Homeಮುಖಪುಟಮಹಾರಾಷ್ಟ್ರದ ಮತದಾರರ ಪಟ್ಟಿಗೆ ಚುನಾವಣಾ ಆಯೋಗ 96 ಲಕ್ಷ ನಕಲಿ ಮತದಾರರನ್ನು ಸೇರಿಸಿದೆ : ರಾಜ್...

ಮಹಾರಾಷ್ಟ್ರದ ಮತದಾರರ ಪಟ್ಟಿಗೆ ಚುನಾವಣಾ ಆಯೋಗ 96 ಲಕ್ಷ ನಕಲಿ ಮತದಾರರನ್ನು ಸೇರಿಸಿದೆ : ರಾಜ್ ಠಾಕ್ರೆ ಆರೋಪ

- Advertisement -
- Advertisement -

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ ಭಾನುವಾರ (ಅ. 19) ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿರುದ್ದ ವಾಗ್ದಾಳಿ ನಡೆಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ರಾಜ್ಯದ ಮತದಾರರ ಪಟ್ಟಿಗೆ ಸುಮಾರು 96 ಲಕ್ಷ ನಕಲಿ ಮತದಾರರನ್ನು ಸೇರಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಮುಂಬೈನ ಗೋರೆಗಾಂವ್‌ನ ನೆಸ್ಕೋದಲ್ಲಿ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಯಾವುದೇ ಚುನಾವಣೆ ನಡೆಯುವ ಮೊದಲು ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಬೇಕು. ಮತದಾರರ ಪಟ್ಟಿಯನ್ನು ತಿರುಚುವುದು ‘ಪ್ರಜಾಪ್ರಭುತ್ವದ ಅಣಕ’ ಎಂದಿದ್ದಾರೆ.

ಮುಂಬೈ ಒಂದರಲ್ಲೇ 8–10 ಲಕ್ಷ ನಕಲಿ ಮತದಾರರಿದ್ದಾರೆ. ಥಾಣೆ, ಪುಣೆ ಮತ್ತು ನಾಸಿಕ್‌ಗಳಲ್ಲಿಯೂ ಇಷ್ಟೇ ಸಂಖ್ಯೆಯ ನಕಲಿ ಮತದಾರನ್ನು ಸೇರಿಸಲಾಗಿದೆ. ಪ್ರತಿ ಹಳ್ಳಿ, ನಗರಗಳಲ್ಲಿ ನಕಲಿ ಮತದಾರರನ್ನು ಸೇರಿಸಲಾಗಿದೆ. ಈ ರೀತಿ ಚುನಾವಣೆಗಳು ನಡೆದರೆ, ಅದು ಮಹಾರಾಷ್ಟ್ರ ಮತ್ತು ದೇಶದ ಮತದಾರರಿಗೆ ಮಾಡುವ ಅವಮಾನ ಎಂದು ರಾಜ್‌ ಠಾಕ್ರೆ ಹೇಳಿದ್ದಾರೆ.

ಆಡಳಿತ ಪಕ್ಷವು ಮತದಾರರ ಪಟ್ಟಿಗೆ ನಕಲಿ ಮತದಾರರನ್ನು ತುಂಬಿಸುವ ಮೂಲಕ ಚುನಾವಣೆಗಳನ್ನು ಗೆಲ್ಲಲು ಪ್ರಯತ್ನಿಸುತ್ತಿದೆ. ನೀವು ಮತ ​​ಚಲಾಯಿಸುತ್ತೀರೋ ಇಲ್ಲವೋ ಎಂಬುದು ಮುಖ್ಯವಲ್ಲ. ಹೊಂದಾಣಿಕೆ ಈಗಾಗಲೇ ಫಿಕ್ಸ್ ಆಗಿದೆ ಎಂದು ಠಾಕ್ರೆ ಆರೋಪಿಸಿದ್ದು, ಪ್ರಜಾಪ್ರಭುತ್ವ ಪ್ರಕ್ರಿಯೆಯ ನ್ಯಾಯಸಮ್ಮತತೆಯನ್ನು ಪ್ರಶ್ನಿಸಿದ್ದಾರೆ.

ಎಂಎನ್‌ಎಸ್‌ನ ಕಳಪೆ ಚುನಾವಣಾ ಪ್ರದರ್ಶನದ ಟೀಕಾಕಾರರಿಗೂ ಅವರು ಪ್ರತಿಕ್ರಿಯಿಸಿದ ಅವರು, ಮತದಾರರ ದತ್ತಾಂಶವು ನ್ಯಾಯಯುತ ಪ್ರಾತಿನಿಧ್ಯವನ್ನು ದುರ್ಬಲಗೊಳಿಸುತ್ತದೆ. ಮತದಾನದ ಲೆಕ್ಕಚಾರವೇ ರಾಜಿ ಮಾಡಿಕೊಂಡರೆ ನನ್ನ ಪಕ್ಷವು ಶಾಸಕರು ಮತ್ತು ಸಂಸದರನ್ನು ಹೊಂದಲು ಹೇಗೆ ಸಾಧ್ಯ? ಎಂದಿದ್ದಾರೆ.

ಭಾಷಣದ ವೇಳೆ ರಾಜ್ ಠಾಕ್ರೆ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿ ಅವರು ಚುನಾವಣಾ ಆಯೋಗವನ್ನು ಟೀಕಿಸಿದ್ದ ಒಂದು ವಿಡಿಯೋ ತುಣುಕನ್ನು ಪ್ರದರ್ಶಿಸಿದ್ದು, ಈಗ ಬಿಜೆಪಿ ಅಧಿಕಾರದಲ್ಲಿರುವಾಗ ಅವರು ಬೂಟಾಟಿಕೆ ಎಂದು ಕರೆದದ್ದನ್ನು ಎತ್ತಿ ತೋರಿಸಿದ್ದಾರೆ.

ಆಡಳಿತ ಪಕ್ಷದ ಶಾಸಕರು ಮತದಾರರ ಪಟ್ಟಿ ತಿರುಚುವಿಕೆಯನ್ನು ಖಾಸಗಿಯಾಗಿ ಒಪ್ಪಿಕೊಂಡಿದ್ದಾರೆ ಎಂದು ಆರೋಪಿಸಿದ ರಾಜ್ ಠಾಕ್ರೆ, ಜುಲೈ 25ರ ನಂತರ ಮತದಾರರ ಪಟ್ಟಿ ಪರಿಷ್ಕರಣೆ ಸ್ಥಗಿತಗೊಳಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಟೀಕಿಸಿದ್ದಾರೆ. ಇದು ಸಾವಿರಾರು ಯುವ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಲಿದೆ ಎಂದಿದ್ದಾರೆ.

ಬ್ಯಾಲೆಟ್ ಪೇಪರ್ ಮತದಾನ

ಬ್ಯಾಲೆಟ್ ಪೇಪರ್ ಮತದಾನಕ್ಕೆ ಮರಳಬೇಕೆಂದು ರಾಜ್ ಠಾಕ್ರೆ ಒತ್ತಾಯಿಸಿದ್ದು, ಇದು ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸವನ್ನು ಪುನಃಸ್ಥಾಪಿಸುತ್ತದೆ ಎಂದು ವಾದಿಸಿದ್ದಾರೆ.

ಮತಾಂತರ ನಿಷೇಧ ಕಾಯ್ದೆಯಡಿ ದಾಖಲಿಸಿದ್ದ 5 ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...