Homeಮುಖಪುಟಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ...

ಕಾಶ್ಮೀರದಲ್ಲಿ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ…

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಟೋಬರ್ 24ರಂದು ಬಿಡಿಸಿ ಚುನಾವಣೆ ನಡೆಯಲಿದ್ದು ಭಾರತೀಯ ಜನತಾ ಪಕ್ಷವೊಂದನ್ನು ಬಿಟ್ಟು ಉಳಿದ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯಿಂದ ದೂರ ಉಳಿದಿವೆ. 370 ವಿಧಿ ರದ್ದುಪಡಿಸಿರುವುದೇ ಚುನಾವಣೆ ಬಹಿಷ್ಕರಿಸಲು ಪ್ರಮುಖ ಕಾರಣವಾಗಿದೆ.

ಕಣಿವೆಯಲ್ಲಿ ಪ್ರಾಬಲ್ಯ ಹೊಂದಿರುವ ನ್ಯಾಷನಲ್ ಕಾನ್ಫೆರೆನ್ಸ್, ಪೀಪಲ್ ಡೆಮೊಕ್ರೆಟಿಕ್ ಪಕ್ಷ, ಜಮ್ಮು ಕಾಶ್ಮೀರ ಪೀಪಲ್ ಪಾರ್ಟಿ ಸೇರಿದಂತೆ ಇತರೆ ಸಣ್ಣಪಕ್ಷಗಳು ಬಿಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಹೀಗಾಗಿ  ಜಮ್ಮು ಮತ್ತು ಕಾಶ್ಮೀರದ ಚುನಾವಣೆಯ ಇತಿಹಾಸದಲ್ಲೇ ಈ ರೀತಿಯ ಸನ್ನಿವೇಶ ಸೃಷ್ಟಿಯಾಗಿರುವುದು ಇದೇ ಮೊದಲು ಎಂದು ವಿಶ್ಲೇಷಣೆಗಳು ನಡೆದಿವೆ.

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷವೂ ಕೂಡ ಬಿಡಿಸಿ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವುದು ಅಲ್ಲಿನ ಗಂಭೀರ ಪರಿಸ್ಥಿತಿಯನ್ನು ಹೇಳುತ್ತದೆ. ಪ್ರಮುಖ ರಾಜಕೀಯ ಮುಖಂಡರು, ವಿದ್ಯಾರ್ಥಿಗಳು, ವಕೀಲರು ಮತ್ತು ಹೋರಾಟಗಾರರನ್ನು ಬಂಧನ ಇಲ್ಲವೇ ಗೃಹಬಂಧನದಲ್ಲಿಡಲಾಗಿದೆ. ಇದರಿಂದ ಸ್ಥಳೀಯ ರಾಜಕೀಯ ಪಕ್ಷಗಳ ಕಚೇರಿಗಳು ಜನರಿಲ್ಲದೆ ಬಿಕೋ ಎನ್ನತ್ತಿವೆ.

ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬಿಡಿಸಿ ಚುನಾವಣೆಗೆ ಸಿದ್ದತೆ ನಡೆದಿದೆ. ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರಿಂದ ಕಚೇರಿ ತುಂಬಿಹೋಗಿದ್ದು, ಚಟುವಟಿಕೆಗಳು ಭರದಿಂದ ಸಾಗಿವೆ. ಇಂತಹ ಯಾವುದೇ ಚಟುವಟಿಕೆಗಳು ಬೇರೆ ರಾಜಕೀಯ ಪಕ್ಷಗಳ ಕಚೇರಿಯಲ್ಲಿ ನಡೆಯುತ್ತಿಲ್ಲ. ನ್ಯಾಷನಲ್ ಕಾನ್ಪೆರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಮತ್ತು ಜಮ್ಮು ಕಾಶ್ಮೀರ್ ಪಾರ್ಟಿ ಸಜ್ಜದ್ ಲೋನ್ ಮೊದಲಾದವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಹೀಗಾಗಿ, ಚುನಾವಣಾ ತಯಾರಿಗೆ ಅಡ್ಡಿಯಾಗಿದೆ.

ಇನ್ನೊಂದೆಡೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿ ಬಂಧಿಸಲಾಗಿದೆ. ಈ ಕಾಯ್ದೆಯಡಿ ಬಂಧನವಾದರೆ ಯಾವುದೇ ವಿಚಾರಣೆ ಇಲ್ಲದೆ ಎರಡು ವರ್ಷಗಳ ಕಾಲ ಜೈಲಿನಲ್ಲಿ ಇಡಲು ಅವಕಾಶವಿದೆ. ಇದೂ ಕೂಡ ಚುನಾವಣೆಯಿಂದ ದೂರ ಸರಿಯಲು ಕಾರಣವಾಗಿದೆ.

