Homeಮುಖಪುಟಚುನಾವಣೆ ನಿಗದಿತ ಸಮಯಕ್ಕೆ ನಡೆಯಲಿ ಎಂಬುದು ಎಲ್ಲಾ ಪಕ್ಷಗಳ ಇಚ್ಛೆ: ಚುನಾವಣಾ ಆಯೋಗ

ಚುನಾವಣೆ ನಿಗದಿತ ಸಮಯಕ್ಕೆ ನಡೆಯಲಿ ಎಂಬುದು ಎಲ್ಲಾ ಪಕ್ಷಗಳ ಇಚ್ಛೆ: ಚುನಾವಣಾ ಆಯೋಗ

- Advertisement -
- Advertisement -

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಮತ್ತು ಓಮಿಕ್ರಾನ್ ಪ್ರಕರಣಗಳ ಮಧ್ಯೆ, ಚುನಾವಣಾ ಆಯೋಗವು ಮುಂದಿನ ವರ್ಷ ನಡೆಯಲಿರುವ ರಾಜ್ಯ ಚುನಾವಣೆಗಳು ಮುಂದೂಡುವುದಿಲ್ಲ ಎಂದು ಗುರುವಾರ ಹೇಳಿದೆ.

“ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ನಮ್ಮನ್ನು ಭೇಟಿ ಮಾಡಿದ್ದರು. ಎಲ್ಲಾ ಕೊರೊನಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ ಸಮಯಕ್ಕೆ ಚುನಾವಣೆಗಳನ್ನು ನಡೆಸಬೇಕು ಎಂದು ನಮಗೆ ಮನವಿ ಮಾಡಿದ್ದಾರೆ” ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.

“ಎಲ್ಲಾ ಮತಗಟ್ಟೆಗಳಲ್ಲಿ VVPAT ಗಳನ್ನು ಅಳವಡಿಸಲಾಗುವುದು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು 1 ಲಕ್ಷ ಮತಗಟ್ಟೆಗಳಲ್ಲಿ ಲೈವ್ ವೆಬ್‌ಕಾಸ್ಟಿಂಗ್ ಸೌಲಭ್ಯಗಳು ಲಭ್ಯವಿರುತ್ತವೆ” ಎಂದಿದ್ದಾರೆ.

“2017 ಯುಪಿ ವಿಧಾನಸಭೆ ಚುನಾವಣೆಯಲ್ಲಿ 61% ಮತದಾನವಾಗಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ 59% ಮತದಾನವಾಗಿತ್ತು. ಜನರಲ್ಲಿ ಹೆಚ್ಚಿನ ರಾಜಕೀಯ ಅರಿವು ಇರುವ ರಾಜ್ಯದಲ್ಲಿ ಮತದಾನದ ಶೇಕಡಾವಾರು ಏಕೆ ಕಡಿಮೆಯಾಗಿದೆ ಎಂಬುದು ಆತಂಕದ ವಿಷಯ” ಎಂದು ಯುಪಿ ಚುನಾವಣೆಗಳ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಂದಿನ ವರ್ಷ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಮುಂದೂಡುವ ಸಾಧ್ಯತೆಯಿಲ್ಲ: ಮೂಲಗಳು

2022ರ ಫೆಬ್ರವರಿಯಲ್ಲಿ ನಡೆಯಬೇಕಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳು ಮೂಂದೂಡಬೇಕೆಂದು ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಮನವಿ ಮಾಡಿತ್ತು. ಅಲ್ಲದೆ ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳನ್ನು ಸಹ ರದ್ದುಗೊಳಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದೆ. ಹೆಚ್ಚುತ್ತಿರುವ ಓಮಿಕ್ರಾನ್ ಪ್ರಕರಣಗಳು ತೀವ್ರಥರನಾದ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಕಾರಣದಿಂದ ಈ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ 24 ಗಂಟೆಗಳಲ್ಲಿ 180 ಹೊಸ ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 961 ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ ಗರಿಷ್ಠ 263 ಪ್ರಕರಣಗಳು ದಾಖಲಾಗಿದ್ದು, ಮಹಾರಾಷ್ಟ್ರದಲ್ಲಿ 252, ಗುಜರಾತ್ 97, ರಾಜಸ್ಥಾನ 69, ಕೇರಳ 65 ಮತ್ತು ತೆಲಂಗಾಣ 62 ಪ್ರಕರಣಗಳು ವರದಿಯಾಗಿವೆ.

———————

ಇದನ್ನೂ ಓದಿ: ಯುಪಿ ಚುನಾವಣೆ ಮೂಂದೂಡಿ, ರ್ಯಾಲಿಗಳನ್ನು ರದ್ದುಗೊಳಿಸಿ: ಚುನಾವಣಾ ಆಯೋಗ, ಪ್ರಧಾನಿಗೆ ಹೈಕೋರ್ಟ್ ಮನವಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ...

0
ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ...