Homeಮುಖಪುಟಮೊಟ್ಟೆ ಖರೀದಿ ಟೆಂಡರ್ ಹಗರಣ: ಸಚಿವೆ ಶಶಿಕಲಾ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ

ಮೊಟ್ಟೆ ಖರೀದಿ ಟೆಂಡರ್ ಹಗರಣ: ಸಚಿವೆ ಶಶಿಕಲಾ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ

- Advertisement -
- Advertisement -

ಗರ್ಭಿಣಿಯರು ಮತ್ತು ಮಕ್ಕಳಿಗೆ ಮೊಟ್ಟೆ ನೀಡುವ ಮಾತೃಪೂರ್ಣ ಯೋಜನೆಯ ಮೊಟ್ಟೆ ಖರೀದಿಯ ಟೆಂಡರ್ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಮತ್ತು ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ ಲಂಚ ಪಡೆದಿದ್ದಾರೆ ಎಂದು ಖಾಸಗಿ ವಾಹಿನಿ ನ್ಯೂಸ್‌ ಫಸ್ಟ್ ರಹಸ್ಯ ಕಾರ್ಯಚರಣೆಯ ವಿಡಿಯೋ ಬಿಡುಗಡೆಯಾಗಿದೆ.

ನ್ಯೂಸ್‌ ಫಸ್ಟ್ ಮಾಡಿದ ವರದಿಯಲ್ಲಿ “ಈ ಮುಂಚೆ ನೇರವಾಗಿ ಅಂಗನವಾಡಿ ಕೇಂದ್ರಗಳು ಮೊಟ್ಟೆ ಖರೀದಿ ಮಾಡುತ್ತಿದ್ದವು. ಆದರೆ ಈಗ ಕೇಂದ್ರೀಕೃತವಾಗಿ ಮೊಟ್ಟೆ ಪೂರೈಕೆಗೆ ಟೆಂಡರ್ ಕರೆದಿದ್ದೇವೆ. ನಿಮಗೆ ಟೆಂಡರ್ ಸಿಗುವಂತೆ ಮಾಡುತ್ತೇವೆ” ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಅದೇ ರೀತಿಯಲ್ಲಿ ಸಚಿವೆಯ ಸಂಪರ್ಕ ಕೊಟ್ಟ ಶಾಸಕ ಪರಣ್ಣ ಮುನವಳ್ಳಿ “ಟೆಂಡರ್ ನಿಮಗೆ ಆಗಬೇಕಾದರೆ ಪ್ರತಿ ತಿಂಗಳು ಸಚಿವರಿಗೆ ಒಂದು ಕೋಟಿ ಮತ್ತು ತನಗೆ 30 ಲಕ್ಷ ಹಣ ನೀಡಬೇಕು” ಎಂದು ಬೇಡಿಕೆಯಿಟ್ಟಿರುವುದು ಸಹ ರಹಸ್ಯ ಕಾರ್ಯಾಚರಣೆಯಲ್ಲಿ ದಾಖಲಾಗಿದೆ.

ಟೆಂಡರ್‌ಗಾಗಿ ಸಚಿವೆಯ ಸೂಚನೆಯಂತೆ ಚಿಕ್ಕೋಡಿಯ ಸಂಜಯ್ ಅರಗಿ ಎಂಬುವವರು 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರೆ ಎಂದು ನ್ಯೂಸ್‌ಫಸ್ಟ್ ತಂಡ ತಿಳಿಸಿದೆ. ಪಾರದರ್ಶಕವಾಗಿ ಮತ್ತು ಪಕ್ಷಪಾತರಹಿತವಾಗಿ ಟೆಂಡರ್ ನಡೆಸಬೇಕಾದ ಸಚಿವರು, ಲಂಚ ಪಡೆದು ಅಕ್ರಮವಾಗಿ ಟೆಂಟರ್ ಕೊಡಲು ಮುಂದಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದು ಮಕ್ಕಳಿಗೆ, ಗರ್ಭಿಣಿಯರಿಗೆ ತಲುಪಬೇಕಾದ ಹಣದ ವ್ಯವಸ್ಥಿತ ಲೂಟಿಯಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವರ ಭ್ರಷ್ಟಾಚಾರವನ್ನ ಖಂಡಿಸಿ, ಬೆಂಗಳೂರಿನ ಜೆ.ಸಿ ನಗರ ರಸ್ತೆಯಲ್ಲಿರುವ ಶಶಿಕಲಾ ಜೊಲ್ಲೆಯವರ ಅಧಿಕೃತ ಮುಂದೆ ಜಮಾಯಿಸಿದ NSUI ಕಾರ್ಯಕರ್ತರು, ನಿವಾಸಕ್ಕೆ ಮೊಟ್ಟೆಗಳನ್ನು ಎಸೆದು ಪ್ರತಿಭಟನೆ ನಡೆಸಿದ್ದಾರೆ.

