Homeಮುಖಪುಟನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

- Advertisement -
- Advertisement -

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ.

ಎಕ್ಸ್‌ಪ್ರೆಸ್‌ವೇಯ ಸ್ವಚ್ಚತಾ ಕೆಲಸ ಮುಗಿಸಿ ಕಾರ್ಮಿಕರು ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಟೆಂಪೋದಲ್ಲಿ ಚಾಲಕ ಸೇರಿದಂತೆ 11 ಜನರಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಟೆಂಪೋ ಕಾರ್ಮಿಕರನ್ನು ಹತ್ತಿಸಿಕೊಂಡು ಚಲಿಸಲು ಸಿದ್ಧವಾಗುತ್ತಿದ್ದಂತೆ, ವೇಗವಾಗಿ ಮುಂಬೈ ಕಡೆಗೆ ಸಂಚರಿಸುತ್ತಿದ್ದ ಟ್ರಕ್ ಕಡ್ವಾಂಚಿ ಗ್ರಾಮದ ಬಳಿ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ಹೇಳಿದ್ದಾರೆ. ಏಳು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಜಲ್ನಾದ ಸರ್ಕಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮೃತರನ್ನು ಜಲ್ನಾ ತಹಸಿಲ್ ನಿವಾಸಿಗಳಾದ ಅಲ್ಕಾಬಾಯಿ ಅದ್ಮನೆ (45), ಲಕ್ಷ್ಮಿಬಾಯಿ ಮದನ್ (35), ಮೀನಾ ಅದ್ಮನೆ (45), ಕಾಂಚನ್ ಅದ್ಮನೆ (50), ತಾರಾಬಾಯಿ ಚೌಧರಿ (60), ಕಡುಬಾಯಿ ಮದನ್ (55) ಮತ್ತು ಸುಮನ್ ಅದ್ಮನೆ (70) ಎಂದು ಗುರುತಿಸಲಾಗಿದೆ. ಎಂಟನೇ ಮಹಿಳೆಯ ಗುರುತು ಇನ್ನೂ ದೃಢಪಟ್ಟಿಲ್ಲ. ಗಾಯಗೊಂಡ ಮೂವರು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸರು ಟ್ರಕ್ ಚಾಲಕನನ್ನು ಬಂಧಿಸಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ದುಃಖ ವ್ಯಕ್ತಪಡಿಸಿದ್ದು, ಇದು ಅತ್ಯಂತ ದುರದೃಷ್ಟಕರ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಆರ್ಥಿಕ ನೆರವು ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...