ದೆಹಲಿಯಲ್ಲಿ ಭಾರೀ ಮಳೆಗೆ ಗೋಡೆ ಕುಸಿತ: ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಸಾವು

ಶನಿವಾರ (ಆ.9) ಬೆಳಿಗ್ಗೆ ಸುರಿದ ಭಾರೀ ಮಳೆಗೆ ದೆಹಲಿಯ ಜೈತ್‌ಪುರದ ಹರಿ ನಗರ ಪ್ರದೇಶದಲ್ಲಿ ಗೋಡೆಯ ಒಂದು ಭಾಗ ಕುಸಿದು ಇಬ್ಬರು ಚಿಕ್ಕ ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ. ಸಾವಿಗೀಡಾದವರು ಹರಿ ನಗರದ ಹಳೆಯ ದೇವಾಲಯದ ಬಳಿ ತಾತ್ಕಾಲಿಕ ಗುಡಿಸಲುಗಳಲ್ಲಿ ವಾಸಿಸುತ್ತಿದ್ದ ಗುಜಿರಿ ವ್ಯಾಪಾರಿಗಳು. ಗೋಡೆ ಕುಸಿದಾಗ ಎಲ್ಲರೂ ಅವಶೇಷಗಳಡಿ ಸಿಲುಕಿಕೊಂಡಿದ್ದರು. ರಕ್ಷಣಾ ತಂಡಗಳು ತಕ್ಷಣ ಅವರನ್ನು ಸಫ್ದರ್‌ಜಂಗ್ ಮತ್ತು ಏಮ್ಸ್‌ ಆಸ್ಪತ್ರೆಗಳಿಗೆ ಕರೆದೊಯ್ದವು. ಆದರೆ ಚಿಕಿತ್ಸೆಯ ಸಮಯದಲ್ಲಿ ಎಲ್ಲರೂ ಸಾವನ್ನಪ್ಪಿದರು ಎಂದು ವರದಿಗಳು ಹೇಳಿವೆ. … Continue reading ದೆಹಲಿಯಲ್ಲಿ ಭಾರೀ ಮಳೆಗೆ ಗೋಡೆ ಕುಸಿತ: ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಸಾವು