Homeಕರ್ನಾಟಕಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಸಚಿವ ನಾಗೇಶ್ ಹೇಳಿಕೆ ಅಮಾನವೀಯ, ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯವಾಗಿದ್ದು, ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ.
ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವು ಮಾತನಾಡಬೇಕಾದರೆ ಕನಿಷ್ಠ ಮಟ್ಟದ ಪ್ರಜ್ಞೆ, ಲಜ್ಜೆ, ನೈತಿಕತೆ ಇವ್ಯಾವುಗಳೂ ಇಲ್ಲದಂತೆ ವರ್ತಿಸಲು ಪ್ರಾರಂಭಿಸುತ್ತಾರೆ. ಅದರ ಭಾಗವಾಗಿಯೆ ಕಲ್ಬುರ್ಗಿಯಲ್ಲಿ ನಿನ್ನೆ ಬಿ.ಸಿ ನಾಗೇಶ್ ಅವರು ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಮಕ್ಕಳು ಶಾಲೆಗೆ ಬರುವುದು ಕಲಿಯುವುದಕ್ಕೆ ಹೊರತು, ಶೂ ಸಾಕ್ಸ್ ಹಾಕಿಕೊಳ್ಳುವುದಕ್ಕೆ ಅಲ್ಲ’ ಎಂದು ಸಚಿವರು ಹೇಳಿದ್ದಾರೆ. ನಾನು ನಾಗೇಶ್ ಅವರನ್ನು ಕೇಳಬಯಸುತ್ತೇನೆ, ನಿಮ್ಮ ಮಕ್ಕಳಾಗಲಿ ಅಥವಾ ನೀವಾಗಲಿ ಎಂದಾದರೂ ಕಾಲಿಗೆ ಚಪ್ಪಲಿ ಇಲ್ಲದೆ ಓಡಾಡಿದ ಅನುಭವ ಇದೆಯೆ, ಅದರ ಅವಮಾನ, ಕೀಳರಿಮೆಗಳನ್ನು ಅನುಭವಿಸಿದ ಉದಾಹರಣೆಗಳಿವೆಯೆ? ಎಂದು ಅವರು ಪ್ರಶ್ನಿಸಿದ್ದಾರೆ.

“ಕಾನ್ವೆಂಟ್‌ ಸ್ಕೂಲಿಗೆ ಹೋಗುವ ಮಕ್ಕಳು ಶುಭ್ರ ಬಟ್ಟೆ, ಟೈ, ಕಾಲಿಗೆ ಶೂ, ಸಾಕ್ಸ್ ಹಾಕಿಕೊಂಡು ನಡೆದಾಡುವುದನ್ನು ನೋಡಿದಾಗ ಅದೇ ಬೀದಿಯಲ್ಲಿ, ಅದೇ ಹಳ್ಳಿಯಲ್ಲಿ ಆಟವಾಡುವ ಬಡವರ ಮಕ್ಕಳು ಬರಿಗಾಲಲ್ಲಿ, ಹರಿದ ಬಟ್ಟೆಯಲ್ಲಿದ್ದರೆ ನಿಮಗೆ ಏನೂ ಅನ್ನಿಸುವುದಿಲ್ಲವೆ? ಅಥವಾ ಆ ಕಷ್ಟದಲ್ಲಿರುವ ಮಕ್ಕಳಿಗೆ ಏನನ್ನಿಸುತ್ತದೆ ಎಂಬ ಅರಿವಾದರೂ ಇದೆಯೆ ನಿಮಗೆ? ಅವರು ಹಾಗೆಯೆ ಬರಿಗಾಲಿನಲ್ಲಿ ಇರಬೇಕೆಂದು ರಾಷ್ಟ್ರ ಭಕ್ತಿಯ ಬಗ್ಗೆ ಮಾತನಾಡುವ ಸಂಘ ನಿಮಗೆ ಹೇಳಿಕೊಟ್ಟಿದೆಯೆ? ಹೇಳಿಕೊಟ್ಟಿರಲು ಸಾಧ್ಯವಿದೆ. ಶೂದ್ರರ ಬಳಿ ವಿದ್ಯೆ, ಹಣ, ಅಧಿಕಾರಗಳು ಇರಬಾರದೆಂಬ ಕಾರಣಕ್ಕೆ ತಾನೆ ಈ ಸಂಘ ಹುಟ್ಟಿಕೊಂಡು ನಮ್ಮ ಮಕ್ಕಳ ಮೆದುಳಿಗೆ ವಿಷ ಹಾಕುತ್ತಿರುವುದು” ಎಂದು ಅವರು ಹೇಳಿದ್ದಾರೆ.

