Homeಮುಖಪುಟಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

- Advertisement -
- Advertisement -

ಪ್ರತಿಪಕ್ಷಗಳ ವಿರುದ್ಧ ‘ಸ್ಪಷ್ಟ ಪಕ್ಷಪಾತ’ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ ಹಿನ್ನೆಲೆ ಚುನಾವಣಾ ಆಯೋಗ ಇಂದು (ನ.4) ಮಹಾರಾಷ್ಟ್ರದ ಡಿಜಿಪಿ ರಶ್ಮಿ ಶುಕ್ಲಾ ಅವರನ್ನು ವರ್ಗಾವಣೆ ಮಾಡಿದೆ.

ಡಿಜಿಪಿ ರಶ್ಮಿ ಶುಕ್ಲಾ ಅವರ ಜವಾಬ್ದಾರಿಯನ್ನು ಮಹಾರಾಷ್ಟ್ರ ಕೇಡರ್‌ನ ಮುಂದಿನ ಹಿರಿಯ ಐಪಿಎಸ್ ಅಧಿಕಾರಿಗೆ ಹಸ್ತಾಂತರಿಸುವಂತೆ ಚುನಾವಣಾ ಆಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಅವರಿಗೆ ಆದೇಶಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಹೊಸ ಡಿಜಿಪಿಯ ಆಯ್ಕೆಗೆ ನಾಳೆ (ನ.5) ಮಧ್ಯಾಹ್ನದೊಳಗೆ ಮೂವರು ಐಪಿಎಸ್ ಅಧಿಕಾರಿಗಳ ಸಮಿತಿ ರಚಿಸುವಂತೆ ಮುಖ್ಯ ಕಾರ್ಯದರ್ಶಿಗೆ ಚುನಾವಣಾ ಆಯೋಗ ಸೂಚಿಸಿದೆ.

ಕಳೆದ ತಿಂಗಳು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಅವರು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಪತ್ರ ಬರೆದು ಡಿಜಿಪಿ ಸ್ಥಾನದಿಂದ ರಶ್ಮಿ ಶುಕ್ಲಾ ಅವರನ್ನು ವಜಾ ಅಥವಾ ಅಮಾನತುಗೊಳಿಸುವಂತೆ ಮನವಿ ಮಾಡಿದ್ದರು.

ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ಸೇರಿದಂತೆ ರಾಜ್ಯದ ವಿರೋಧ ಪಕ್ಷಗಳ ವಿರುದ್ಧ ಡಿಜಿಪಿ ಶುಕ್ಲಾ ಅವರು ‘ಸ್ಪಷ್ಟ ಪಕ್ಷಪಾತ’ ಪ್ರದರ್ಶಿಸುತ್ತಿದ್ದಾರೆ ಎಂದು ಪತ್ರದಲ್ಲಿ ಪಟೋಲೆ ಆರೋಪಿಸಿದ್ದರು.

ಶುಕ್ಲಾ ಅವರು ಪುಣೆ ಪೊಲೀಸ್ ಆಯುಕ್ತರಾಗಿದ್ದಾಗ ಪ್ರತಿಪಕ್ಷ ನಾಯಕರ ಅಕ್ರಮ ಫೋನ್ ಕದ್ದಾಲಿಕೆ ಆರೋಪ ಹೊತ್ತಿದ್ದರು ಎಂದು ಅವರು ಹೇಳಿದ್ದರು.

ಸುದ್ದಿಗೋಷ್ಠಿ ಮತ್ತು ಇತರ ಹೇಳಿಕೆಗಳ ಮೂಲಕ ಡಿಜಿಪಿಯನ್ನು ವಜಾಗೊಳಿಸುವಂತೆ ನಾವು ಹಲವು ಬಾರಿ ಮನವಿ ಮಾಡಿದ್ದೇವೆ. ಕಳೆದ 20 ದಿನಗಳಿಂದ ಪ್ರತಿಪಕ್ಷಗಳ ನಾಯಕರ ವಿರುದ್ದ ರಾಜಕೀಯ ಹಿಂಸಾಚಾರ ನಡೆಯುತ್ತಿದೆ. ಪ್ರತಿಪಕ್ಷಗಳು ಮತ್ತು ನಾಯಕರ ಕಾರ್ಯಕ್ರಮಗಳಲ್ಲಿ ಕಾನೂನು ಸುವ್ಯವಸ್ಥೆ ಕ್ಷೀಣಿಸಿದೆ. ಇದರ ಹಿಂದೆ ಡಿಜಿಪಿಯವರ ಕಾಂಗ್ರೆಸ್‌, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ವಿರುದ್ದದ ಪಕ್ಷಪಾತಿ ಧೋರಣೆ ಇದೆ. ಡಿಜಿಪಿ ರಶ್ಮಿ ಶುಕ್ಲಾ ಅವರು ಪುಣೆಯ ಪೊಲೀಸ್ ಆಯುಕ್ತೆ ಮತ್ತು ರಾಜ್ಯ ಗುಪ್ತಚರ ಇಲಾಖೆ (ಎಸ್‌ಐಡಿ) ಆಯುಕ್ತೆ ಆಗಿದ್ದಾಗ ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡಿರುವುದು ಇದಕ್ಕೆ ಸಾಕ್ಷಿ ಎಂದು ನಾನಾ ಪಟೋಲೆ ತನ್ನ ಪತ್ರದಲ್ಲಿ ಹೇಳಿದ್ದರು.

“ರಾಜ್ಯದ ಪೊಲೀಸ್ ಮಹಾನಿರ್ದೇಶಕಿ ರಶ್ಮಿ ಶುಕ್ಲಾ ವಿರುದ್ಧ ಬಹಳ ಗಂಭೀರವಾದ ಆರೋಪವಿದೆ. 2019 ರಲ್ಲಿ ನಮ್ಮ ಸರ್ಕಾರ ರಚನೆಯಾದಾಗ ಅವರು ನೇರವಾಗಿ ಬಿಜೆಪಿ ಪರ ಕೆಲಸ ಮಾಡುತ್ತಿದ್ದರು. ನಮ್ಮೆಲ್ಲ ಫೋನ್‌ಗಳನ್ನು ಟ್ಯಾಪ್ ಮಾಡಿ, ನಾವು ಏನು ಮಾಡಲಿದ್ದೇವೆ ಎಂಬುವುದರ ಕುರಿತು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ಗೆ ಸಂಪೂರ್ಣ ಮಾಹಿತಿ ನೀಡುತ್ತಿದ್ದರು” ಎಂದು ರಾಜ್ಯಸಭಾ ಸಂಸದ ಮತ್ತು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಕೂಡ ಮಾಧ್ಯಮಗಳ ಮುಂದೆ ಹೇಳಿದ್ದರು.

ಇದನ್ನೂ ಓದಿ : ಆಂಬ್ಯುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...