Homeಮುಖಪುಟಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಿಷೇಧಿಸಲು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಿಷೇಧಿಸಲು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

- Advertisement -
- Advertisement -

ಮಾಧ್ಯಮ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳು ನಡೆಸುವ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ಯಾವುದೇ ಚುನಾವಣೆಗೆ ಆರು ತಿಂಗಳ ಮುಂಚೆ ನಿಷೇಧಿಸಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಈ ಕುರಿತು ಶೀಘ್ರದಲ್ಲೇ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಲಕ್ನೋದ ಕಾನ್ಶಿರಾಮ್ ಸ್ಮಾರಕ ಸ್ಥಳದಲ್ಲಿ ನಡೆದ ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಮ್ ಅವರ 15 ನೇ ಪುಣ್ಯತಿಥಿಯಲ್ಲಿ ಮಾತನಾಡಿದ ಮಾಯಾವತಿ, ದಿವಂಗತ ದಲಿತ ನಾಯಕರಿಗೆಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಈ ವೇಳೆ “ಶೀಘ್ರದಲ್ಲೇ, ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗುವುದು. ಮಾಧ್ಯಮ ಸಂಸ್ಥೆಗಳು ಮತ್ತು ಇತರ ಏಜೆನ್ಸಿಗಳು ಚುನಾವಣಾ ಪೂರ್ವ ನಡೆಸುವ ಚುನಾವಣಾ ಸಮೀಕ್ಷೆಗಳನ್ನು ಆರು ತಿಂಗಳು ಮುಂಚಿತವಾಗಿ ನಿಷೇಧಿಸಲು ಒತ್ತಾಯಿಸುತ್ತೇವೆ. ಇದರಿಂದಾಗಿ ನಿರ್ದಿಷ್ಟ ರಾಜ್ಯದಲ್ಲಿ ನಡೆಯುವ ಚುನಾವಣೆಗಳ ಮೇಲೆ ಪ್ರಭಾವ ಬೀರುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

“ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿದ್ದಾಗ, ಮಮತಾ ಬ್ಯಾನರ್ಜಿ ಹಿಂದುಳಿಯಲಿದ್ದಾರೆ ಎಂದು ಸಮೀಕ್ಷೆಗಳು ಹೇಳಿದ್ದವು. ಆದರೆ ಫಲಿತಾಂಶ ಬಂದಾಗ ಸಮೀಕ್ಷೆಗಳ ಹಳಿಕೆ ವಿರುದ್ಧವಾಗಿತ್ತು. ಅಧಿಕಾರದ ಕನಸು ಕಾಣುತ್ತಿದ್ದವರ ಕನಸು ಭಗ್ನಗೊಂಡಿತ್ತು. ಮಮತಾ ಬ್ಯಾನರ್ಜಿ ಭಾರೀ ಬಹುಮತದಿಂದ ಅಧಿಕಾರಕ್ಕೆ ಬಂದರು. ಹೀಗಾಗಿ ನೀವು ಈ ಸಮೀಕ್ಷೆಗಳಿಂದ ನೀವು ತಪ್ಪುದಾರಿಗೆ ಹೋಗಬಾರದು” ಎಂದು ಮಾಯಾವತಿ ಸಾರ್ವಜನಿಕರಿಗೆ ಹೇಳಿದ್ದಾರೆ.

ಮುಂಬರುವ 2022 ರ ವಿಧಾನಸಭಾ ಚುನಾವಣೆಯಲ್ಲಿ ಯುಪಿಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಮತ್ತು ಅಧಿಕಾರವನ್ನು ಉಳಿಸಿಕೊಳ್ಳಲು ಸಿದ್ಧವಾಗಿದೆ ಎಂದು ಸಮೀಕ್ಷೆಯೊಂದರಲ್ಲಿ ಹೇಳಲಾಗಿದ್ದು ಇದರ ಹಿನ್ನೆಲೆಯಲ್ಲಿ ಂಆಯಾವತಿ ಇವುಗಳನ್ನು ನಿಷೇಧಿಸಬೇಕು ಎಂದಿದ್ದಾರೆ.

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಮತ್ತು ಯುಪಿ ಸರ್ಕಾರಗಳು ರಾಜ್ಯದ ಆಡಳಿತವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸುತ್ತಿವೆ. ಈ ತಂತ್ರಗಳು ಕೆಲಸ ಮಾಡದಿದ್ದಾಗ,  ಬಿಜೆಪಿ ಅಂತಿಮವಾಗಿ ಚುನಾವಣೆಗೆ ಹಿಂದೂ-ಮುಸ್ಲಿಂ ಬಣ್ಣವನ್ನು ನೀಡುತ್ತದೆ ಎಂದು ಆರೋಪಿಸಿದ್ದಾರೆ.

“ಸಣ್ಣ ಪಕ್ಷಗಳು ಮತ್ತು ಸಂಘಟನೆಗಳಿವೆ. ಅವುಗಳು ಏಕಾಂಗಿಯಾಗಿ ಅಥವಾ ಜಂಟಿಯಾಗಿ ಚುನಾವಣೆಗೆ ಸ್ಪರ್ಧಿಸಬಹುದು. ಅವರ ಕೆಲಸವು ಚುನಾವಣೆಯಲ್ಲಿ ಗೆಲ್ಲುವುದಲ್ಲ, ಆದರೆ ಆಡಳಿತದ ಪಕ್ಷಕ್ಕೆ ತೆರೆಮರೆಯಿಂದ ಲಾಭವನ್ನು ನೀಡುವುದು ಅವರ ಸ್ವಂತ ಹಿತಾಸಕ್ತಿ. ಆದ್ದರಿಂದ, ಸಮುದಾಯಗಳ ಜನರು ಈ ಪಕ್ಷಗಳು ಮತ್ತು ಸಂಘಟನೆಗಳ ಪ್ರಭಾವಕ್ಕೆ ಒಳಗಾಗಬಾರದು” ಎಂದು ಕಿವಿಮಾತು ಹೇಳಿದ್ದಾರೆ.


ಇದನ್ನೂ ಓದಿ: ಕಾಲೇಜ್‌‌ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ‘ಗೂಂಡಾ ಸಂಘಟನೆ’ಗಳಿಗೆ ಹಕ್ಕಿಲ್ಲ: ಅಲೋಶಿಯಸ್‌‌ ಬೆಂಬಲಕ್ಕೆ ನಿಂತ ಜನಪರ ಸಂಘಟನೆಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...