ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕರ್ನಾಟಕ ಬಿಜೆಪಿ ಮಾಜಿ ಮುಖ್ಯಸ್ಥ ನಳಿನ್ ಕುಮಾರ್ ಕಟೀಲ್ ಮತ್ತು ಹೆಸರಿಸದ ಇಡಿ ಅಧಿಕಾರಿಗಳ ವಿರುದ್ಧ ಬೆಂಗಳೂರು ಪೊಲೀಸರು ದಾಖಲಿಸಿರುವ ‘ಚುನಾವಣಾ ಬಾಂಡ್‌ಗಳ ಸುಲಿಗೆ ಪ್ರಕರಣ’ಕ್ಕೆ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಸೋಮವಾರ ತಡೆ ನೀಡಿದೆ. ಪ್ರಕರಣದ ತನಿಖೆ ಮತ್ತು ಮುಂದಿನ ಪ್ರಕ್ರಿಯೆಗೆ ತಡೆ ನೀಡುವಂತೆ ನಳಿನ್ ಕುಮಾರ್ ಕಟೀಲ್ ಕರ್ನಾಟಕ ಹೈಕೋರ್ಟ್‌ನ ಮೊರೆ ಹೋಗಿದ್ದರು.ಚುನಾವಣಾ ಬಾಂಡ್ ಸುಲಿಗೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಅರ್ಜಿಯಲ್ಲಿ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿ, ದೂರಿನಲ್ಲಿ ಯಾವುದೇ ಸುಲಿಗೆ ಪ್ರಕರಣ ದಾಖಲಾಗಿಲ್ಲ ಎಂದು ಹೇಳಿದರು. ಖಾಸಗಿ ದೂರುದಾರರ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿ, ಚುನಾವಣಾ ಬಾಂಡ್‌ಗಳ ಯೋಜನೆಯು ಸುಲಿಗೆಯ ಒಂದು ದೊಡ್ಡ ಪ್ರಕರಣವಾಗಿದ್ದು, ಇಡಿ ಮೂಲಕ ಭಯ ಹುಟ್ಟಿಸಿ ಕೆಲವು ಕಂಪನಿಗಳು ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಲಾಗಿದೆ ಎಂದು ವಾದಿಸಿದ್ದಾರೆ.
ಇದನ್ನೂಓದಿ: ‘ಸುಲಿಗೆ’ | ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನಲ್ಲಿ FIR
ಚುನಾವಣಾ ಬಾಂಡ್‌ಗಳ ಯೋಜನೆಯ ಮೂಲಕ ಸುಲಿಗೆ ಆರೋಪದ ಪ್ರಕರಣದ ತನಿಖೆಯನ್ನು ಸಮರ್ಥಿಸಲು ಪ್ರಶಾಂತ್ ಭೂಷಣ್ ಮತ್ತು ಇತರರು ಮಂಡಿಸಿದ ಎಲ್ಲಾ ವಿಷಯಗಳನ್ನು ಹೈಕೋರ್ಟ್‌ನ ದಸರಾ ರಜೆಯ ನಂತರದ ವಿಚಾರಣೆಯ ಸಮಯದಲ್ಲಿ ಪರಿಗಣಿಸಲಾಗುವುದು ಎಂದು ಏಕಸದಸ್ಯ ಪೀಠ ಸೂಚಿಸಿದೆ.ಚುನಾವಣಾ ಬಾಂಡ್ ಸುಲಿಗೆ
ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ ಅಯ್ಯರ್ ಅವರು ಸಲ್ಲಿಸಿದ್ದ ಖಾಸಗಿ ದೂರನ್ನು ಸ್ಥಳೀಯ ನ್ಯಾಯಾಲಯವು ತನಿಖೆಗಾಗಿ ಪೊಲೀಸರಿಗೆ ಉಲ್ಲೇಖಿಸಿದ ನಂತರ ಬೆಂಗಳೂರು ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದರು. ಬೆಂಗಳೂರಿನ ತಿಲಕನಗರ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 384 ಮತ್ತು 120 ಬಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಜಾರಿ ನಿರ್ದೇಶನಾಲಯದ ಕ್ರಮದ ಬೆದರಿಕೆಯ ಮೂಲಕ ಕೇಂದ್ರ ಹಣಕಾಸು ಸಚಿವರು ಮತ್ತು ಇತರರು ಎಲೆಕ್ಟೋರಲ್ ಬಾಂಡ್‌ಗಳ ಯೋಜನೆಯಿಂದ ಕಾರ್ಪೊರೇಟ್ ಕಂಪೆನಿಗಳಿಂದ 8,000 ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದ್ದಾರೆ ಎಂದು ದೂರುದಾರ ಆದರ್ಶ್ ಅಯ್ಯರ್ ಆರೋಪಿಸಿದ್ದಾರೆ.
ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ


