ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ ಭಾನುವಾರ (ಅ. 19) ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿರುದ್ದ ವಾಗ್ದಾಳಿ ನಡೆಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ರಾಜ್ಯದ ಮತದಾರರ ಪಟ್ಟಿಗೆ ಸುಮಾರು 96 ಲಕ್ಷ ನಕಲಿ ಮತದಾರರನ್ನು ಸೇರಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಮುಂಬೈನ ಗೋರೆಗಾಂವ್‌ನ ನೆಸ್ಕೋದಲ್ಲಿ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಯಾವುದೇ ಚುನಾವಣೆ ನಡೆಯುವ ಮೊದಲು ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಬೇಕು. ಮತದಾರರ ಪಟ್ಟಿಯನ್ನು ತಿರುಚುವುದು ‘ಪ್ರಜಾಪ್ರಭುತ್ವದ ಅಣಕ’ ಎಂದಿದ್ದಾರೆ.
ಮುಂಬೈ ಒಂದರಲ್ಲೇ 8–10 ಲಕ್ಷ ನಕಲಿ ಮತದಾರರಿದ್ದಾರೆ. ಥಾಣೆ, ಪುಣೆ ಮತ್ತು ನಾಸಿಕ್‌ಗಳಲ್ಲಿಯೂ ಇಷ್ಟೇ ಸಂಖ್ಯೆಯ ನಕಲಿ ಮತದಾರನ್ನು ಸೇರಿಸಲಾಗಿದೆ. ಪ್ರತಿ ಹಳ್ಳಿ, ನಗರಗಳಲ್ಲಿ ನಕಲಿ ಮತದಾರರನ್ನು ಸೇರಿಸಲಾಗಿದೆ. ಈ ರೀತಿ ಚುನಾವಣೆಗಳು ನಡೆದರೆ, ಅದು ಮಹಾರಾಷ್ಟ್ರ ಮತ್ತು ದೇಶದ ಮತದಾರರಿಗೆ ಮಾಡುವ ಅವಮಾನ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.
ಆಡಳಿತ ಪಕ್ಷವು ಮತದಾರರ ಪಟ್ಟಿಗೆ ನಕಲಿ ಮತದಾರರನ್ನು ತುಂಬಿಸುವ ಮೂಲಕ ಚುನಾವಣೆಗಳನ್ನು ಗೆಲ್ಲಲು ಪ್ರಯತ್ನಿಸುತ್ತಿದೆ. ನೀವು ಮತ ಚಲಾಯಿಸುತ್ತೀರೋ ಇಲ್ಲವೋ ಎಂಬುದು ಮುಖ್ಯವಲ್ಲ. ಹೊಂದಾಣಿಕೆ ಈಗಾಗಲೇ ಫಿಕ್ಸ್ ಆಗಿದೆ ಎಂದು ಠಾಕ್ರೆ ಆರೋಪಿಸಿದ್ದು, ಪ್ರಜಾಪ್ರಭುತ್ವ ಪ್ರಕ್ರಿಯೆಯ ನ್ಯಾಯಸಮ್ಮತತೆಯನ್ನು ಪ್ರಶ್ನಿಸಿದ್ದಾರೆ.
ಎಂಎನ್‌ಎಸ್‌ನ ಕಳಪೆ ಚುನಾವಣಾ ಪ್ರದರ್ಶನದ ಟೀಕಾಕಾರರಿಗೂ ಅವರು ಪ್ರತಿಕ್ರಿಯಿಸಿದ ಅವರು, ಮತದಾರರ ದತ್ತಾಂಶವು ನ್ಯಾಯಯುತ ಪ್ರಾತಿನಿಧ್ಯವನ್ನು ದುರ್ಬಲಗೊಳಿಸುತ್ತದೆ. ಮತದಾನದ ಲೆಕ್ಕಚಾರವೇ ರಾಜಿ ಮಾಡಿಕೊಂಡರೆ ನನ್ನ ಪಕ್ಷವು ಶಾಸಕರು ಮತ್ತು ಸಂಸದರನ್ನು ಹೊಂದಲು ಹೇಗೆ ಸಾಧ್ಯ? ಎಂದಿದ್ದಾರೆ.
ಭಾಷಣದ ವೇಳೆ ರಾಜ್ ಠಾಕ್ರೆ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿ ಅವರು ಚುನಾವಣಾ ಆಯೋಗವನ್ನು ಟೀಕಿಸಿದ್ದ ಒಂದು ವಿಡಿಯೋ ತುಣುಕನ್ನು ಪ್ರದರ್ಶಿಸಿದ್ದು, ಈಗ ಬಿಜೆಪಿ ಅಧಿಕಾರದಲ್ಲಿರುವಾಗ ಅವರು ಬೂಟಾಟಿಕೆ ಎಂದು ಕರೆದದ್ದನ್ನು ಎತ್ತಿ ತೋರಿಸಿದ್ದಾರೆ.
ಆಡಳಿತ ಪಕ್ಷದ ಶಾಸಕರು ಮತದಾರರ ಪಟ್ಟಿ ತಿರುಚುವಿಕೆಯನ್ನು ಖಾಸಗಿಯಾಗಿ ಒಪ್ಪಿಕೊಂಡಿದ್ದಾರೆ ಎಂದು ಆರೋಪಿಸಿದ ರಾಜ್ ಠಾಕ್ರೆ, ಜುಲೈ 25ರ ನಂತರ ಮತದಾರರ ಪಟ್ಟಿ ಪರಿಷ್ಕರಣೆ ಸ್ಥಗಿತಗೊಳಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಟೀಕಿಸಿದ್ದಾರೆ. ಇದು ಸಾವಿರಾರು ಯುವ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಲಿದೆ ಎಂದಿದ್ದಾರೆ.
ಬ್ಯಾಲೆಟ್ ಪೇಪರ್ ಮತದಾನ
ಬ್ಯಾಲೆಟ್ ಪೇಪರ್ ಮತದಾನಕ್ಕೆ ಮರಳಬೇಕೆಂದು ರಾಜ್ ಠಾಕ್ರೆ ಒತ್ತಾಯಿಸಿದ್ದು, ಇದು ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸವನ್ನು ಪುನಃಸ್ಥಾಪಿಸುತ್ತದೆ ಎಂದು ವಾದಿಸಿದ್ದಾರೆ.
ಮತಾಂತರ ನಿಷೇಧ ಕಾಯ್ದೆಯಡಿ ದಾಖಲಿಸಿದ್ದ 5 ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್


