Homeಕರ್ನಾಟಕಬಿ.ಎ.ವಿವೇಕ ರೈ, ಜಯಂತ ಕಾಯ್ಕಿಣಿ ಸೇರಿ ಏಳು ಮಂದಿಗೆ ಮಾಸ್ತಿ ಪ್ರಶಸ್ತಿ

ಬಿ.ಎ.ವಿವೇಕ ರೈ, ಜಯಂತ ಕಾಯ್ಕಿಣಿ ಸೇರಿ ಏಳು ಮಂದಿಗೆ ಮಾಸ್ತಿ ಪ್ರಶಸ್ತಿ

- Advertisement -
- Advertisement -

ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್ ವತಿಯಿಂದ ನೀಡಲಾಗುವ 2021ನೇಯ ಸಾಲಿನ ಮಾಸ್ತಿ ಪ್ರಶಸ್ತಿ ಪ್ರಕಟಗೊಂಡಿದ್ದು, ಕವಿ ಜಯಂತ ಕಾಯ್ಕಿಣಿ ಸೇರಿದಂತೆ ಏಳು ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿನ ಸಾಧನೆಯನ್ನು ಪರಿಗಣಿಸಿ, ಟ್ರಸ್ಟ್‌ನ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ನೇತೃತ್ವದಲ್ಲಿ ಈ ಆಯ್ಕೆ ನಡೆಸಲಾಗಿದೆ ಎಂದು ಟ್ರಸ್ಟ್ ಹೇಳಿದೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ.

ಜಾನಪದ ಕ್ಷೇತ್ರದ ಸೇವೆಗಾಗಿ ಬಿ.ಎ. ವಿವೇಕ ರೈ, ಕಾವ್ಯ ಕೃಷಿಗಾಗಿ ಜಯಂತ ಕಾಯ್ಕಿಣಿ, ಎಚ್.ಎಲ್. ಪುಷ್ಪಾ, ವಿಜಯರಾಘವನ್‌, ವಿಮರ್ಶೆಗಾಗಿ ಮಾಧವ ಕುಲಕರ್ಣಿ, ಎಂ.ಎಸ್. ಆಶಾದೇವಿ, ಸೃಜನಶೀಲ ಬರಹಗಳಿಗಾಗಿ ವಸುಮತಿ ಉಡುಪ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಮಾಸ್ತಿ ಟ್ರಸ್ಟ್ ತಿಳಿಸಿದೆ.

ತಲಾ 25 ಸಾವಿರ ರೂ ನಗದು ಬಹುಮಾನ: ಪ್ರಶಸ್ತಿಯು ತಲಾ 25 ಸಾವಿರ ರೂ ನಗದು, ಮಾಸ್ತಿ ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿದೆ. ಪ್ರೊ.ಎಂ.ಎಚ್. ಕೃಷ್ಣಯ್ಯ, ಜಿ.ಎನ್. ರಂಗನಾಥರಾವ್, ಬಿ.ಆರ್. ಲಕ್ಷ್ಮಣರಾವ್, ಕೃಷ್ಣಮೂರ್ತಿ ಹನೂರು, ಉಷಾ ಕೇಸರಿ ಹಾಗೂ ಡಿ.ಎಂ.ರವಿಕುಮಾರ್ ಆಯ್ಕೆ ಸಮಿತಿಯಲ್ಲಿ ಇದ್ದರು ಎಂದು ಮಾಹಿತಿ ನೀಡಿದೆ.

ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ: ನವೆಂಬರ್ 6 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ಪ್ರಕಟಣೆಯಲ್ಲಿ ಹೇಳಿದ್ದಾರೆ.


ಇದನ್ನು ಓದಿರಿ: ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೇಹಾ ಕೊಲೆ ಪ್ರಕರಣ: ‘ತನಿಖೆ ದಿಕ್ಕು ತಪ್ಪುತ್ತಿದೆ’ ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

0
ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಆರೋಪಿಸಿದ್ದ ಆಕೆಯ ತಂದೆ ನಿರಂಜನಯ್ಯ ಹಿರೇಮಠ ಇದೀಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಮಾಹಿತಿಯ ಕೊರತೆಯಿಂದ ಮಗಳ ಕೊಲೆ ಪ್ರಕರಣದ ತನಿಖೆ ದಿಕ್ಕು...