Homeಮುಖಪುಟಚುನಾವಣಾ ಆಯೋಗ ಬಿಜೆಪಿಯೊಂದಿಗೆ ಶಾಮೀಲಾಗಿದೆ: ಆಡಿಯೋ ಬಿಡುಗಡೆ ಮಾಡಿದ ಟಿಎಂಸಿ

ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಶಾಮೀಲಾಗಿದೆ: ಆಡಿಯೋ ಬಿಡುಗಡೆ ಮಾಡಿದ ಟಿಎಂಸಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದೆ. ಆದರೆ ಈಗ ಬಹಿರಂಗಕ್ಕೆ ಬಂದಿರುವ ಆಡಿಯೋ ಒಂದು ಕೋಲಾಹಲ ಉಂಟುಮಾಡಿದ್ದು, ಚುನಾವಣಾ ಆಯೋಗದ ಪಕ್ಷಪಾತಿ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಟಿಎಂಸಿ ತ್ಯಜಿಸಿ ಬಿಜೆಪಿ ಸೇರಿರುವ ನಾಯಕನೊಂದಿಗೆ ಮಮತಾ ಬ್ಯಾನರ್ಜಿ ಮಾತನಾಡಿದ್ದು, ಪಕ್ಷಕ್ಕೆ ವಾಪಸ್ ಮರಳುವಂತೆ ಮತ್ತು ಪಕ್ಷಕ್ಕಾಗಿ ಕೆಲಸ ಮಾಡುವಂತೆ ಹೇಳಿರುವ ಆಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿತ್ತು.

ಅದರ ಬೆನ್ನಲ್ಲೆ ಟಿಎಂಸಿ ಸಹ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ಬಿಜೆಪಿ ಮುಖಂಡ ಶಿಶಿರ್ ಬಜೋರಿಯಾ ಅವರೊಂದಿಗಿನ ಉದ್ದೇಶಿತ ಸಂಭಾಷಣೆಯಲ್ಲಿ, ಬಿಜೆಪಿ ಮುಖಂಡ ಮುಕುಲ್ ರಾಯ್ ಅವರು ಚುನಾವಣಾ ಆಯೋಗದೊಂದಿಗೆ ಚರ್ಚಿಸಬೇಕಾದ ವಿಷಯಗಳ ಪಟ್ಟಿಯಲ್ಲಿ ಮತಗಟ್ಟೆ ಏಜೆಂಟ್ ಅಥವಾ ಬೂತ್ ಏಜೆಂಟರ ಬಗ್ಗೆ ಒಂದು ನಿರ್ದಿಷ್ಟ ಆದೇಶ ನೀಡುತ್ತಾರೆ.

ಬೂತ್ ಏಜೆಂಟರು ಯಾವಾಗಲು ಅದೇ ಕ್ಷೇತ್ರದ ಮತದಾರನಾಗಿರಬೇಕು ಎಂಬ ನಿಯಮವಿದೆ. ಚುನಾವಣಾ ಆಯೋಗದೊಂದಿಗೆ ಮಾತನಾಡಿ ಅದನ್ನು ಬದಲಿಸಬೇಕು. ರಾಜ್ಯದ ಯಾವುದೇ ವ್ಯಕ್ತಿ, ಯಾವುದೇ ಬೂತ್‌ನಲ್ಲಿ ಬೇಕಾದರೂ ಏಜೆಂಟ್ ಆಗಬಹುದು ಎಂದು ಆಯೋಗ ಹೇಳುವಂತೆ ಮಾಡಬೇಕು. ಇಲ್ಲದಿದ್ದಲ್ಲಿ ಹಲವಾರು ಬೂತ್‌ಗಳಲ್ಲಿ ಬಿಜೆಪಿಗೆ ಬೂತ್‌ ಏಜೆಂಟರೆ ಇಲ್ಲದಂತಾಗುತ್ತದೆ ಎಂದು ಮುಕುಲ್ ರಾಯ್‌ ಹೇಳಿದ್ದು ಆಡಿಯೋದಲ್ಲಿ ಬಹಿರಂಗಗೊಂಡಿದೆ.

ಆಶ್ಚರ್ಯಕರ ರೀತಿಯಲ್ಲಿ ಚುನಾವಣಾ ಆಯೋಗ ರಾಜ್ಯದ ಯಾವುದೇ ವ್ಯಕ್ತಿ, ಯಾವುದೇ ಬೂತ್‌ನಲ್ಲಿ ಬೇಕಾದರೂ ಏಜೆಂಟ್ ಆಗಬಹುದು ಎಂಬ ಆದೇಶ ಜಾರಿಗೊಳಿಸಿದೆ. ಹಾಗಾಗಿ ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಶಾಮೀಲಾಗಿದೆ ಎಂದು ಟಿಎಂಸಿ ದೂರಿದೆ.

ಈ ಆದೇಶವನ್ನು ರದ್ದುಗೊಳಿಸುವಂತೆ ತೃಣಮೂಲ ಕೇಳುತ್ತಿದೆ ಮತ್ತು ಸಂಸದ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಪಕ್ಷದ ನಿಯೋಗ ಶನಿವಾರ ಆಯೋಗವನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ತೃಣಮೂಲ ಕಾಂಗ್ರೆಸ್‌ಗೆ ಜನರು ಮತ ಚಲಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ನಿನ್ನೆ ಸಹ ಟಿಎಂಸಿ ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿತ್ತು. “ಕಾಂತಿ ದಕ್ಷಿಣದ ವಿಧಾನಸಭಾ ಸ್ಥಾನದ ಅನೇಕ ಮತದಾರರು ತಾವು ಟಿಎಂಸಿಗೆ ಮತ ಹಾಕಿದ್ದೇವೆ ಅದರೆ ವಿವಿ ಪ್ಯಾಟ್‌ ಸ್ಲಿಪ್‌ನಲ್ಲಿ ಬಿಜೆಪಿ ಚಿಹ್ನೆ ತೋರಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇದು ಗಂಭೀರವಾಗಿದೆ! ಇದು ಅಸಮರ್ಥನೀಯ, ಕೂಡಲೇ ಗಮನ ಹರಿಸಿ” ಎಂದು ಟಿಎಂಸಿ ಟ್ವೀಟ್ ಮಾಡಿತ್ತು.


ಇದನ್ನೂ ಓದಿ: ಮತ ಹಾಕಿದ್ದು TMCಗೆ, ವಿವಿಪ್ಯಾಟ್‌ BJP ಚಿನ್ಹೆ ತೋರಿಸುತ್ತಿದೆ!: ಚುನಾವಣಾ ಆಯೋಗಕ್ಕೆ TMC ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...