ಕೇಂದ್ರ ಸರ್ಕಾರ ಶುಕ್ರವಾರ ಚುನಾವಣಾ ನೀತಿ ನಿಯಮಗಳಿಗೆ ತಿದ್ದುಪಡಿ ತಂದಿದೆ. ಈ ತಿದ್ದುಪಡಿಯಿಂದಾಗಿ ಇನ್ನು ಮುಂದೆ ಚುನಾವಣೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಇತ್ತಿಚಿನ ಹರಿಯಾಣದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಯಲ್ಲಿ ಪಡೆದ ಮತಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ವಕೀಲರೊಬ್ಬರಿಗೆ ಒದಗಿಸುವಂತೆ ಸೂಚಿಸಿದ ಕೆಲವು ದಿನಗಳ ನಂತರ ಸರ್ಕಾರ ಈ ಬದಲಾವಣೆ ಮಾಡಿದೆ. ಚುನಾವಣಾ ದಾಖಲೆಗಳನ್ನು
1961 ರ ಚುನಾವಣಾ ನಿಯಮಗಳ ಹಿಂದಿನ ನಿಯಮ 93 (2) (ಎ) “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತದೆ” ಎಂದು ಇತ್ತು. ಇದೀಗ ಕೇಂದ್ರ ಸರ್ಕಾರ ಇದನ್ನು ಬದಲಾಯಿಸಿ, “ಚುನಾವಣೆಗೆ ಸಂಬಂಧಿಸಿದ ಈ ‘ನಿಯಮಾವಳಿಗಳಲ್ಲಿ ನಿರ್ದಿಷ್ಟ’ಪಡಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತವೆ.” ಎಂದು ನಿಯಮ ತಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು ಚುನಾವಣಾ ಆಯೋಗದೊಂದಿಗೆ ಸಮಾಲೋಚಿಸಿ ಈ ಬದಲಾವಣೆಗೆ ಸೂಚನೆ ನೀಡಿದ್ದು, ಹಾಗಾಗಿ ಸಾರ್ವಜನಿಕರಿಂದ ಮತದಾನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಲು ಇನ್ನು ಮುಂದೆ ಸಾಧ್ಯವಾಗುವುದಿಲ್ಲ. ಚುನಾವಣಾ ನಿಯಮಗಳ ನಡವಳಿಕೆಯಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಸಾರ್ವಜನಿಕರು ಪರಿಶೀಲಿಸಬಹುದು.
ಹಾಗಾಗಿ, ಸಾರ್ವಜನಿಕರಿಗೆ ಚುನಾವಣಾ ಸಂಬಂಧಿತ ಎಲ್ಲಾ ದಾಖಲೆಗಳನ್ನು ಒದಗಿಸಲು ಚುನಾವಣಾ ಸಮಿತಿಗೆ ನಿರ್ದೇಶನ ನೀಡಲು ನ್ಯಾಯಾಲಯಗಳಿಗೆ ಸಾಧ್ಯವಾಗುವುದಿಲ್ಲ. ಚುನಾವಣಾ ದಾಖಲೆಗಳನ್ನು
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಡಿಸೆಂಬರ್ 9 ರಂದು ಚುನಾವಣಾ ಆಯೋಗಕ್ಕೆ ವೀಡಿಯೋಗ್ರಫಿ, ಭದ್ರತಾ ಕ್ಯಾಮೆರಾದ ದೃಶ್ಯಾವಳಿಗಳು ಮತ್ತು ಇತ್ತೀಚಿನ ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಯಲ್ಲಿ ಪಡೆದ ಮತಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ವಕೀಲ ಮೆಹಮೂದ್ ಪ್ರಾಚಾಗೆ ಒದಗಿಸುವಂತೆ ಸೂಚಿಸಿತ್ತು. ಇದಾಗಿ ಕೆಲವು ದಿನಗಳ ನಂತರ ಕೇಂದ್ರ ಸರ್ಕಾರ ನಿಯಮಗಳನ್ನು ಬದಲಾಯಿಸಿದೆ.
ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ವಕೀಲ ಪ್ರಾಚಾ ಅವರು, “ಪ್ರಜಾಪ್ರಭುತ್ವ ಮತ್ತು ಬಾಬಾಸಾಹೇಬರ ಸಂವಿಧಾನವನ್ನು ಉಳಿಸಲು ನಾವು ಪ್ರತಿಕೂಲ ಸ್ಥಿತಿಯಲ್ಲಿ ಹೋರಾಡಬೇಕಿದೆ. ಮನುವಾದಿ ಶಕ್ತಿಗಳು ಇತಿಹಾಸದುದ್ದಕ್ಕೂ ಅಂಬೇಡ್ಕರ್‌ವಾದಿಗಳನ್ನು ಹತ್ತಿಕ್ಕಲು ಅನೈತಿಕ ಮತ್ತು ಅನ್ಯಾಯದ ವಿಧಾನಗಳನ್ನು ಬಳಸುತ್ತಿದ್ದಾರೆ. ಆದರೆ ಈ ಪ್ರಜಾಪ್ರಭುತ್ವ ವಿರೋಧಿ ಮತ್ತು ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸಲು ನಾವು ಕಾನೂನು ಮಾರ್ಗಗಳು ಸೇರಿದಂತೆ ನಮ್ಮದೇ ಆದ ವಿಧಾನಗಳಿವೆ’’ ಎಂದು ಸ್ಕ್ರಾಲ್.ಇನ್‌ಗೆ ಹೇಳಿದ್ದಾರೆ.
ಚುನಾವಣಾ ಆಯೋಗವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಚಾ ಅವರ ಮನವಿಯನ್ನು ವಿರೋಧಿಸಿತ್ತು. ಅಕ್ಟೋಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಾಚಾ ಅವರು ಅಭ್ಯರ್ಥಿಯಾಗಿರಲಿಲ್ಲ, ಆದ್ದರಿಂದ ಅವರು ಚುನಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಕೇಳುವಂತಿಲ್ಲ ಎಂದು ಅದು ವಾದಿಸಿತ್ತು. ಆದರೆ, ವಕೀಲ ಪ್ರಾಚಾ ಅವರ ವಾದವನ್ನು ಪುರಸ್ಕರಿಸಿದ್ದ ಹೈಕೋರ್ಟ್, ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗೆ ಉಚಿತವಾಗಿ ಮತ್ತು ಇತರ ವ್ಯಕ್ತಿಗಳಿಗೆ ನಿಗದಿತ ಶುಲ್ಕ ಪಾವತಿಸಿ ದಾಖಲೆಗಳನ್ನು ನೀಡಬೇಕು ಎಂದು ಹೇಳಿತ್ತು.
ಇದನ್ನೂ ಓದಿ: ಟ್ರೋಲ್ ಮಾಡಿದ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮುಂದಾದ ‘ಸ್ವಯಂ ಘೋಷಿತ ಬಾಲ ಸಂತ’
ಟ್ರೋಲ್ ಮಾಡಿದ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮುಂದಾದ ‘ಸ್ವಯಂ ಘೋಷಿತ ಬಾಲ ಸಂತ’


