HomeಅಂಕಣಗಳುKarnataka against SIR‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್...

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

- Advertisement -
- Advertisement -

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರು ಚುನಾವಣಾ ಆಯೋಗ ಮತ್ತು ಸರ್ಕಾರದ ವಿರುದ್ಧ ಕಟು ಶಬ್ದಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಇದು ಲೂಟಿಕೋರರ ಆಯೋಗ’: ಯೂಸುಫ್ ಕನ್ನಿ ಆರೋಪ

ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಜಮಾತ್ ಎ ಇಸ್ಲಾಮಿ ಹಿಂದ್ (ಕರ್ನಾಟಕ) ರಾಜ್ಯ ಕಾರ್ಯದರ್ಶಿ ಯೂಸುಫ್ ಕನ್ನಿ ಅವರು ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, “ಇದು ಚುನಾವಣಾ ಆಯೋಗ ಅಲ್ಲ, ಇದು ಲೂಟಿಕೋರರ ಆಯೋಗ” ಎಂದು ತೀವ್ರ ಆಕ್ರೋಶ ವ್ಯಕ್ತ ಪಡಿಸಿದರು. 

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಮಾತನಾಡಿದ ಅವರು, “ಕಳೆದ ಹಲವಾರು ತಿಂಗಳುಗಳಿಂದ ನಾವು ಎಸ್‌ಐಆರ್ ಕುರಿತು ರಾಜ್ಯಾದ್ಯಂತ ಜಾಗೃತಿ ಮೂಡಿಸುತ್ತಿದ್ದೇವೆ. ಪಟ್ಟಿಯಲ್ಲಿರುವ ಗಂಭೀರ ಲೋಪದೋಷಗಳ ಬಗ್ಗೆ ಚುನಾವಣಾ ಆಯೋಗದ ಅಧಿಕಾರಿಗಳನ್ನು ಹಲವು ಬಾರಿ ಭೇಟಿ ಮಾಡಿ, ನೂರಾರು ಅರ್ಜಿಗಳನ್ನು ಸಲ್ಲಿಸಿದ್ದರೂ ಈವರೆಗೆ ನಮಗೆ ಒಂದೇ ಒಂದು ಅಧಿಕೃತ ಉತ್ತರವೂ ಬಂದಿಲ್ಲ,” ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಆಯೋಗದ ಅಂಕಿ-ಅಂಶಗಳನ್ನು ಪ್ರಶ್ನಿಸಿದ ಅವರು, “ಕರ್ನಾಟಕದಲ್ಲಿ 5.56 ಲಕ್ಷ ಮತದಾರರಿದ್ದಾರೆ ಎಂದು ಹೇಳಿರುವ ಆಯೋಗ, ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ 1.8 ಲಕ್ಷ ಜನರ ಹೆಸರುಗಳನ್ನು ತೆಗೆದುಹಾಕುತ್ತಿದ್ದೇವೆ ಎನ್ನುತ್ತಿದೆ. ಎಎಸ್‌ಡಿಒ (ಅಬ್ಸೆಂಟ್, ಶಿಫ್ಟೆಡ್, ಡೆಡ್, ಅದರ್ಸ್) ನೆಪದಲ್ಲಿ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ನಾಗರಿಕರು ಸ್ಥಳಾಂತರಗೊಳ್ಳಬಾರದೇ? ಗೈರಾಗಬಾರದೇ? ಈ ‘ಅದರ್ಸ್’ ಎನ್ನುವ ವರ್ಗದಲ್ಲಿ ಇರುವವರು ಯಾರು? ಎಂಬ ನೂರಾರು ಪ್ರಶ್ನೆಗಳನ್ನು ಕೇಳಿದರೂ ಆಯೋಗ ಮೌನಕ್ಕೆ ಶರಣಾಗಿದೆ. ಬಾಂಗ್ಲಾದೇಶದಿಂದ ನುಸುಳುಕೋರರು ಬರುತ್ತಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ, ಅವರ ಬಳಿ ಈವರೆಗೆ ಯಾವುದೇ ನಿರ್ದಿಷ್ಟ ಮಾಹಿತಿಯಿಲ್ಲ. ಬದಲಿಗೆ ದೇಶಾದ್ಯಂತ ಸುಮಾರು 8 ಕೋಟಿ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಹೊರಹಾಕಲಾಗುತ್ತಿದೆ,” ಎಂದು ಆತಂಕ ವ್ಯಕ್ತಪಡಿಸಿದರು.

“ಪಟ್ಟಿಯಿಂದ ಹೆಸರನ್ನು ಡಿಲೀಟ್ ಮಾಡಿ, ಮತ್ತೆ ಸೇರ್ಪಡೆಗೊಳ್ಳಲು ಫಾರಂ 6 ನೀಡಿ ಎಂದು ಹೇಳುತ್ತಿದ್ದಾರೆ. ನಾವು ಹೊಸ ಮತದಾರರಲ್ಲ, ಈಗಾಗಲೇ ಮತ ಚಲಾಯಿಸಿದ ಮೂಲ ನಾಗರಿಕರು. ನಾವೇಕೆ ಫಾರಂ 6 ನೀಡಬೇಕು? ನಮಗೆ ಫಾರಂ 8 ಸಲ್ಲಿಸುವ ಹಕ್ಕಿದೆ. ಈ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ. ನಮ್ಮನ್ನು ಬಂಧಿಸಿದರೂ ಅಥವಾ ಹೊಡೆದರೂ ನಾವು ಎದೆಗುಂದುವುದಿಲ್ಲ,” ಎಂದು ಯೂಸುಫ್ ಕನ್ನಿ ಎಚ್ಚರಿಕೆ ನೀಡಿದರು.

