ಬಂಗಾಳ: ಮಮತಾ ಬ್ಯಾನರ್ಜಿಗೆ 24 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ | Naanu gauri

ರಾಜ್ಯದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ವಿರುದ್ಧ ಹೇಳಿಕೆ ನೀಡಿದ್ದದ್ದಾರೆಂದು ಆರೋಪಿಸಿ ಚುನಾವಣಾ ಆಯೋಗ (ಇಸಿ) ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಮುಖಂಡೆ ಮಮತಾ ಬ್ಯಾನರ್ಜಿ ಅವರಿಗೆ ನೋಟಿಸ್ ನೀಡಿದೆ.

ಗುರುವಾರ ರಾತ್ರಿ ಹೊರಡಿಸಿದ ನೋಟಿಸ್‌ನಲ್ಲಿ ಕೇಂದ್ರ ಪಡೆಗಳ ವಿರುದ್ಧ ಹೇಳಿಕೆ ನೀಡಿದ್ದಾರೆಂದು ಆರೋಪಿಸಲಾಗಿದೆ. ನೋಟಿಸ್‌ಗೆ ಶನಿವಾರ ಬೆಳಿಗ್ಗೆ 11 ಗಂಟೆಯೊಳಗೆ ಸ್ಪಂದಿಸುವಂತೆ ಮುಖ್ಯಮಂತ್ರಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

ಚುನಾವಣಾ ಆಯೋಗವು ಬುಧವಾರದಂದು ಕೂಡಾ ಮಮತಾ ಬ್ಯಾನರ್ಜಿ ಅವರಿಗೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ನೋಟಿಸ್ ನೀಡಿತ್ತು. ಹೂಗ್ಲಿಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿರಬೇಕಾದರೆ ಮುಸ್ಲಿಂ ಮತಗಳು ವಿವಿಧ ರಾಜಕೀಯ ಪಕ್ಷಗಳ ನಡುವೆ ವಿಭಜನೆ ಆಗಲು ಬಿಡದಂತೆ ಮುಸ್ಲಿಂ ಮತದಾರರಿಗೆ ಮನವಿ ಮಾಡಿದ್ದಾರೆ ಎಂದು ನೋಟಿಸ್‌ನಲ್ಲಿ ಆಯೋಗವು ಆರೋಪಿಸಿತ್ತು. ಅಲ್ಲದೆ ಮುಂದಿನ 48 ಗಂಟೆಗಳಲ್ಲಿ ನೋಟಿಸ್‌ಗೆ ಪ್ರತಿಕ್ರಿಯಿಸಬೇಕು ಎಂದು ಅವರಿಗೆ ತಿಳಿಸಿತ್ತು.

ಏಪ್ರಿಲ್ 3 ರಂದು ಹೂಗ್ಲಿಯ ತಾರಕೇಶ್ವರದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಅವರು, ಮುಸ್ಲಿಂ ಮತದಾರರ ಮತಗಳು ವಿವಿಧ ರಾಜಕೀಯ ಪಕ್ಷಗಳ ನಡುವೆ ವಿಭಜನೆ ಆಗಲು ಬಿಡದಂತೆ ಮನವಿ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ಬಂದಿದೆ ಎಂದು ಆಯೋಗವು ತನ್ನ ನೋಟಿಸ್‌ನಲ್ಲಿ ತಿಳಿಸಿತ್ತು.

ಇದನ್ನೂ ಓದಿ: ಎರಡೇ ಪದದ ಟ್ವೀಟ್: ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್ ಗಾಂಧಿ

ವಿಡಿಯೋ ನೋಡಿ►► 20 ಲಕ್ಷ ಕೋಟಿಯನ್ನು ಯಾರಿಗೆ ಕೊಟ್ಟರು ಎಂದು ಬಿಜೆಪಿ ಸರ್ಕಾರ ಪಟ್ಟಿ ಬಿಡುಗಡೆ ಮಾಡಲಿ: ಡಿ.ಕೆ. ಶಿವಕುಮಾರ್‌ ಆಕ್ರೋಶ

LEAVE A REPLY

Please enter your comment!
Please enter your name here