“ದಲಿತರು, ಅಲೆಮಾರಿಗಳು, ಹಿಂದುಳಿದವರ ಹಾಗೂ ಎಲ್ಲ ಜಾತಿಯ ಬಡವರ ಮಕ್ಕಳಿಗೆ ಸಣ್ಣ ಸ್ವಾಭಿಮಾನ ಇರಲಿ, ಕಲಿಯುವ, ಶಾಲೆಗೆ ಹೋಗುವ ಹುಮ್ಮಸ್ಸು ಬರಲಿ ಎಂಬ ಕಾರಣಕ್ಕೆ ನಾವು ಮಕ್ಕಳ ಸ್ನೇಹಿಯಾದ ಯೋಜನೆಗಳನ್ನು ಜಾರಿಗೆ ತಂದಿದ್ದೆವು. ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿ.ಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ: ಪಬ್ಲಿಕ್‌ ಟಿವಿ ವಿರುದ್ಧ ಕಾಂಗ್ರೆಸ್‌ ದೂರು

“ನಿಮ್ಮ ಸರ್ಕಾರಕ್ಕೆ ಕನಿಷ್ಠ ಶೂ, ಸಾಕ್ಸ್, ಸೈಕಲ್‍ಗಳನ್ನೂ ನೀಡಲಾಗದಷ್ಟು ದರಿದ್ರ ಬಂದಿದೆಯೆ? ಹಾಗಿದ್ದರೆ ನಾಡಿನ ಬಡವನೊಬ್ಬನಿಂದಲೂ ವರ್ಷಕ್ಕೆ 1 ಲಕ್ಷ ರೂಪಾಯಿಗಳಷ್ಟು ತೆರಿಗೆಯನ್ನು ಮೋದಿ ಸರ್ಕಾರ ಮತ್ತು ಬೊಮ್ಮಾಯಿಯವರ ಸರ್ಕಾರಗಳು ವಸೂಲಿ ಮಾಡುತ್ತಿವೆಯೆಂದು ಪತ್ರಿಕೆಗಳು ಸಮೀಕ್ಷೆ ಮಾಡಿದ್ದವು. ಹಾಗೆ ಬಡವರಿಂದ ದೋಚಿಕೊಂಡ ತೆರಿಗೆ ಹಣವನ್ನು ಏನು ಮಾಡುತ್ತಿದ್ದೀರಿ?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

“40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಮಕ್ಕಳ ಶಿಕ್ಷಣವನ್ನೂ ನೋಡಿಕೊಳ್ಳುವ ಯೋಗ್ಯತೆ ಇಲ್ಲದ ಮೇಲೆ ನೀವು ಯಾರ ಸುಖಕ್ಕಾಗಿ ಸರ್ಕಾರ ನಡೆಸುತ್ತಿದ್ದೀರಿ? ನಿಮಗೆ ಸಣ್ಣ ಕಾಳಜಿಯೇನಾದರೂ ಇದ್ದರೆ ಹೀಗೆಲ್ಲ ಮಾತನಾಡಲು ಸಾಧ್ಯವೆ?” ಎಂದು ಅವರು ಕೇಳಿದ್ದಾರೆ.

