Homeಮುಖಪುಟಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

- Advertisement -
- Advertisement -

ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂಪಾಯಿ ಜಿಎಸ್‌ಟಿ ಬಾಕಿ ಇದೆ ಎಂದು ಆದಾಯ ತೆರಿಗೆ (ಐಟಿ) ಇಲಾಖೆ ನೋಟಿಸ್ ನೀಡಿರುವ ಬಗ್ಗೆ ವರದಿಯಾಗಿದೆ.

ತಮ್ಮ ಕುಟುಂಬಗಳಲ್ಲಿ ಏಕೈಕ ಆದಾಯ ಗಳಿಸುವ ವ್ಯಕ್ತಿಗಳಾದ ಈ ಇಬ್ಬರು ಪುರುಷರು, ಐಟಿ ಇಲಾಖೆಯ ನೋಟಿಸ್‌ ನೋಡಿ ಆಘಾತಕ್ಕೊಳಗಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಮೊಟ್ಟೆ ಮಾರಾಟಗಾರ ಪ್ರಿನ್ಸ್ ಸುಮನ್ ಅವರಿಗೆ ಸುಮಾರು 50 ಕೋಟಿ ರೂಪಾಯಿಗಳ ವ್ಯವಹಾರಕ್ಕಾಗಿ ನೋಟಿಸ್ ನೀಡಲಾಗಿದೆ. ಸರ್ಕಾರಕ್ಕೆ 6 ಕೋಟಿ ರೂಪಾಯಿ ಜಿಎಸ್‌ಟಿ ಪಾವತಿಸಲು ಬಾಕಿ ಇದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘ಪ್ರಿನ್ಸ್ ಎಂಟರ್‌ಪ್ರೈಸಸ್’ ಎಂಬ ಕಂಪನಿಯು 2022ರಲ್ಲಿ ದೆಹಲಿಯ ರಾಜ್ಯ ವಲಯ 3, ವಾರ್ಡ್ 33 ರಲ್ಲಿ ಸುಮನ್ ಅವರ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ. ಈ ಕಂಪನಿಯು ಚರ್ಮ, ಮರ ಮತ್ತು ಕಬ್ಬಿಣದ ವ್ಯಾಪಾರದಲ್ಲಿ ತೊಡಗಿದ್ದು, ಕಳೆದ ಎರಡು ವರ್ಷಗಳಲ್ಲಿ ಬೃಹತ್ ವಹಿವಾಟುಗಳನ್ನು ನಡೆಸಿದೆ ಎಂದು ಐಟಿ ಇಲಾಖೆಯ ನೋಟಿಸ್‌ನಲ್ಲಿ ಹೇಳಲಾಗಿದೆ ಎಂದು ವರದಿ ತಿಳಿಸಿದೆ.

“ನಾನು ಗಾಡಿಯಲ್ಲಿಟ್ಟು ಮೊಟ್ಟೆ ಮಾರುವವ. ದೆಹಲಿಗೆ ಹೋಗಿಲ್ಲ, ಅಲ್ಲಿ ಕಂಪನಿ ಪ್ರಾರಂಭಿಸುವುದಂತೂ ಸಾಧ್ಯವೇ ಇಲ್ಲ” ಎಂದು ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಪಥಾರಿಯಾ ನಗರದಲ್ಲಿ ವಾಸಿಸುವ ಸುಮನ್ ಹೇಳಿದ್ದಾರೆ.

ಸಣ್ಣ ದಿನಸಿ ಅಂಗಡಿ ನಡೆಸುತ್ತಿರುವ ಸುಮನ್‌ ಅವರ ತಂದೆ ಅವರ ತಂದೆ ಧರ್ ಸುಮನ್, “ನಮ್ಮಲ್ಲಿ ನಿಜವಾಗಿಯೂ 50 ಕೋಟಿ ರೂಪಾಯಿ ಇದ್ದರೆ ದೈನಂದಿನ ಖರ್ಚುಗಳನ್ನು ಪೂರೈಸಲು ಏಕೆ ಕಷ್ಟಪಡಬೇಕು?” ಎಂದು ಪ್ರಶ್ನಿಸಿದ್ದಾರೆ.

“ಸುಮನ್ ಅವರ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡಿರಬಹುದು ಎಂದು ಅವರ ಕುಟುಂಬದ ವಕೀಲರು ಶಂಕಿಸಿದ್ದಾರೆ. “ಯಾರೋ ಪ್ರಿನ್ಸ್ ಅವರ ದಾಖಲೆಗಳನ್ನು ವಂಚನೆಯ ಮೂಲಕ ಬಳಸಿಕೊಂಡಿದ್ದಾರೆ. ಪ್ರಕರಣದ ತನಿಖೆಗಾಗಿ ನಾವು ಪೊಲೀಸ್ ಮತ್ತು ತೆರಿಗೆ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಮಾರ್ಚ್ 20ರಂದು ಸುಮನ್‌ ಅವರಿಗೆ ನೀಡಿದ ನೋಟಿಸ್‌ನಲ್ಲಿ, ಐ-ಟಿ ಇಲಾಖೆಯು ಒಟ್ಟು 49.24 ಕೋಟಿ ರೂಪಾಯಿ ಹಣಕಾಸು ವಹಿವಾಟಿನ ವಿವರವನ್ನು ಕೋರಿದೆ. 2022-23ನೇ ಹಣಕಾಸು ವರ್ಷದ ಬಿಲ್‌ಗಳು, ಖರೀದಿ ವೋಚರ್‌ಗಳು, ಸಾರಿಗೆ ದಾಖಲೆಗಳು ಮತ್ತು ಬ್ಯಾಂಕ್ ಸ್ಟೇಟ್‌ಮೆಂಟ್‌ಗಳಂತಹ ದಾಖಲೆಗಳನ್ನು ಪ್ರಸ್ತುತಪಡಿಸಿವಂತೆ ಸೂಚಿಸಿದೆ.

