Homeಕರ್ನಾಟಕಚುನಾವಣಾ ಪರ್ವ: ಜನವರಿಯಲ್ಲಿ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಚುನಾವಣಾ ಪರ್ವ: ಜನವರಿಯಲ್ಲಿ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

- Advertisement -
- Advertisement -

ರಾಜ್ಯದಲ್ಲಿ ಮುಂಬರಲಿರುವ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಆಡಳಿತರೂಢ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಈ ತಿಂಗಳಲ್ಲಿ ಎರಡು ಭಾರಿ ರಾಜ್ಯಕ್ಕೆ ಕರೆಸಿಕೊಳ್ಳುವ ಬಗ್ಗೆ ಯೋಜನೆ ರೂಪಿಸುತ್ತಿದೆ.

ಮೊದಲ ಭಾರಿಗೆ ಜನವರಿ 12ರ ಗುರುವಾರದಂದು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಎರಡನೇ ಭಾರಿ ಜನವರಿ 19 ರಂದು ನಾರಾಯಣಪುರ ಅಣೆಕಟ್ಟಿನ ಆಧುನೀಕರಿಸಿದ ಎಡದಂಡೆ ಕಾಲುವೆಯನ್ನು ಉದ್ಘಾಟಿಸುವ ಸಾಧ್ಯತೆಯಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರೀಯ ಯುವಜನೋತ್ಸವವು ಏಳು ದಿನಗಳ ಕಾಲ ನಡೆಯಲಿದ್ದು 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳ ಯುವಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಷಣ ಮಾಡಲಿದ್ದಾರೆ.

ಜನವರಿ 12ರಂದು ಹುಬ್ಬಳ್ಳಿ ರೈಲ್ವೇಸ್ ಮೈದಾನದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಹುಬ್ಬಳ್ಳಿಗೆ ಬರುತ್ತಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ರಾಷ್ಟ್ರೀಯ ಯುವಜನೋತ್ಸವದಲ್ಲಿ ದೇಶಾದ್ಯಂತ 7,500 ಕ್ಕೂ ಹೆಚ್ಚು ಯುವಕರು ಭಾಗವಹಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದ್ದು, ಈಗಾಗಲೆ ಕಾರ್ಯಕ್ರಮದ ಲಾಂಛನ ಮತ್ತು ಮಾಸ್ಕೋಟ್ ಅನ್ನು ಬಿಡುಗಡೆ ಮಾಡಿದ್ದಾರೆ.

ನಾರಾಯಣಪುರ ಎಡದಂಡೆ ಕಾಲುವೆ (ಎನ್‌ಎಲ್‌ಬಿಸಿ) ಆಧುನೀಕರಣ ಯೋಜನೆಯನ್ನು ಲೋಕಾರ್ಪಣೆ ಮಾಡಲು ಪ್ರಧಾನಿ ಅವರು ಜನವರಿ 19 ರಂದು ಕರ್ನಾಟಕಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

“ಬಹುಶಃ ಮೋದಿ ಅವರು ಎನ್‌ಎಲ್‌ಬಿಸಿಯನ್ನು ರಾಷ್ಟ್ರಕ್ಕೆ ಅರ್ಪಿಸಲು ಜನವರಿ 19 ರಂದು ನಾರಾಯಣಪುರಕ್ಕೆ ಬರುತ್ತಾರೆ” ಎಂದು ಬೊಮ್ಮಾಯಿ ಹೇಳಿದ್ದಾರೆ. NLBC ಯ ಆಧುನೀಕರಣವನ್ನು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳೆರಡರ ಹಣವನ್ನು ಬಳಸಿಕೊಂಡು ಜಂಟಿಯಾಗಿ ಕೈಗೊಳ್ಳಲಾಗಿದೆ.

ಜನವರಿ 19ರ ಭೇಟಿ ಇನ್ನೂ ದೃಢಪಟ್ಟಿಲ್ಲವಾದರೂ, ಒಂದು ವೇಳೆ ಎರಡನೇ ಭೇಟಿ ಖಚಿತವಾದರೆ ಕಲಬುರಗಿಯಲ್ಲಿ ನಡೆಯಲಿರುವ ಬಂಜಾರ ಸಮುದಾಯದ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

“ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗದಿದ್ದರೆ ಮತ್ತೆ ಹಾಗೆ ಮಾಡ್ತಾರೆ”: ಅತ್ಯಾಚಾರ ಸಂತ್ರಸ್ತೆಯ ಸಹೋದರಿ ಹೇಳಿಕೆ

0
"ಪ್ರಜ್ವಲ್ ಮತ್ತು ರೇವಣ್ಣ ಯಾವತ್ತೂ ತಲೆ ಎತ್ತಿ ನಡೆಯಬಾರದು, ಅಂತಹ ಶಿಕ್ಷೆಯಾಗಬೇಕು" ಎಂದು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೊಬ್ಬರ ಸಹೋದರಿ ಮಾಲಾ (ಹೆಸರು ಬದಲಿಸಲಾಗಿದೆ) ಹೇಳಿರುವುದಾಗಿ thenewsminute.com ವರದಿ ಮಾಡಿದೆ. ಮಾಲಾಗೆ ತನ್ನ ಸಹೋದರಿ...