ನರಸಿಂಹಯ್ಯ ಕಾಲೋನಿಯಲ್ಲಿ ಸಂವಾದ ನಡೆಸಿ ಸಂತ್ರಸ್ತರೊಂದಿಗೆ ಪ್ರತಿಭಟನೆಗೆ ಧುಮುಕಿದ ಪ್ರಕಾಶ್ ರಾಜ್

ಮತ್ತೊಂದೆಡೆ, ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಅವರು ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿದ್ದ ‘ಚುನಾವಣಾ ಆಯೋಗ ಚಲೋ’ ಕಾರ್ಯಕ್ರಮಕ್ಕೆ ಆಗಮಿಸುವ ಮೊದಲು, ಬೆಂಗಳೂರಿನ ನರಸಿಂಹಯ್ಯ ಕಾಲೋನಿ ಹಾಗೂ ಬಾಪೂಜಿನಗರ ಭಾಗಗಳಲ್ಲಿ ‘ಶಾಶ್ವತ ಸ್ಥಳಾಂತರ’ ಮತ್ತು ಎಸ್‌ಐಆರ್ ನೆಪದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿರುವ ಸಂತ್ರಸ್ತ ಮತದಾರರೊಂದಿಗೆ ನೇರ ಸಂವಾದ ನಡೆಸಿದರು. ಸಂತ್ರಸ್ತರ ಅಳಲನ್ನು ಆಲಿಸಿದ ಅವರು, ಬಳಿಕ ಆ ಸಂತ್ರಸ್ತ ಮತದಾರರೊಂದಿಗೇ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು.

ಸಂವಾದ ಹಾಗೂ ಸಮಾವೇಶದಲ್ಲಿ ಮಾತನಾಡಿದ ಪ್ರಕಾಶ್ ರಾಜ್, “ನಾವು ಈ ದೇಶದ ಮೂಲ ನಿವಾಸಿಗಳು ಮತ್ತು ನಾಗರಿಕರು, ನಾವೇನೂ ಕಳ್ಳರಲ್ಲ. ಆಧಾರ್ ಕಾರ್ಡ್ ಸೇರಿದಂತೆ ಎಲ್ಲಾ ಅಧಿಕೃತ ದಾಖಲೆಗಳನ್ನು ಹೊಂದಿದ್ದರೂ ಜನರನ್ನು ಅನುಮಾನದಿಂದ ನೋಡುವುದು ಅವರ ಸ್ವಾಭಿಮಾನ ಮತ್ತು ಗೌರವಕ್ಕೆ ತರುವ ಧಕ್ಕೆಯಾಗಿದೆ. ಮೋಸ ಮಾಡಿ ವೋಟರ್ ಕಾರ್ಡ್ ಪಡೆದುಕೊಂಡಿದ್ದೇವೆ ಎಂಬಂತೆ ನಮ್ಮನ್ನು ನಡೆಸಿಕೊಳ್ಳಲಾಗುತ್ತಿದೆ. ಭಾರತ ನಮ್ಮ ಮನೆ, ನಾವು ಇಲ್ಲೇ ಹುಟ್ಟಿದವರು. ಆದರೂ ಈಗ ನಾವೇ ಈ ದೇಶದವರು ಎಂದು ಸಾಬೀತುಪಡಿಸಿಕೊಳ್ಳಬೇಕಾದ ದುಸ್ಥಿತಿ ಬಂದಿದೆ,” ಎಂದು ಬೇಸರ ವ್ಯಕ್ತಪಡಿಸಿದರು.

“ಅಕ್ರಮ ಮತದಾರರನ್ನು ತೆಗೆಯುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ದಶಕಗಳಿಂದ ಇಲ್ಲೇ ವಾಸಿಸುತ್ತಿರುವ ಅರ್ಹ ನಾಗರಿಕರನ್ನು ಯಾಕೆ ಪಟ್ಟಿಯಿಂದ ಹೊರಗಿಡಬೇಕು? ದೇಶದಲ್ಲಿ ಒಂದೂವರೆ ಕೋಟಿ ಸಂತ್ರಸ್ತರಿದ್ದು, ನಾನೂ ಅದರಲ್ಲಿ ಒಬ್ಬನಾಗಿದ್ದೇನೆ. ಈಗಾಗಲೇ ಮತದಾರರಾಗಿರುವವರನ್ನೇ ಮತ್ತೆ ತಾವು ಮತದಾರರೆಂದು ಸಾಬೀತುಪಡಿಸಲು ಒತ್ತಾಯಿಸುತ್ತಿರುವುದು ಏತಕ್ಕೆ?” ಎಂದು ಅವರು ಪ್ರಶ್ನಿಸಿದರು.

ಒಟ್ಟಿನಲ್ಲಿ, ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ನಾಗರಿಕರ ಹಕ್ಕು ಕಸಿಯಲಾಗುತ್ತಿದೆ ಎಂಬ ಆರೋಪದೊಂದಿಗೆ ಆಯೋಗಕ್ಕೆ ಮುತ್ತಿಗೆ ಹಾಕಲು ಸಂಘಟನೆಗಳು ನಿರ್ಧರಿಸಿದ್ದು, ಎಸ್‌ಐಆರ್ ವಿರುದ್ಧದ ಈ ಹೋರಾಟವು ರಾಜ್ಯದಲ್ಲಿ ಬಹುದೊಡ್ಡ ಮಟ್ಟದ ಜನಾಕ್ರೋಶಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...