Homeಮುಖಪುಟಚುನಾವಣಾ ಆಯುಕ್ತರಾಗಿ ನೇಮಕಾತಿ ವೇಳೆಯೂ ಉದ್ಭವಿಸಿದ್ದ ವಿವಾದ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅರುಣ್ ಗೋಯೆಲ್...

ಚುನಾವಣಾ ಆಯುಕ್ತರಾಗಿ ನೇಮಕಾತಿ ವೇಳೆಯೂ ಉದ್ಭವಿಸಿದ್ದ ವಿವಾದ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದೇಕೆ?

- Advertisement -
- Advertisement -

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿಗಳು ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಆದರೆ ಅಧಿಕಾರವಧಿ ಇನ್ನೂ 3 ವರ್ಷಗಳ ಕಾಲ ಇದ್ದರೂ, ಚುನಾವಣೆ ಹೊಸ್ತಿಲಲ್ಲಿ ಅವರು ರಾಜೀನಾಮೆ ನೀಡಿದ್ದೇಕೆ ಎಂಬ ಪ್ರಶ್ನೆಗಳು ವ್ಯಾಪಕವಾಗಿ ಉದ್ಭವಿಸಿದೆ.

ಮೂಲಗಳ ಪ್ರಕಾರ, ಚುನಾವಣೆ ದಿನಾಂಕಗಳನ್ನು ಮುಂದಿನ ವಾರ ಘೋಷಿಸುವ ಸಾಧ್ಯತೆಯಿದೆ ಮತ್ತು  ಗೋಯೆಲ್ ಅವರ ರಾಜೀನಾಮೆ ಇದೀಗ ಈ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕಿದೆ. ರಾಜೀನಾಮೆ ನೀಡುವಾಗ  ಗೋಯೆಲ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಉನ್ನತ ಅಧಿಕಾರಿಗಳು ಹೇಳಿದ್ದಾರೆ, ಸರ್ಕಾರವು ಅವರನ್ನು ಹುದ್ದೆ ತೊರೆಯದಂತೆ ಮನವೊಲಿಸಲು ಪ್ರಯತ್ನಿಸಿದೆ, ಆದರೆ ಅವರು  ಅದಕ್ಕೆ ಒಪ್ಪಲಿಲ್ಲ ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ. ರಾಜೀನಾಮೆಗೆ ಅನಾರೋಗ್ಯವೇ ಕಾರಣ ಎಂಬ ಊಹಾಪೋಹಗಳ ಬೆನ್ನಲ್ಲಿ ಗೋಯೆಲ್ ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ, ನೂತನ ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಶನಿವಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ, ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಉಲ್ಲಖಿಸಲಾಗಿದೆ.

ಅರುಣ್ ಗೋಯಲ್ 1985ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದರು. ನವೆಂಬರ್ 18, 2022ರಂದು ಸ್ವಯಂ ನಿವೃತ್ತಿ ಪಡೆದು, ಮರುದಿನ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಅವರ ನೇಮಕ ವಿವಾದಕ್ಕೀಡಾಗಿತ್ತು. ಸುಪ್ರೀಂಕೋರ್ಟ್ ನಲ್ಲಿ ಈ ಕುರಿತು ಪ್ರಶ್ನಿಸಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಸ್ವಯಂ ನಿವೃತ್ತಿ ಪಡೆದ ಅರುಣ್ ಗೋಯಲ್ ಅವರನ್ನು ತಕ್ಷಣವೇ ಚುನಾವಣಾ ಆಯುಕ್ತ ಹುದ್ದೆಗೆ ನೇಮಿಸುವ ಆತುರವೇನಿತ್ತು? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಗೋಯೆಲ್ ಅವರ ನೇಮಕಾತಿಯ ವಿರುದ್ಧ ಏಪ್ರಿಲ್ 2023ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕಳೆದ ವರ್ಷ ಮಾರ್ಚ್‌ನಲ್ಲಿ ಚುನಾವಣಾ ಆಯೋಗಗಳ ನೇಮಕಾತಿ ವಿಷಯದ ಕುರಿತು ಸಂವಿಧಾನಿಕ ಪೀಠವು ತೀರ್ಪು ನೀಡಿದ್ದರಿಂದ ಸುಪ್ರೀಂ ಕೋರ್ಟ್ 2023 ಆಗಸ್ಟ್‌ನಲ್ಲಿ ಈ ಕುರಿತ ಅರ್ಜಿಯನ್ನು ವಜಾಗೊಳಿಸಿತ್ತು.

ಡಿಸೆಂಬರ್ 7, 1962ರಂದು ಪಂಜಾಬ್‌ನ ಪಟಿಯಾಲದಲ್ಲಿ ಜನಿಸಿದ್ದ ಅರುಣ್ ಗೋಯೆಲ್, ಗಣಿತಶಾಸ್ತ್ರದಲ್ಲಿ M.Sc. ಪದವಿಯನ್ನು ಕುಲಪತಿಗಳ ಪದಕದೊಂದಿಗೆ ಪಡೆದಿದ್ದರು. ಅವರು ಇಂಗ್ಲೆಂಡ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಚರ್ಚಿಲ್ ಕಾಲೇಜಿನಿಂದ ಅಭಿವೃದ್ಧಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಅವರು ಅಮೇರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ ಜಾನ್ ಎಫ್ ಕೆನಡಿ ಸರ್ಕಾರಿ ಶಾಲೆಯಲ್ಲಿ ತರಬೇತಿ ಪಡೆದಿದ್ದಾರೆ. ಆ ಬಳಿಕ ಪಂಜಾಬ್ ಕೇಡರ್‌ನ 1985-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ಅರುಣ್ ಗೋಯೆಲ್ ಅವರು 37 ವರ್ಷಗಳ ಸೇವೆಯ ನಂತರ ಭಾರತ ಸರ್ಕಾರದ  ಕೈಗಾರಿಕೆ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು ನವೆಂಬರ್ 2022ರಲ್ಲಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಫೆಬ್ರವರಿ 2025ರಲ್ಲಿ ರಾಜೀವ್ ಕುಮಾರ್ ಅವರ ಅಧಿಕಾರದ ಅಂತ್ಯದ ನಂತರ ಗೋಯೆಲ್ ಅವರು ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗುವ ಸಾಧ್ಯತೆ ಇತ್ತು. 61 ವರ್ಷ ವಯಸ್ಸಿನ ಅವರ ಅಧಿಕಾರಾವಧಿಯು ಡಿಸೆಂಬರ್ 2027ರವರೆಗೆ ಇತ್ತು. ಫೆಬ್ರವರಿಯಲ್ಲಿ ಅನುಪ್ ಪಾಂಡೆ ನಿವೃತ್ತಿ ಮತ್ತು ಇದೀಗ ಗೋಯೆಲ್ ರಾಜೀನಾಮೆ ನಂತರ, ಮೂವರು ಸದಸ್ಯರ ಚುನಾವಣಾ ಆಯೋಗದ ಸಮಿತಿಯು ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಮಾತ್ರ ಹೊಂದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...