಾರೆ.

ಇದನ್ನೂ ಓದಿ; ಉತ್ತರಾಖಂಡ: ಅಪ್ರಾಪ್ತೆ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ನಾಯಕನ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...