Homeರಾಜಕೀಯಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ; ಮುರ್ಮು ಮತ್ತು ಸಿನ್ಹಾ ಮುಖಾಮುಖಿ

ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ; ಮುರ್ಮು ಮತ್ತು ಸಿನ್ಹಾ ಮುಖಾಮುಖಿ

ಯಾವುದೇ ಪಕ್ಷದಿಂದ ವಿಪ್ ನೀಡಲಾಗುವುದಿಲ್ಲವಾದ್ದರಿಂದ ಸಂಸದರು ಹಾಗೂ ಶಾಸಕರು ತಮಗೆ ಬೇಕಾದಂತೆ ಮತ ಚಲಾಯಿಸಬಹುದಾಗಿದೆ

- Advertisement -
- Advertisement -

ಆಡಳಿತರೂಢ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಜಂಟಿ ಆಯ್ಕೆಯಾದ ಯಶವಂತ್ ಸಿನ್ಹಾ ಅವರು ಸೋಮವಾರ (ಇಂದು) ನಡೆಯುವ ರಾಷ್ಟ್ರಪತಿ ಚುನಾವಣೆಗಾಗಿ ಮುಖಾಮುಖಿಯಾಗಲಿದ್ದಾರೆ. ಭಾರತದ 15ನೇ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಸುಮಾರು 4,000 ಕ್ಕೂ ಹೆಚ್ಚು ಸಂಸದರು ಮತ್ತು ಶಾಸಕರು ತಮ್ಮ ಮತವನ್ನು ಚಲಾಯಿಸಲಿದ್ದಾರೆ.

ಸಂಸತ್ ಭವನ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಜುಲೈ 21 ರಂದು ಮತ ಎಣಿಕೆ ನಡೆಯಲಿದ್ದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

64 ವರ್ಷದ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯ ಪ್ರಬಲ ಸ್ಪರ್ಧಿಯಾಗಿದ್ದಾರೆ. ಒಡಿಶಾದ ಬುಡಕಟ್ಟು ಮಹಿಳೆಯಾಗಿರುವ ಅವರು ಜಾರ್ಖಂಡ್‌ನ ಮಾಜಿ ರಾಜ್ಯಪಾಲೆಯೂ ಆಗಿದ್ದಾರೆ. ಮುರ್ಮು ಅವರ ಆಯ್ಕೆಯೂ ಲೆಕ್ಕಾಚಾರದ ಕ್ರಮವೆಂದು ಪರಿಗಣಿಸಲ್ಪಟ್ಟಿದ್ದು, ಇದು ಜಾರ್ಖಂಡ್‌ನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ ಬೆಂಬಲವನ್ನು ಮಾತ್ರವಲ್ಲದೆ ಒಡಿಶಾದ ನವೀನ್ ಪಟ್ನಾಯಕ್ ಅವರ ಬೆಂಬಲ ಕೂಡಾ ಪಡೆಯುವಂತೆ ನೋಡಿಕೊಳ್ಳಲಾಗಿದೆ.

ಇದನ್ನೂ ಓದಿ: ವಿವರಣೆ: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ಮುರ್ಮು ಅವರಿಗೆ ಬೆಂಬಲ ನೀಡುತ್ತೇವೆ ಎಂಬ ಭರವಸೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೀಡಿದ್ದಾರೆ. ಬಿಹಾರದಲ್ಲಿ ಬಿಜೆಪಿಯೊಂದಿಗೆ ನಿತೀಶ್ ಕುಮಾರ್‌ ಅವರ ಪಕ್ಷವೂ ಮೈತ್ರಿಯಲ್ಲಿದ್ದರೂ, ಇತ್ತೀಚೆಗೆ ಅವರ ನಡುವೆ ಸಂಬಂಧದಲ್ಲಿ ಬಿರುಕು ಬಿಟ್ಟಿತ್ತು.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಏಕನಾಥ್ ಶಿಂಧೆ ಬಣ ಮುರ್ಮು ಅವರನ್ನು ಬೆಂಬಲಿಸುತ್ತಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಬಣ ಕೂಡಾ ಅವರನ್ನು ಬೆಂಬಲಿಸುತ್ತಿದೆ.

