Homeಮುಖಪುಟಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

- Advertisement -
- Advertisement -

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಈ ಕುರಿತ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆ ಇದೆ. ಒಟ್ಟಾರೆ, ಈ ವರ್ಷಾಂತ್ಯದ ಮೊದಲು ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯಬಹುದು ಎಂದು ವರದಿಗಳು ಹೇಳಿವೆ.

ಬುಧವಾರ ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ (ಸಿಇಒ) ಸುದೀರ್ಘ ಸಭೆ ನಡೆದಿದೆ. ಈ ಸಭೆಯಲ್ಲಿ ಮುಂದಿನ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆ, 2025ರ ಅಂತ್ಯದೊಳಗೆ ಎಸ್‌ಐಆರ್ ನಡೆಸಲು ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಸಭೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಮತ್ತು ಅನರ್ಹರು ಪಟ್ಟಿಯಲ್ಲಿ ಸೇರದಂತೆ ಎಚ್ಚರಿಕೆ ವಹಿಸಲು ದಾಖಲೆಗಳ ಸೂಕ್ತ ಪರಿಶೀಲನೆಯ ಕುರಿತು ಸಿಇಒಗಳು ಪ್ರಸ್ತಾಪಿಸಿದ್ದಾರೆ. ಅರ್ಹ ಮತದಾರರಿಗೆ ಸಲ್ಲಿಸಲು ಸುಲಭವಾಗುವಂತೆ ಚುನಾವಣಾ ಹೇಗೆ ಮತ್ತು ಯಾವೆಲ್ಲ ದಾಖಲೆಗಳನ್ನು ಕೇಳಬಹುದು ಎಂದು ಚರ್ಚಿಸಿದ್ದಾರೆ ಎನ್ನಲಾಗಿದೆ.

ಬಿಹಾರದಲ್ಲಿ 11 ದಾಖಲೆಗಳನ್ನು ಮತದಾರರ ಗುರುತಿನ ಪುರಾವೆಯಾಗಿ ಚುನಾವಣಾ ಆಯೋಗ ಪರಿಗಣಿಸಿತ್ತು. ಮತದಾರರು ಕಾನೂನು ಸಮರ ನಡೆಸಿದ ಬಳಿಕ, ಆಧಾರ್ ಕಾರ್ಡ್‌ನ್ನೂ ದಾಖಲೆಯಾಗಿ ಪರಿಗಣಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದರಂತೆ 12ನೇ ದಾಖಲೆಯಾಗಿ ಆಧಾರ್ ಕಾರ್ಡ್‌ ಅನ್ನು ಚುನಾವಣಾ ಆಯೋಗ ಪರಿಗಣಿಸಿದೆ. ಈ ಬೆಳವಣಿಗೆಯೂ ಮುಂದೆ ದೇಶದಾದ್ಯಂತ ಎಸ್‌ಐಆರ್ ನಡೆಸುವಾಗ ದಾಖಲೆಗಳನ್ನು ಸಲ್ಲಿಸುವ ವಿಚಾರದಲ್ಲಿ ಮಹತ್ವದ್ದಾಗಿದೆ.

ಕಳೆದ ಮತದಾರರ ಪಟ್ಟಿಯ ಪರಿಷ್ಕರಣೆಯ ನಂತರ ಪ್ರಕಟವಾದ ತಮ್ಮ ರಾಜ್ಯಗಳ ಮತದಾರರ ಪಟ್ಟಿಯನ್ನು ಸಿದ್ಧವಾಗಿಟ್ಟುಕೊಳ್ಳಲು ಸಿಇಒಗಳಿಗೆ ತಿಳಿಸಲಾಗಿದೆ. ಕೆಲವು ರಾಜ್ಯಗಳ ಇಸಿಒಗಳು ಈಗಾಗಲೇ ಕೊನೆಯ ಎಸ್‌ಐಆರ್ ನಂತರ ಪ್ರಕಟವಾದ ಮತದಾರರ ಪಟ್ಟಿಯನ್ನು ತಮ್ಮ ವೆಬ್‌ಸೈಟ್‌ಗಳಲ್ಲಿ ಹಾಕಿದ್ದಾರೆ.

ಬಿಹಾರದ ನಂತರ, ಇಡೀ ದೇಶದಲ್ಲಿ ಎಸ್‌ಐಆರ್ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಈ ಹಿಂದೆಯೇ ಹೇಳಿತ್ತು.

2026ರಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಇತರ ಸಿಇಒಗಳು ತಮ್ಮ ಅನುಭವಗಳಿಂದ ಕಲಿಯಲು ಸಾಧ್ಯವಾಗುವಂತೆ ಬಿಹಾರದ ಸಿಇಒ ಅವರು ಅಳವಡಿಸಿಕೊಂಡ ತಂತ್ರಗಳು, ನಿರ್ಬಂಧಗಳು ಮತ್ತು ಉತ್ತಮ ಅಭ್ಯಾಸಗಳ ಕುರಿತು ಪ್ರಸ್ತುತಿಯನ್ನು ಮಾಡಿದ್ದಾರೆ ಎಂದು ಚುನಾವಣಾ ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.