“ಮಕ್ಕಳ ಕಲ್ಯಾಣಕ್ಕಾಗಿ ಇರುವ ಎಲ್ಲ ಹಿಂದಿನ ಯೋಜನೆಗಳನ್ನು ಮುಂದುವರೆಸಬೇಕು, ಶೂ, ಸಾಕ್ಸ್, ಸೈಕಲ್, ಹಾಲು, ಸಮವಸ್ತ್ರ, ಪುಸ್ತಕ, ವ್ಯವಸ್ಥಿತ ಕೊಠಡಿಗಳನ್ನು ಕೂಡಲೆ ಒದಗಿಸಬೇಕು. ಪ್ರವಾಹ, ಅತಿವೃಷ್ಟಿಯಿಂದ ಹಾನಿಯಾದ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ನಿರ್ಮಿಸುವ ಕೆಲಸ ಇನ್ನೂ ಆಗಿಲ್ಲ. ಅವುಗಳನ್ನು ಶೀಘ್ರವಾಗಿ ಪುನರ್ ‌ನಿರ್ಮಿಸಬೇಕು. ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ನಮ್ಮ ಸರ್ಕಾರದ ಅವಧಿಯಲ್ಲಿ 7,905 ಪ್ರಾಥಮಿಕ ಶಾಲಾ ಶಿಕ್ಷಕರು, 1,689 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಿದ್ದೆವು. ಜೊತೆಗೆ 10000 ಪಧವೀಧರ ವಿಷಯವಾರು ಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ಗ್ರಂಥ ಪಾಲಕರ ನೇಮಕಾತಿಯು ಅಂತಿಮಗೊಳಿಸುವ ಹಂತಕ್ಕೆ ಬಂದಿತ್ತು. ಇದರಿಂದಾಗಿ ಒಟ್ಟು 20,000 ಶಿಕ್ಷಕರ ನೇಮಕಾತಿ ಮಾಡಿದಂತಾಗಿತ್ತು. ಇದರ ಜೊತೆಗೆ ನಮ್ಮ ಅವಧಿಯಲ್ಲಿ 20,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೆವು”

“ನಮ್ಮ ಅವಧಿಯಲ್ಲಿ 1,763 ಪಿಯು ಕಾಲೇಜುಗಳ ಉಪನ್ಯಾಸಕರನ್ನು ನೇಮಕಾತಿ ಮಾಡಿದ್ದೆವು.
ನಮ್ಮ ಸರ್ಕಾರ 47 ಲಕ್ಷ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ಹಾಗೂ 5 ಲಕ್ಷ ಮಕ್ಕಳಿಗೆ ಬೈಸಿಕಲ್ ನೀಡಿದ್ದೆವು. ನಾವು ಮಕ್ಕಳ ಪೌಷ್ಟಿಕತೆ ಹೆಚ್ಚಿಸುವುದಕ್ಕಾಗಿಯೆ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ವಾರದಲ್ಲಿ 5 ದಿನ ಕೆನೆಭರಿತ ಹಾಲನ್ನು ನೀಡಿದ್ದೆವು”

“ನಾವು ಕೈಗೊಂಡ ಕ್ರಮಗಳಿಂದಾಗಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಮತ್ತು ಎನ್‍ಸಿಇಆರ್‌‌ಟಿ ಯು ರಾಜ್ಯದ ಶಾಲೆಗಳಲ್ಲಿ 3,5,8 ನೇ ತರಗತಿಗಳಲ್ಲಿ ಕಲಿಯುತ್ತಿದ್ದ 1.29 ಲಕ್ಷ ವಿದ್ಯಾರ್ಥಿಗಳಿಗೆ ನಡೆಸಿದ ರಾಷ್ಟ್ರೀಯ ಸಾಧನೆ ಸಮೀಕ್ಷೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲೆ ಇತ್ತು”

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

“ನಾವು ಮಕ್ಕಳ ಶಿಕ್ಷಣಕ್ಕಾಗಿಯೆ 1400 ಕ್ಕೂ ಹೆಚ್ಚು ಹಾಸ್ಟೆಲ್‍ಗಳು, ಆಶ್ರಮ ಶಾಲೆಗಳು, ಮತ್ತು ವಸತಿ ಶಾಲೆಗಳನ್ನು ನಿರ್ಮಿಸಿದ್ದೆವು. ಬಿಜೆಪಿ ಸರ್ಕಾರ ಎಷ್ಟನ್ನು ನಿರ್ಮಿಸಿದೆ ಎಂಬುದನ್ನು ನಾಡಿಗೆ ತಿಳಿಸಬೇಕು.
ನಮ್ಮ ಸರ್ಕಾರದ ಅವಧಿಯಲ್ಲಿ ನನ್ನ ಮಾಹಿತಿಯ ಪ್ರಕಾರ 71,279 ಕೊಠಡಿಗಳ ನವೀಕರಣ, ಪುನರ್ ನವೀಕರಣ ಕಾರ್ಯಗಳನ್ನು ಮಾಡಿ ಮುಗಿಸಿದ್ದೆವು. ಈ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ಬಿಡುಗಡೆ ಮಾಡುವೆ”

