Homeಕರ್ನಾಟಕಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

ಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

’ಏಕ್ ಲವ್ ಯಾ’ ಚಿತ್ರದ ಹಾಡು ಬಿಡುಗಡೆ ವೇಳೆ ಪುನೀತ್ ಭಾವಚಿತ್ರದ ಮುಂದೆ ಶಾಂಪೇನ್ ಬಾಟಲ್ ಓಪನ್ ಮಾಡಿ ಸಂಭ್ರಮಿಸಲಾಗಿತ್ತು.

- Advertisement -
- Advertisement -

ಏಕ್‌ ಲವ್ ಯಾ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದ ವೇಳೆ ಇತ್ತಿಚೆಗೆ ನಮ್ಮನ್ನಗಲಿದ ನಟ ಪುನೀತ್ ರಾಜ್‌ಕುಮಾರ್‌ ಭಾವಚಿತ್ರದ ಎದುರು ಶಾಂಪೇನ್ ಓಪನ್ ಮಾಡಿ ಸಂಭ್ರಮಿಸಿ ಅವರನ್ನು ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಚಿತ್ರತಂಡ ಕ್ಷಮೆ ಕೇಳಬೇಕು ಎಂದು ಹಲವು ಮಂದಿ ಒತ್ತಾಯಿಸಿದ್ದರು.

ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ. ಶುಕ್ರವಾರ ಬೆಂಗಳೂರಿನ ತಾಜ್ ವೆಸ್ಟ್‌ ಎಂಡ್ ಹೋಟೆಲ್‌ನಲ್ಲಿ ಏಕ್ ಲವ್ ಯಾ ಚಿತ್ರದ “ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕ್ ಇಟ್ಟೆ” ಹಾಡು ಬಿಡುಗಡೆಯಾಗಿದೆ. ಈ ವೇಳೆ ಚಿತ್ರತಂಡ ಅಪ್ಪು ಅವರನ್ನು ಅವಮಾನಿಸಿದ್ದಾರೆ ಎಂದು ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಹಲವರು ಬೇಸರ ವ್ಯಕ್ತಪಡಿಸಿದ್ದರು.

ಕಾರ್ಯಕ್ರಮದಲ್ಲಿ ವೇದಿಎ ಮೇಳೆ ಮೊದಲಿಗೆ ಪುನೀತ್ ರಾಜ್‌ಕುಮಾರ್‌ ಅವರ ಭಾವಚಿತ್ರವನ್ನಿಟ್ಟು ಶ್ರದ್ಧಾಂಜಲಿ ಸಲ್ಲಿಸಲಾಗಿತ್ತು. ಬಳಿಕ ಅದೇ ಭಾವಚಿತ್ರದ ಮುಂದೆ ನಿರೂಪಕ ಅಕುಲ್ ಬಾಲಾಜಿ, ನಟಿಯರಾದ ರಚಿತಾ ರಾಮ್, ರಕ್ಷಿತಾ ಪ್ರೇಮ್, ನಿಶ್ವಿಕಾ ನಾಯ್ಡು, ಗಾಯಕಿ ಮಂಗ್ಲಿ ಶಾಂಪೇನ್ ಬಾಟಲ್ ಹಿಡಿದು ಸಮಭ್ರಮಿಸಿದ್ದರು. ಈ ವೇಳೆ ಹಿಂದಿನ ಸ್ಕ್ರೀನ್‌ನಲ್ಲಿ ನಟ ಪುನೀತ್ ಪೋಟೋ ಕೂಡ ಕಾಣಿಸಿಕೊಂಡಿತ್ತು. ಇದೆಲ್ಲಾ ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ಕರ್ನಾಟಕ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ, ನಿರ್ಮಾಪಕ ಸಾ.ರಾ.ಗೋವಿಂದು ಕೂಡ ’ಏಕ್ ಲವ್ ಯಾ’ ಚಿತ್ರರಂಗದ  ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ’ನಮ್ಮ ಚಿತ್ರರಂಗದವರೇ ಇಂಥ ಕೆಲಸ ಮಾಡಿದರೆ ನಾವು ಯಾರ ಮೇಲೆ ಆಪಾದನೆ ಮಾಡೋದು? ದಯವಿಟ್ಟು ಇಂಥದ್ದನ್ನೆಲ್ಲ ಮಾಡಬೇಡಿ. ಪುನೀತ್​ ನಮ್ಮಿಂದ ದೂರವಾಗಿರಬಹುದು. ಅವರಿಗೆ ಅವಮಾನ ಆಗುವಂತಹ ಕೆಲಸವನ್ನು ಮಾಡಬೇಡಿ. ಪುನೀತ್​ಗೆ ಅವಮಾನ ಆಗುವಂತೆ ನಮ್ಮ ಚಿತ್ರರಂಗದವರು ನಡೆದುಕೊಂಡಿರುವು ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದರು.

