Homeಮುಖಪುಟಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

- Advertisement -
- Advertisement -

ಕೇಂದ್ರ ಸರ್ಕಾರ ಶುಕ್ರವಾರ ಚುನಾವಣಾ ನೀತಿ ನಿಯಮಗಳಿಗೆ ತಿದ್ದುಪಡಿ ತಂದಿದೆ. ಈ ತಿದ್ದುಪಡಿಯಿಂದಾಗಿ ಇನ್ನು ಮುಂದೆ ಚುನಾವಣೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಇತ್ತಿಚಿನ ಹರಿಯಾಣದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಯಲ್ಲಿ ಪಡೆದ ಮತಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ವಕೀಲರೊಬ್ಬರಿಗೆ ಒದಗಿಸುವಂತೆ ಸೂಚಿಸಿದ ಕೆಲವು ದಿನಗಳ ನಂತರ ಸರ್ಕಾರ ಈ ಬದಲಾವಣೆ ಮಾಡಿದೆ. ಚುನಾವಣಾ ದಾಖಲೆಗಳನ್ನು

1961 ರ ಚುನಾವಣಾ ನಿಯಮಗಳ ಹಿಂದಿನ ನಿಯಮ 93 (2) (ಎ) “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತದೆ” ಎಂದು ಇತ್ತು. ಇದೀಗ ಕೇಂದ್ರ ಸರ್ಕಾರ ಇದನ್ನು ಬದಲಾಯಿಸಿ, “ಚುನಾವಣೆಗೆ ಸಂಬಂಧಿಸಿದ ಈ ‘ನಿಯಮಾವಳಿಗಳಲ್ಲಿ ನಿರ್ದಿಷ್ಟ’ಪಡಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತವೆ.” ಎಂದು ನಿಯಮ ತಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು ಚುನಾವಣಾ ಆಯೋಗದೊಂದಿಗೆ ಸಮಾಲೋಚಿಸಿ ಈ ಬದಲಾವಣೆಗೆ ಸೂಚನೆ ನೀಡಿದ್ದು, ಹಾಗಾಗಿ ಸಾರ್ವಜನಿಕರಿಂದ ಮತದಾನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಲು ಇನ್ನು ಮುಂದೆ ಸಾಧ್ಯವಾಗುವುದಿಲ್ಲ. ಚುನಾವಣಾ ನಿಯಮಗಳ ನಡವಳಿಕೆಯಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಸಾರ್ವಜನಿಕರು ಪರಿಶೀಲಿಸಬಹುದು.

ಹಾಗಾಗಿ, ಸಾರ್ವಜನಿಕರಿಗೆ ಚುನಾವಣಾ ಸಂಬಂಧಿತ ಎಲ್ಲಾ ದಾಖಲೆಗಳನ್ನು ಒದಗಿಸಲು ಚುನಾವಣಾ ಸಮಿತಿಗೆ ನಿರ್ದೇಶನ ನೀಡಲು ನ್ಯಾಯಾಲಯಗಳಿಗೆ ಸಾಧ್ಯವಾಗುವುದಿಲ್ಲ. ಚುನಾವಣಾ ದಾಖಲೆಗಳನ್ನು

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಡಿಸೆಂಬರ್ 9 ರಂದು ಚುನಾವಣಾ ಆಯೋಗಕ್ಕೆ ವೀಡಿಯೋಗ್ರಫಿ, ಭದ್ರತಾ ಕ್ಯಾಮೆರಾದ ದೃಶ್ಯಾವಳಿಗಳು ಮತ್ತು ಇತ್ತೀಚಿನ ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಯಲ್ಲಿ ಪಡೆದ ಮತಗಳಿಗೆ ಸಂಬಂಧಿಸಿದ ದಾಖಲೆಗಳ ಪ್ರತಿಗಳನ್ನು ವಕೀಲ ಮೆಹಮೂದ್ ಪ್ರಾಚಾಗೆ ಒದಗಿಸುವಂತೆ ಸೂಚಿಸಿತ್ತು. ಇದಾಗಿ ಕೆಲವು ದಿನಗಳ ನಂತರ ಕೇಂದ್ರ ಸರ್ಕಾರ ನಿಯಮಗಳನ್ನು ಬದಲಾಯಿಸಿದೆ.

ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ವಕೀಲ ಪ್ರಾಚಾ ಅವರು, “ಪ್ರಜಾಪ್ರಭುತ್ವ ಮತ್ತು ಬಾಬಾಸಾಹೇಬರ ಸಂವಿಧಾನವನ್ನು ಉಳಿಸಲು ನಾವು ಪ್ರತಿಕೂಲ ಸ್ಥಿತಿಯಲ್ಲಿ ಹೋರಾಡಬೇಕಿದೆ. ಮನುವಾದಿ ಶಕ್ತಿಗಳು ಇತಿಹಾಸದುದ್ದಕ್ಕೂ ಅಂಬೇಡ್ಕರ್‌ವಾದಿಗಳನ್ನು ಹತ್ತಿಕ್ಕಲು ಅನೈತಿಕ ಮತ್ತು ಅನ್ಯಾಯದ ವಿಧಾನಗಳನ್ನು ಬಳಸುತ್ತಿದ್ದಾರೆ. ಆದರೆ ಈ ಪ್ರಜಾಪ್ರಭುತ್ವ ವಿರೋಧಿ ಮತ್ತು ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸಲು ನಾವು ಕಾನೂನು ಮಾರ್ಗಗಳು ಸೇರಿದಂತೆ ನಮ್ಮದೇ ಆದ ವಿಧಾನಗಳಿವೆ’’ ಎಂದು ಸ್ಕ್ರಾಲ್‌.ಇನ್‌ಗೆ ಹೇಳಿದ್ದಾರೆ.

ಚುನಾವಣಾ ಆಯೋಗವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಚಾ ಅವರ ಮನವಿಯನ್ನು ವಿರೋಧಿಸಿತ್ತು. ಅಕ್ಟೋಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಾಚಾ ಅವರು ಅಭ್ಯರ್ಥಿಯಾಗಿರಲಿಲ್ಲ, ಆದ್ದರಿಂದ ಅವರು ಚುನಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಕೇಳುವಂತಿಲ್ಲ ಎಂದು ಅದು ವಾದಿಸಿತ್ತು. ಆದರೆ, ವಕೀಲ ಪ್ರಾಚಾ ಅವರ ವಾದವನ್ನು ಪುರಸ್ಕರಿಸಿದ್ದ ಹೈಕೋರ್ಟ್, ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗೆ ಉಚಿತವಾಗಿ ಮತ್ತು ಇತರ ವ್ಯಕ್ತಿಗಳಿಗೆ ನಿಗದಿತ ಶುಲ್ಕ ಪಾವತಿಸಿ ದಾಖಲೆಗಳನ್ನು ನೀಡಬೇಕು ಎಂದು ಹೇಳಿತ್ತು.

ಇದನ್ನೂ ಓದಿ: ಟ್ರೋಲ್ ಮಾಡಿದ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮುಂದಾದ ‘ಸ್ವಯಂ ಘೋಷಿತ ಬಾಲ ಸಂತ’ 

ಟ್ರೋಲ್ ಮಾಡಿದ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮುಂದಾದ ‘ಸ್ವಯಂ ಘೋಷಿತ ಬಾಲ ಸಂತ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...