ಉತ್ತರ ಪ್ರದೇಶದ ಅಲಿಗಢದ ಜ್ಯೂಸ್ ಮಾರಾಟಗಾರ ಎಂ.ಡಿ ರಹೀಸ್ ಎಂಬವರಿಗೂ ಸುಮನ್‌ ಅವರಂತೆ 7.5 ಕೋಟಿ ರೂಪಾಯಿಗೂ ಹೆಚ್ಚು ಜಿಎಸ್‌ಟಿ ಪಾವತಿಸುವಂತೆ ಐಟಿ ಇಲಾಖೆ ನೋಟಿಸ್ ನೀಡಿದ್ದು, ಇದು ಅವರನ್ನು ಮತ್ತು ಅವರ ಕುಟುಂಬವನ್ನು ಸಂಕಷ್ಟಕ್ಕೆ ದೂಡಿದೆ.

“ಈ ನೋಟಿಸ್ ಏಕೆ ನೀಡಲಾಗಿದೆ ಎಂಬುವುದೇ ನನಗೆ ಗೊತ್ತಿಲ್ಲ. ನಾನು ಜ್ಯೂಸ್ ಮಾತ್ರ ಮಾರಾಟ ಮಾಡುತ್ತೇನೆ. ನಾನು ಇಷ್ಟೊಂದು ಹಣವನ್ನು ಎಂದಿಗೂ ನೋಡಿಲ್ಲ. ಈಗ ನಾನು ಏನು ಮಾಡಬೇಕು?” ರಹೀಸ್ ಪ್ರಶ್ನಿಸಿದ್ದಾರೆ.

“ಸರ್ಕಾರ ನನಗೆ ಸಹಾಯ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ನಾನು ಬಡವ. ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಬಾರದು” ಎಂದು ಅವರು ಮನವಿ ಮಾಡಿದ್ದಾರೆ.

2020-21ರಲ್ಲಿ ರಹೀಸ್ ಹೆಸರಿನಲ್ಲಿ ಕೋಟ್ಯಂತರ ಮೌಲ್ಯದ ನಕಲಿ ವಹಿವಾಟುಗಳು ನಡೆದಿವೆ ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಹೀಗಾಗಿ, ಅವರು ಸರ್ಕಾರಕ್ಕೆ 7,79,02,457 ರೂಪಾಯಿ ಜಿಎಸ್‌ಟಿ ಬಾಕಿ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.

“ನಾವು ಐಟಿ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ. ಅವರು ನನ್ನ ವೈಯಕ್ತಿಕ ದಾಖಲೆಗಳನ್ನು ಯಾರೊಂದಿಗಾದರೂ ಹಂಚಿಕೊಂಡಿದ್ದೀರಾ? ಎಂದು ಕೇಳಿದ್ದಾರೆ. ನಾನು ಅವುಗಳನ್ನು ಯಾರೊಂದಿಗೂ ಹಂಚಿಕೊಂಡಿಲ್ಲ ಎಂದು ಹೇಳಿದೆ” ಎಂದು ಬನ್ನಾ ದೇವಿ ಪೊಲೀಸ್ ಠಾಣೆ ವ್ಯಾಪ್ತಿಯ ತಾರ್ ವಾಲಿ ಗಲಿಯಲ್ಲಿ ವಾಸಿಸುವ ರಹೀಸ್ ಹೇಳಿದ್ದಾರೆ.

“ನಾವು ನಮ್ಮ ದಿನನಿತ್ಯದ ಊಟಕ್ಕೂ ಕಷ್ಟಪಡುತ್ತಿದ್ದೇವೆ… ನಮ್ಮ ಬಳಿ ಅಷ್ಟೊಂದು ಹಣವಿದ್ದರೆ, ನಮ್ಮ ಮಗ ಏಕೆ ಇಷ್ಟೊಂದು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತಿತ್ತು?” ಎಂದು ರಹೀಸ್ ತಾಯಿ ಪ್ರಶ್ನಿಸಿದ್ದಾರೆ.

2022ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಕೋಟ್ಯಾಂತರ ರೂಪಾಯಿ ದೇಣಿಗೆ ನೀಡಲು ರಹೀಸ್ ಅವರ ವೈಯಕ್ತಿಕ ದಾಖಲೆಗಳನ್ನು ವಂಚನೆಯಿಂದ ಬಳಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ವರದಿಗಳು ತಿಳಿಸಿವೆ.

“ರಹೀಸ್ ಕೋಟ್ಯಾಧಿಪತಿಯಾಗಿದ್ದರೆ, ಅವರು ಜ್ಯೂಸ್ ಅಂಗಡಿ ನಡೆಸುತ್ತಿದ್ದರೇ? ಇದು ಖಂಡಿತವಾಗಿಯೂ ವಂಚನೆಯ ಪ್ರಕರಣವಾಗಿದೆ” ಎಂದು ಜ್ಯೂಸ್ ರಹೀಸ್ ಅವರ ಸ್ನೇಹಿತ ಸೊಹೈಲ್ ಹೇಳಿದ್ದಾರೆ. |

ಸೌಜನ್ಯ: ndtv.com

ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...