Homeಕರ್ನಾಟಕಚುನಾವಣಾ ಬಾಂಡ್ ಸುಲಿಗೆ | ನಿರ್ಮಲಾ ಸೀತಾರಾಮನ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಚುನಾವಣಾ ಬಾಂಡ್ ಸುಲಿಗೆ | ನಿರ್ಮಲಾ ಸೀತಾರಾಮನ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕರ್ನಾಟಕ ಬಿಜೆಪಿ ಮಾಜಿ ಮುಖ್ಯಸ್ಥ ನಳಿನ್ ಕುಮಾರ್ ಕಟೀಲ್ ಮತ್ತು ಹೆಸರಿಸದ ಇಡಿ ಅಧಿಕಾರಿಗಳ ವಿರುದ್ಧ ಬೆಂಗಳೂರು ಪೊಲೀಸರು ದಾಖಲಿಸಿರುವ ‘ಚುನಾವಣಾ ಬಾಂಡ್‌ಗಳ ಸುಲಿಗೆ ಪ್ರಕರಣ’ಕ್ಕೆ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಸೋಮವಾರ ತಡೆ ನೀಡಿದೆ. ಪ್ರಕರಣದ ತನಿಖೆ ಮತ್ತು ಮುಂದಿನ ಪ್ರಕ್ರಿಯೆಗೆ ತಡೆ ನೀಡುವಂತೆ ನಳಿನ್ ಕುಮಾರ್ ಕಟೀಲ್ ಕರ್ನಾಟಕ ಹೈಕೋರ್ಟ್‌ನ ಮೊರೆ ಹೋಗಿದ್ದರು.ಚುನಾವಣಾ ಬಾಂಡ್ ಸುಲಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಅರ್ಜಿಯಲ್ಲಿ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿ, ದೂರಿನಲ್ಲಿ ಯಾವುದೇ ಸುಲಿಗೆ ಪ್ರಕರಣ ದಾಖಲಾಗಿಲ್ಲ ಎಂದು ಹೇಳಿದರು. ಖಾಸಗಿ ದೂರುದಾರರ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿ, ಚುನಾವಣಾ ಬಾಂಡ್‌ಗಳ ಯೋಜನೆಯು ಸುಲಿಗೆಯ ಒಂದು ದೊಡ್ಡ ಪ್ರಕರಣವಾಗಿದ್ದು, ಇಡಿ ಮೂಲಕ ಭಯ ಹುಟ್ಟಿಸಿ ಕೆಲವು ಕಂಪನಿಗಳು ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಲಾಗಿದೆ ಎಂದು ವಾದಿಸಿದ್ದಾರೆ.

ಇದನ್ನೂಓದಿ: ‘ಸುಲಿಗೆ’ | ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನಲ್ಲಿ FIR

ಚುನಾವಣಾ ಬಾಂಡ್‌ಗಳ ಯೋಜನೆಯ ಮೂಲಕ ಸುಲಿಗೆ ಆರೋಪದ ಪ್ರಕರಣದ ತನಿಖೆಯನ್ನು ಸಮರ್ಥಿಸಲು ಪ್ರಶಾಂತ್ ಭೂಷಣ್ ಮತ್ತು ಇತರರು ಮಂಡಿಸಿದ ಎಲ್ಲಾ ವಿಷಯಗಳನ್ನು ಹೈಕೋರ್ಟ್‌ನ ದಸರಾ ರಜೆಯ ನಂತರದ ವಿಚಾರಣೆಯ ಸಮಯದಲ್ಲಿ ಪರಿಗಣಿಸಲಾಗುವುದು ಎಂದು ಏಕಸದಸ್ಯ ಪೀಠ ಸೂಚಿಸಿದೆ.ಚುನಾವಣಾ ಬಾಂಡ್ ಸುಲಿಗೆ

ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ ಅಯ್ಯರ್ ಅವರು ಸಲ್ಲಿಸಿದ್ದ ಖಾಸಗಿ ದೂರನ್ನು ಸ್ಥಳೀಯ ನ್ಯಾಯಾಲಯವು ತನಿಖೆಗಾಗಿ ಪೊಲೀಸರಿಗೆ ಉಲ್ಲೇಖಿಸಿದ ನಂತರ ಬೆಂಗಳೂರು ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದರು. ಬೆಂಗಳೂರಿನ ತಿಲಕನಗರ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 384 ಮತ್ತು 120 ಬಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜಾರಿ ನಿರ್ದೇಶನಾಲಯದ ಕ್ರಮದ ಬೆದರಿಕೆಯ ಮೂಲಕ ಕೇಂದ್ರ ಹಣಕಾಸು ಸಚಿವರು ಮತ್ತು ಇತರರು ಎಲೆಕ್ಟೋರಲ್ ಬಾಂಡ್‌ಗಳ ಯೋಜನೆಯಿಂದ ಕಾರ್ಪೊರೇಟ್‌ ಕಂಪೆನಿಗಳಿಂದ 8,000 ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದ್ದಾರೆ ಎಂದು ದೂರುದಾರ ಆದರ್ಶ್‌ ಅಯ್ಯರ್ ಆರೋಪಿಸಿದ್ದಾರೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...