“ಬಿಜೆಪಿ ಸರ್ಕಾರ ಎಷ್ಟು ಜನ ಶಿಕ್ಷಕರನ್ನು ನೇಮಕ ಮಾಡಿದೆ? ಎಷ್ಟು ಜನ ಮಕ್ಕಳಿಗೆ ಸೈಕಲ್ ನೀಡಿದೆ? ಎಷ್ಟು ಶಾಲೆಗಳನ್ನು, ವಸತಿ ಶಾಲೆಗಳನ್ನು ನಿರ್ಮಿಸಿದೆ ಎಂದು ಹೇಳಬೇಕು. ಮಕ್ಕಳಿಗೆ ಶೂ, ಸಾಕ್ಸ್, ಪುಸ್ತಕ, ಸೈಕಲ್ ಅಷ್ಟೆ ಅಲ್ಲ ಸಮರ್ಪಕವಾಗಿ ವಿದ್ಯಾರ್ಥಿ ವೇತನಗಳನ್ನೂ ಬಿಜೆಪಿ ಸರ್ಕಾರಕ್ಕೆ ನೀಡಲು ಸಾಧ್ಯವಾಗಿಲ್ಲ.
ನಮ್ಮ ಸರ್ಕಾರ ತೆಗೆದುಕೊಂಡ ಕ್ರಮಗಳಿಂದ ಮಕ್ಕಳ ಅಪೌಷ್ಟಿಕತೆ ಕಡಿಮೆಯಾಗಿತ್ತು. ಶಾಲೆಗಳ ಹಾಜರಾತಿ ಹೆಚ್ಚಿತ್ತು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಈಗ ಸರ್ಕಾರವೆ ಹೈ ಕೋರ್ಟಿಗೆ ಸಲ್ಲಿಸಿರುವ ವರದಿ ಪ್ರಕಾರ ಸುಮಾರು 10.12 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ ಇದ್ದಾರೆ. ಈ ಮಕ್ಕಳ ಭವಿಷ್ಯವೇನಾಗಬಹುದು ಎಂದು ಸರ್ಕಾರ ಯೋಚಿಸಿದೆಯೆ?
ಆಡಳಿತ ಪಕ್ಷದಲ್ಲಿರುವ ಸಚಿವರು ವಿರೋಧ ಪಕ್ಷಗಳಿಗೆ ಪ್ರಶ್ನೆ ಕೇಳುವುದಲ್ಲ. ಸರ್ಕಾರದ ಕೆಲಸಗಳು ಉತ್ತರ ನೀಡುವಂತೆ ಇರಬೇಕೆ ಹೊರತು, ಮಂತ್ರದಿಂದ ಮಾವಿನ ಉದುರಿಸಲು ಸಾಧ್ಯವಿಲ್ಲ”

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

“ಅಷ್ಟಕ್ಕೂ ಶಿಕ್ಷಣ ಸಚಿವರಿಗೆ ಕಾಳಜಿ, ಬದ್ಧತೆ ಇದ್ದರೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯಲ್ಲಿ 2008 ರಿಂದ ಇದುವರೆಗೆ ಏನೇನಾಗಿದೆ? ಯಾವ ಸಾಧನೆಗಳಾಗಿವೆ ಎಂಬ ಕುರಿತು ಹಾಗೂ ಈ 14 ವರ್ಷಗಳಲ್ಲಿ ಸದರಿ ಇಲಾಖೆಯಲ್ಲಿ ಖರ್ಚು ಮಾಡಿದ ಪ್ರತಿ ಪೈಸೆಗೂ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...