ವಿವಾದ ಹೆಚ್ಚಾದ ಬಳಿಕ ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ.

 

“ಅಪ್ಪು ಅವರ ಅಗಲಿಕೆಯ ನೋವು ಇನ್ನೂ ನಮ್ಮ ಮನಸ್ಸಿನಲ್ಲಿದೆ. ಆ ಕಾರಣಕ್ಕೆ ನ.4 ಕ್ಕೆ ಬಿಡುಗಡೆಯಾಗಬೇಕಿದ್ದ ಏಕ್ ಲವ್ ಯಾ ಸಿನಿಮಾದ ಹಾಡನ್ನು ನ.12 ಕ್ಕೆ ಬಿಡುಗಡೆ ಮಾಡಲಾಯಿತು. ಸಮಾರಂಭದ ಉದ್ಘಾಟನೆಯೇ ಅಪ್ಪು ಅವರನ್ನು ನೆನೆಯುತ್ತಾ, ಅವರ ವ್ಯಕ್ತಿತ್ವ, ಅವರ ಜೊತೆಗೆ ಕಳೆದ ಕ್ಷಣಗಳ ನೆನೆಯುತ್ತಾ ಶುರುವಾಯಿತು. ಈ ಹಾಡು ಶುರುವಾಗುವುದೇ ಅಪ್ಪು ಅಮರ ಎಂದು. ಅಪ್ಪು ಅವರ ಫೋಟೋ ಮುಂದೆ ಶಾಂಪೇನ್ ಓಪನ್ ಮಾಡಿದ ಉದ್ದೇಶ ಕೇವಲ ಹಾಡು ಬಿಡುಗಡೆಯ ಅಂಗವಾಗಿ. ಇದರಿಂದ ಅಪ್ಪು ಅವರ ಅಭಿಮಾನಿಗಳಿಗೆ ನೋವಾಗಿದ್ದಲ್ಲಿ ನನ್ನ ಹಾಗೂ ನನ್ನ ಇಡೀ ’ಏಕ್ ಲವ್ ಯಾ’ ಚಿತ್ರತಂಡದಿಂದ ಕ್ಷಮೆಯಾಚಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜಕುಮಾರ್ ‘ನಮ್ಮ ಅಪ್ಪು’ ಆದದ್ದು..: ಕೆ.ಫಣಿರಾಜ್

ನಟಿ ರಚಿತಾ ರಾಮ್ ಕೂಡ ಕ್ಷಮೆ ಕೇಳಿದ್ದಾರೆ.

“ನಿನ್ನೆಯ ಏಕ್​ ಲವ್​ ಯಾ ಸಿನಿಮಾದ ಸಾಂಗ್​ ಲಾಂಚ್​ ಕಾರ್ಯಕ್ರಮದಲ್ಲಿ ಶಾಂಪೇನ್​ ಬಾಟಲ್​ ಓಪನ್​ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನ ಆಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ. ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ ಕ್ಷಮೆ ಕೇಳುತ್ತೇನೆ. ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಆದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ” ಎಂದು ರಚಿತಾ ರಾಮ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಚಿತ್ರದ ನಿರ್ಮಾಪಕಿ ರಕ್ಷಿತಾ ಪ್ರೇಮ್ ಕೂಡ ’ಅಪ್ಪು ಅಗಲಿಕೆಯ ನೋವಿನಿಂದ ನಾನಿನ್ನೂ ಹೊರ ಬರಲು ಸಾಧ್ಯವಾಗುತ್ತಿಲ್ಲ. ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಶಾಂಪೇನ್ ಬಾಟಲಿ ಓಪನ್ ಮಾಡಿದ್ದು ಅಪ್ಪು ಅಭಿಮಾನಿಗಳಲ್ಲಿ ಅಸಮಾಧಾನ ಉಂಟಾಗಿದ್ದರೆ ನನ್ನ ಮತ್ತು ಚಿತ್ರತಂಡದ ಕಡೆಯಿಂದ ಕ್ಷಮೆಯಾಚಿಸುತ್ತೇವೆ. ಅಪ್ಪು ಎಂದಿಗೂ ನಮ್ಮ ಮನಸ್ಸಿನಲ್ಲಿ ಇದ್ದಾರೆ’ ಎಂದು ಕ್ಷಮೆ ಕೇಳಿದ್ದಾರೆ.


ಇದ ಓದಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...