ಕೊನೆಯ ಪೂರ್ಣಗೊಂಡ ಎಸ್‌ಐಆರ್ ಪ್ರಕಾರ ಮತದಾರರ ಸಂಖ್ಯೆ, ಕೊನೆಯ ಎಸ್‌ಐಆರ್‌ನ ಅರ್ಹತಾ ದಿನಾಂಕ ಮತ್ತು ತಮ್ಮ ರಾಜ್ಯದಲ್ಲಿನ ಮತದಾರರ ಪಟ್ಟಿಯ ಕುರಿತು ಸಿಇಒಗಳು ವಿವರವಾದ ಪ್ರಸ್ತುತಿಗಳನ್ನು ನೀಡಿದ್ದಾರೆ.

ಹಿಂದಿನ ಎಸ್‌ಐಆರ್ ನಂತರ ಡಿಜಿಟಲೀಕರಣ ಮತ್ತು ಮತದಾರರ ಪಟ್ಟಿಯನ್ನು ಅಪ್‌ಲೋಡ್ ಮಾಡುವ ಸ್ಥಿತಿಯನ್ನು ಸಿಇಒಗಳು ರಾಜ್ಯ ಸಿಇಒ ವೆಬ್‌ಸೈಟ್‌ನಲ್ಲಿ ಪ್ರಸ್ತುತಪಡಿಸಿದ್ದಾರೆ.

ತಮ್ಮ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿನ ಕೊನೆಯ ಎಸ್‌ಐಆರ್ ಪ್ರಕಾರ ಮತದಾರರೊಂದಿಗೆ ಪ್ರಸ್ತುತ ಮತದಾರರ ಮ್ಯಾಪಿಂಗ್ ಸ್ಥಿತಿಯನ್ನು ಸಹ ಅವರು ನೀಡಿದ್ದಾರೆ.

ಯಾವುದೇ ಮತಗಟ್ಟೆಯು 1,200ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಆಯೋಗದ ಉಪಕ್ರಮದ ಏಕರೂಪದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಮತದಾನ ಕೇಂದ್ರಗಳ ತರ್ಕಬದ್ಧಗೊಳಿಸುವಿಕೆಯ ಸ್ಥಿತಿಯನ್ನು ಸಹ ಪರಿಶೀಲಿಸಲಾಗಿದೆ ಎಂದು ಚುನಾವಣಾ ಆಯೋಗ  ಹೇಳಿದೆ.

ಮತದಾರರ ಪಟ್ಟಿಯ ತೀವ್ರವಾದ ಪರಿಷ್ಕರಣೆಯ ಪ್ರಾಥಮಿಕ ಉದ್ದೇಶವೆಂದರೆ ವಿದೇಶಿ ಅಕ್ರಮ ವಲಸಿಗರನ್ನು ಅವರ ಜನ್ಮಸ್ಥಳವನ್ನು ಪರಿಶೀಲಿಸುವ ಮೂಲಕ ಹೊರಹಾಕುವುದು.

ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಸೇರಿದಂತೆ ಅಕ್ರಮ ವಿದೇಶಿ ವಲಸಿಗರ ಮೇಲೆ ವಿವಿಧ ರಾಜ್ಯಗಳಲ್ಲಿ ಕಠಿಣ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮವು ಮಹತ್ವದ್ದಾಗಿದೆ.

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಹಲವು ಗೊಂದಲ, ಆರೋಪಗಳಿಗೆ ಕಾರಣವಾಗಿದೆ. ಚುನಾವಣಾ ಆಯೋಗ ಎಸ್‌ಐಆರ್ ಬಳಿಕ ಸುಮಾರು 65 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿದೆ. ಈ ಜನರು ಸಾವನ್ನಪ್ಪಿರಬಹುದು ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿರಬಹುದು, ಇಲ್ಲಾ ಅವರ ಹೆಸರು ಒಂದಕ್ಕಿಂತ ಹೆಚ್ಚು ಬಾರಿ ನೋಂದಾವಣೆಗೊಂಡಿರಬಹುದು ಎಂದು ಚುನಾವಣಾ ಆಯೋಗ ಹೇಳಿದೆ.

ಆದರೆ, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಚುನಾವಣಾ ಆಯೋಗದ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ. ಲಕ್ಷಾಂತರ ಮತದಾರರನ್ನು ಸುಖಾ ಸುಮ್ಮನೆ ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಆರೋಪಿಸಿದೆ. ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಚುನಾವಣಾ ಆಯೋಗ ಸತ್ತೋಗಿದ್ದಾರೆ ಎನ್ನಲಾದ ವ್ಯಕ್ತಿಗಳ ಜೊತೆ ರಾಹುಲ್ ಗಾಂಧಿ ಟೀಕುಡಿದು ಗಮನಸೆಳೆದಿದ್ದಾರೆ.

ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ‘ವೀಟೋ ಅಧಿಕಾರ’ ಇಲ್ಲ: ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ, ಕೇರಳ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...