ಭ್ರಷ್ಟಾಚಾರ ನಡೆಸಿರುವ ಸಚಿವರು ಈ ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಒಂದೆಡೆ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಣ ನೀಡದೆ ಸ್ಥಗಿತಗೊಳಿಸುವ ಹುನ್ನಾರ ನಡೆಸುತ್ತಿರುವ ಬಿಜೆಪಿ ಸರ್ಕಾರ, ಇನ್ನೊಂದೆಡೆ ಅದೇ ಕಾರ್ಯಕ್ರಮಗಳನ್ನು ತಮ್ಮ ಜೇಬು ತುಂಬಿಕೊಳ್ಳಲು ದುರ್ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮಾತೃಪೂರ್ಣ’ ಯೋಜನೆಯಡಿ ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಮೊಟ್ಟೆಗಳ ಖರೀದಿಯಲ್ಲಿ ಲಂಚ ಪಡೆದಿರುವ ಹಗರಣದಲ್ಲಿ ಭಾಗಿಯಾಗಿರುವ ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ
ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸಬೇಕು. ಲಂಚದ ಹಣಕ್ಕೆ ಬಿಜೆಪಿ ನಾಯಕರು ಜೊಲ್ಲು ಸುರಿಸುತ್ತಿರುವವರು ಎಂದು ಲೋಕಕ್ಕೆ ಗೊತ್ತಿದೆ. ಆದರೆ ಇವರು ಸಣ್ಣಮಕ್ಕಳು ಮತ್ತು ಗರ್ಭಿಣಿಯರ ತಟ್ಟೆಗೂ ಕೈಹಾಕುವ ಮಟ್ಟಕ್ಕೆ ಇಳಿದಿರುವುದು ನ್ಯೂಸ್‌ಫಸ್ಟ್ ನನಡೆಸಿರುವ ಕುಟುಕು ಕಾರ್ಯಾಚರಣೆಯಿಂದ ಬಯಲಾಗಿದೆ” ಎಂದಿದ್ದಾರೆ.

ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ: ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ

ಖಾಸಗಿ ವಾಹಿನಿಯ ಮೂಲಕ ರಹಸ್ಯ ಕಾರ್ಯಾಚರಣೆ ನಡೆಸಿ ನನ್ನನ್ನು ಆರೋಪಿತಳನ್ನಾಗಿ ಮಾಡುವ ಪ್ರಯತ್ನ ನಡೆಸುತ್ತಿರುವುದು ದುರದೃಷ್ಟಕರ. ಖಾಸಗಿ ವಾಹಿನಿಯಲ್ಲಿ ಹೇಳುತ್ತಿರುವ ಹಾಗೆ ಮೊಟ್ಟೆ ಖರೀದಿಗೆ ಇದುವರೆಗೂ ಯಾವದೇ ಟೆಂಡರ್ ಕರೆದಿಲ್ಲ. ಅಲ್ಲದೇ ಟೆಂಡರ್ ನೀಡಲು ನಾನು ವಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನಮ್ಮ ಬಿಜೆಪಿ ಪಕ್ಷದ ಶಾಸಕರಾದ ಪರಣ್ಣ ಮುನವಳ್ಳಿಯವರು ತಮ್ಮ ಸಂಬಂಧಿಕರು ಎಂದು ಕರೆದುಕೊಂಡು ಬಂದಾಗ ಕಾನೂನು ಪ್ರಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೇನೆ. ಇದರಲ್ಲಿ ಯಾವುದೇ ಹಣಕಾಸಿನ ವ್ಯವಹಾರದ ಕುರಿತು ನಾನು ಮಾತನಾಡಿಲ್ಲ. ಇದರ ಹಿಂದೆ ವ್ಯವಸ್ಥಿತ ರಾಜಕೀಯ ಪಿತೂರಿಯಿದೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ; ಬೆಂಗಳೂರು: ಒತ್ತಾಯದಿಂದ ಗಾಂಜಾ ಸೇವನೆ ಮಾಡಿಸಿ, ಕೇಸ್ ದಾಖಲಿಸಿದ್ದ ನಾಲ್ವರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...