ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಚುನಾವಣಾ ಆಯೋಗವೇ ಕಾರಣ. ಕೊರೊನಾ ಸಂದರ್ಭದಲ್ಲಿ 5 ರಾಜ್ಯಗಳ ಚುನಾವಣೆಯಲ್ಲಿ ಬೃಹತ್ ರ್‍ಯಾಲಿ ನಡೆಸಲು ಅನುಮತಿ ನೀಡುವ ಮೂಲಕ ಚುನಾವಣಾ ಆಯೋಗ ಸ್ವತಃ ಕೊರೊನಾ ಹರಡಿದೆ. ಹೀಗಾಗಿ ಚುನಾವಣಾ ಅಧಿಕಾರಿಗಳ ವಿರುದ್ಧ ಏಕೆ ಕೊಲೆ ಪ್ರಕರಣ ದಾಖಲಿಸಬಾರದು?” ಎಂದು ಮದ್ರಾಸ್ ಹೈಕೋರ್ಟ್ ಹರಿಹಾಯ್ದಿದೆ.
ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಸಾವಿರಾರು ಜನರು ಸೋಂಕಿನಿಂದ ಸಾವನ್ನಪ್ಪುತ್ತಿದ್ಧಾರೆ. ಈ ನಡುವೆ ಭಾರತೀಯ ಚುನಾವಣಾ ಆಯೋಗದ ರಾಜಕೀಯ ಪಕ್ಷಗಳ ಪರ ಕೆಲಸ ಮಾಡುತ್ತಿದೆ ಎಂದು ಮದ್ರಾಸ್ ಹೈಕೋರ್ಟ್ ಛೀಮಾರಿ ಹಾಕಿದೆ.
ಜೊತೆಗೆ ಚುನಾವಣಾ ಆಯೋಗಕ್ಕೆ ಏಪ್ರಿಲ್ 06 ರಂದು ನಡೆದ ತಮಿಳುನಾಡು ವಿಧಾನಸಭಾ ಚುನಾವಣಾ ಮತ ಎಣಿಕೆಗೂ ತಡೆ ಒಡ್ಡುವ ಎಚ್ಚರಿಕೆ ನೀಡಿದೆ.
’ಕೊರೊನಾ ಎರಡನೇ ಅಲೆ ವ್ಯಾಪಕವಾಗಲು ಚುನಾವಣಾ ಆಯೋಗ ಏಕೈಕ ಕಾರಣವಾಗಿದೆ. ನಿಮ್ಮ ಅಧಿಕಾರಿಗಳ ಮೇಲೆ ಏಕೆ ಕೊಲೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಬಾರದು?. ನ್ಯಾಯಾಲಯದ ಆದೇಶದ ಹೊರತಾಗಿಯೂ ಪ್ರಚಾರದ ಸಮಯದಲ್ಲಿ ಮಾಸ್ಕ್, ಸ್ಯಾನಿಟೈಸರ್ಗಳ ಬಳಕೆ ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೊರೊನಾ ಸುರಕ್ಷತಾ ನಿಯಮಗಳನ್ನು ಜಾರಿಗೆ ತರವಲ್ಲಿ ಚುನಾವಣಾ ಸಂಸ್ಥೆ ವಿಫಲವಾಗಿದೆ” ಎಂದು ಹೈಕೋರ್ಟ್ ಹೇಳಿದೆ.
ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?
ಮೇ.2 ರಂದು ತಮಿಳುನಾಡಿನಲ್ಲಿ ಮತ ಎಣಿಕೆ ಆರಂಭವಾಗಲಿದೆ. ಆದರೆ, ಶುಕ್ರವಾರದೊಳಗೆ ಕೊರೊನಾ ನಿಯಮಗಳನ್ನು ಜಾರಿಗೊಳಿಸುವ ಯೋಜನೆಯ ಬಗ್ಗೆ ಚುನಾವಣಾ ಆಯೋಗವನ್ನು ಮದ್ರಾಸ್ ಹೈಕೋರ್ಟ್ ಕೇಳಿದೆ. ಒಂದು ವೇಳೆ ಚುನಾವಣಾ ಆಯೋಗ ಈ ನೀಲನಕ್ಷೆಯನ್ನು ನೀಡದಿದ್ದರೆ ಮತ ಎಣಿಕೆಯನ್ನೇ ನಿಲ್ಲಿಸುವುದಾಗಿಯೂ ಎಚ್ಚರಿಸಿದೆ.
“ಸಾರ್ವಜನಿಕ ಆರೋಗ್ಯ ಅತ್ಯುನ್ನತವಾದುದು. ಸಾಂವಿಧಾನಿಕ ಅಧಿಕಾರಗಳನ್ನು ನೆನಪಿಸಬೇಕಾಗಿರುವುದು ದುಃಖಕರವಾಗಿದೆ. ದೇಶದ ನಾಗರಿಕರು ಬದುಕುಳಿದಾಗ ಮಾತ್ರ ಅವರು ಪ್ರಜಾಪ್ರಭುತ್ವ ಹಕ್ಕುಗಳನ್ನು ಆನಂದಿಸಲು ಸಾಧ್ಯವಾಗುತ್ತದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
“ಚುನಾವಣಾ ರ್‍ಯಾಲಿಗಳು ನಡೆದಾಗ ನೀವು ಇನ್ನೊಂದು ಗ್ರಹದಲ್ಲಿ ಇದ್ದಿರೇ?” ಎಂದು ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಪ್ರಶ್ನಿಸಿದ್ದಾರೆ.
ತಮಿಳುನಾಡು ಸಾರಿಗೆ ಸಚಿವ ಎಂ.ಆರ್.ವಿಜಯಬಾಸ್ಕರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ನಂತರ ದೇಶದಲ್ಲಿ ಕೊರೊನಾ ಪ್ರಕರಣಗಳು ಸ್ಫೋಟಗೊಂಡಿವೆ. ಪ್ರಸ್ತುತ ಭಾರತದಲ್ಲಿ ದಿನವೊಂದಕ್ಕೆ 3.52 ಲಕ್ಷಕ್ಕೂ ಪ್ರಕರಣಗಳು ಮತ್ತು 2,812 ಸಾವುಗಳು ವರದಿಯಾಗುತ್ತಿವೆ.
ಇದನ್ನೂ ಓದಿ: ಜನರ ಸಂಕಷ್ಟ ಮರೆತು ಬಿಜೆಪಿಯ ಪಿಆರ್ ಕೆಲಸ ಮಾಡುತ್ತಿರುವ ಟೈಮ್ಸ್ ನೌ: ಸಂಪಾದಕರಿಗೆ ಚಾನೆಲ್ ವರದಿಗಾರರ ’ದಿಟ್ಟ ಪತ್ರ’



Election of India is puppet of Modi
Election commission is working as slaves of BJP government is a threat to our democracy and to common people life in a Pandamic time.