Homeಮುಖಪುಟಚುನಾವಣೆ- 2022: ಗೋವಾ-ಮಣಿಪುರಕ್ಕೆ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ; ಯುಪಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮುಂದೂಡಿದ ಬಿಜೆಪಿ!

ಚುನಾವಣೆ- 2022: ಗೋವಾ-ಮಣಿಪುರಕ್ಕೆ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ; ಯುಪಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮುಂದೂಡಿದ ಬಿಜೆಪಿ!

- Advertisement -
- Advertisement -

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 8 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಮತ ನೀಡುವಂತೆ ಮತದಾರರನ್ನು ಒಲಿಸಿಕೊಳ್ಳಲು ಭಾರಿ ಕಸರತ್ತು ನಡೆಸುತ್ತಿವೆ.

ಐದು ರಾಜ್ಯಗಳ ಚುನಾವಣಾ ಕಣದ ಇಂದಿನ ಪ್ರಮುಖ ಅಂಶಗಳು ಹೀಗಿವೆ:

1. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲು ನಿರ್ಧರಿಸಿತ್ತು. ಆದರೆ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರಣಾಳಿಕೆ ಬಿಡುಗಡೆಯನ್ನು ಮುಂದೂಡಿದೆ.

2. ಪಂಜಾಬ್ ಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಸಿಎಂ ಅಭ್ಯರ್ಥಿ ಚರಣ್‌ ಜಿತ್‌ ಚನ್ನಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಘೋಷಿಸಿದ್ದಾರೆ.

3. ಪಂಜಾಬ್‌ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿರುವ ಸುನೀಲ್ ಜಾಖರ್ ಅವರು ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂದು ಎಎಪಿ ಬಂಡಾಯ ಶಾಸಕ ಕನ್ವರ್ ಸಂಧು ಟ್ವೀಟ್‌ ಮಾಡಿದ್ದಾರೆ. ಆದರೆ, ಕಾಂಗ್ರೆಸ್‌ನಿಂದ ಯಾವುದೇ ಸ್ಪಷ್ಟನೆ ದೊರೆತಿಲ್ಲ.

4. ಕೊರೊನಾ ಹಿನ್ನೆಲೆಯಲ್ಲಿ ಐದು ರಾಜ್ಯಗಳಲ್ಲಿಯೂ ದೈಹಿಕ ಪ್ರಚಾರವನ್ನು ನಿರ್ಬಂಧಿಸಿದ್ದ ಚುನಾವಣಾ ಆಯೋಗ, ಭಾನುವಾರ ನಿರ್ಬಂಧಗಳನ್ನು ಸಡಿಸಿಲಿದೆ. ಸೈಕಲ್‌ ಜಾಥಾ, ವಾಹನ ರ್‍ಯಾಲಿ, ರೋಡ್‌ ಶೋಗಳ ಮೇಲಿನ ನಿರ್ಬಂಧಗಳು ಮುಂದುವರಿಯಲಿದ್ದು, ಒಳಾಂಗಣ, ಹೋರಾಂಗಣ ಸಭೆ, ಸಮಾವೇಶಗಳಿಗೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ: ಚರಣ್‌ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ- ರಾಹುಲ್ ಗಾಂಧಿ ಘೋಷಣೆ

5. ಮಣಿಪುರದಲ್ಲಿ ಕಾಂಗ್ರೆಸ್‌ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದು ಮಣಿಪುರದ ಉಳಿವು ಮತ್ತು ಪುನರುಜ್ಜೀವನಕ್ಕಾಗಿ ಕಾಂಗ್ರೆಸ್‌ ಶ್ರಮಿಸಲಿದೆ. ಅಲ್ಲದೆ, ರಾಜ್ಯದ ಅಭಿವೃದ್ಧಿಯನ್ನು ಉನ್ನತ ಮಟ್ಟಕ್ಕೇರಿಸುವ ಪ್ರಣಾಳಿಕೆ ಇದಾಗಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ.

6. ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಇಂಫಾಲ್ ಪೂರ್ವ ಜಿಲ್ಲೆಯ ಹೀಂಗಾಂಗ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅವರು ಹೀಂಗಾಂಗ್‌ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಜಯಗಳಿಸಿದ್ದು, ಇದೀಗ ಅವರು ಐದನೇ ಅವಧಿಗೆ ಚುನಾವಣೆಯನ್ನು ಎದುರಿಸಲಿದ್ದಾರೆ.

7. ಗೋವಾ ಚುನಾವಣೆಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಗೋವಾದಲ್ಲಿ 2018ರಿಂದ ಸ್ಥಗಿತಗೊಂಡಿರುವ ಗಣಿಗಾರಿಕೆಯನ್ನು ಮರಳಿ ಆರಂಭಿಸುವುದಾಗಿ ಭರವಸೆ ನೀಡಿದೆ. ಗೋವಾದ ಪ್ರಮುಖ ಆದಾಯ ಮೂಲಗಳಲ್ಲಿ ಗಣಿಗಾರಿಕೆಯೂ ಒಂದಾಗಿದೆ.

8. ಗೋವಾದ 20 ವಿಧಾನಸಭಾ ಕ್ಷೇತ್ರಗಳನ್ನು ಉದ್ದೇಶಿಸಿ ಬಿಜೆಪಿ ಆಯೋಜಿಸಿರುವ ವರ್ಚುವಲ್‌ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿ ಮಾತನಾಡಿದ್ದಾರೆ. ಅವರು, ಡಬಲ್ ಇಂಜಿನ್ ಬಿಜೆಪಿ ಸರ್ಕಾರಗಳು ಗೋವಾದ ಜನರಿಗೆ ಸ್ಥಿರತೆ ಮತ್ತು ಉತ್ತಮ ಆಡಳಿತವನ್ನು ನೀಡಿದೆ. ಮುಂದೆಯೂ ನೀಡುತ್ತದೆ ಎಂದು ಹೇಳಿದ್ದಾರೆ.

9. ಕಾಂಗ್ರೆಸ್ ಮುಖಂಡ ಹರೀಶ್ ರಾವತ್ ಅವರ ಮಾರ್ಪ್‌ ಮಾಡಿದ ಚಿತ್ರವನ್ನು ಟ್ವೀಟ್‌ ಮಾಡಿದ್ದ ಬಿಜೆಪಿ, ರಾವತ್‌ ಅವರನ್ನು ಮುಸ್ಲಿಂ ಧರ್ಮಗುರು ಎಂದು ಬರೆದಿತ್ತು. ಇದು ಪ್ರಚೋದನಾಕಾರಿ ಮತ್ತು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಹೇಳಿರುವ ಚುನಾವಣಾ ಆಯೋಗ, ಉತ್ತರಾಖಂಡ ಬಿಜೆಪಿಗೆ ನೋಟಿಸ್‌ ನೀಡಿದೆ. ಬಿಜೆಪಿ ಟ್ವೀಟ್‌ ಅಳಿಸಿದೆ.


ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಚುನಾವಣೆಯಲ್ಲಿ BJP ಸೇರಿದಂತೆ ಯಾರ ಜೊತೆಯೂ ಮೈತ್ರಿಯಿಲ್ಲ; ಏಕಾಂಗಿ ಹೋರಾಟ: ಎಐಎಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...