16 ಸಂಸದರು ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಬುಡಕಟ್ಟು ಮಹಿಳೆ ಮುರ್ಮು ಅವರಿಗೆ ಮತ ಹಾಕುವಂತೆ ಸೂಚಿಸಿದ ನಂತರ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುತ್ತಿದ್ದ ಠಾಕ್ರೆ ಬಣ ತಮ್ಮ ನಿರ್ಧಾರವನ್ನು ಬದಲಾಯಿಸಲು ನಿರ್ಧರಿಸಿದೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ‘ದ್ರೌಪದಿ ಮುರ್ಮು ಬಗ್ಗೆ ಗೌರವವಿದೆ, ಆದರೆ…’: ಯಶವಂತ ಸಿನ್ಹಾ ಬೆಂಬಲಿಸಿದ ಆಮ್‌ ಆದ್ಮಿ ಪಕ್ಷ

ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಚಿವರಾಗಿದ್ದ ಯಶವಂತ ಸಿನ್ಹಾ ಅವರು ನಂತರ ತೃಣಮೂಲ ಕಾಂಗ್ರೆಸ್‌ ಪಕ್ಷವನ್ನು ಸೇರಿದ್ದರು. ವಿರೋಧ ಪಕ್ಷಗಳು ಮೂವರು ಹಿರಿಯ ನಾಯಕರನ್ನು ಅಭ್ಯರ್ಥಿಯಾಗುವಂತೆ ಕೇಳಿಕೊಂಡರೂ ಅವರು ನಿರಾಕರಿಸಿದ ನಂತರ ವಿರೋಧ ಪಕ್ಷಗಳು ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ಒಮ್ಮತದಿಂದ ಆಯ್ಕೆ ಮಾಡಿತ್ತು.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಾಜಿ ರಾಜ್ಯಪಾಲ ಗೋಪಾಲ ಕೃಷ್ಣ ಗಾಂಧಿ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ವಿವಿಧ ಕಾರಣಗಳನ್ನು ಉಲ್ಲೇಖಿಸಿ ವಿರೋಧ ಪಕ್ಷಗಳ ಅಭ್ಯರ್ಥಿಯಾಗಲು ನಿರಾಕರಿಸಿದ್ದರು.

ಸಂಸತ್ತಿನ ಎರಡೂ ಸದನಗಳ ಚುನಾಯಿತ ಸದಸ್ಯರು ಮತ್ತು ಎಲ್ಲಾ ರಾಜ್ಯಗಳ ಶಾಸಕಾಂಗ ಸಭೆಗಳು ಹಾಗೂ ರಾಷ್ಟ್ರೀಯ ರಾಜಧಾನಿ ದೆಹಲಿ ಮತ್ತು ಕೇಂದ್ರಾಡಳಿತ ಪ್ರದೇಶವನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಸದಸ್ಯರು ರಾಷ್ಟ್ರಪತಿಯನ್ನು ಆಯ್ಕೆ ಮಾಡುತ್ತಾರೆ.

ಇದನ್ನೂ ಓದಿ: ಉಪ ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಸಚಿವೆ ಮಾರ್ಗರೆಟ್ ಆಳ್ವ ಆಯ್ಕೆ

ಮತದಾನಕ್ಕೆ ಯಾವುದೇ ಪಕ್ಷದಿಂದ ವಿಪ್ ನೀಡಲಾಗುವುದಿಲ್ಲವಾದ್ದರಿಂದ ಸಂಸದರು ಹಾಗೂ ಶಾಸಕರು ತಮಗೆ ಬೇಕಾದಂತೆ ಮತ ಚಲಾಯಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...