ಈ ಚುನಾವಣೆ ಬಿಜೆಪಿಯಿಂದ, ಬಿಬಿಪಿಗಾಗಿ ಮತ್ತು ಬಿಜೆಪಿಗೋಸ್ಕರ ನಡೆಯುತ್ತಿರುವ ಚುನಾವಣೆ ಎಂದು ಹೇಳಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರನ್ನು ಒಳಗೊಂಡು ಚುನಾವಣೆ ನಡೆಸಬೇಕು. ಇದು ಪ್ರಜಾಪ್ರಭುತ್ವದ ಪ್ರಮುಖ ಲಕ್ಷಣವೂ ಹೌದು. ಆದರೆ ಈ ವರ್ಷದ ಆಗಸ್ಟ್ 5ರಂದು 370 ವಿಧಿಯನ್ನು ರದ್ದುಪಡಿಸಿ ಜಮ್ಮುಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ಮೇಲೆ ನಾಗರಿಕರನ್ನು ಪಂಜರದ ಪಕ್ಷಿಗಳಂತೆ ಇಡಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಚುನಾವಣೆಯನ್ನು ಚುನಾವಣೆ ಆಯೋಗ ಯಾಕೆ ಘೋಷಣೆ ಮಾಡಿತು ಎಂಬ ಬಗ್ಗೆ ಉತ್ತರವಿಲ್ಲ. ಜಮ್ಮು ಕಾಶ್ಮೀರದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ತಿಳಿಗೊಳಿಸುವತನಕ ಬಿಡಿಸಿ ಚುನಾವಣೆಯನ್ನು ಮುಂದೂಡಲೂ ಕೂಡ ಅವಕಾಶವಿತ್ತು. ಆದರೆ ಕೆಲಸ ಮಾಡಿಲ್ಲ.

ಯಾವುದೇ ಪಕ್ಷ ಚುನಾವಣೆಗೆ ತಯಾರಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು. ಪ್ರಮುಖ ನಾಯಕರನ್ನು ಬಂಧನದಲ್ಲಿಟ್ಟು, ಪ್ರಚಾರಕ್ಕೆ ಹೋಗದಂತೆ ನೋಡಿಕೊಂಡು ಚುನಾವಣೆ ನಡೆಸಿದರೆ ಯಾವ ರಾಜಕೀಯ ಪಕ್ಷ ಪಾಲ್ಗೊಳ್ಳಲು ಸಾಧ್ಯ? ಇದು ಅಕ್ಷರಶಃ ಕಣಿವೆಯ ಜನರನ್ನು ಕತ್ತಲಲ್ಲಿ ಇಟ್ಟಿರುವುದರ ಸೂಚಕವಾಗಿದೆ.

ಚುನಾವಣೆಯೆಂದರೆ ಪ್ರಜಾಪ್ರಭುತ್ವದ ಹಬ್ಬ. ಆ ಹಬ್ಬದಲ್ಲಿ ಎಲ್ಲರೂ ಭಾಗವಹಿಸಬೇಕು ಎಂಬುದು ನಿಯಮ. ಕಣಿವೆ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ವಿರುದ್ಧ ದಿಕ್ಕಿನಲ್ಲಿ ಆಟಳಿತ ನಡೆಸಲಾಗುತ್ತಿದೆ ಎಂದು ಟೀಕೆಗಳು ವ್ಯಕ್ತವಾಗಿದೆ. ಇಂದಿಗೂ ಕೂಡ ಸ್ಥಿರ ದೂರವಾಣಿಯನ್ನು ಬಿಟ್ಟರೆ, ನೆಟ್ ವರ್ಕ್, ಮೊಬೈಲ್ ಸಂಪರ್ಕ ಕಡಿತಗೊಳಿಸಿದೆ. ಈ ಉಪಕರಣಗಳು ಕೂಡ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಹಿಂದೆ ಬಿಜೆಪಿ ಅಧಿಕಾರಕ್ಕೆ ಏರಲು ಸಾಮಾಜಿಕ ಮಾಧ್ಯಮವೂ ಕಾರಣವಾಗಿತ್ತು. ಆದ್ದರಿಂದ ಚುನಾವಣೆಯನ್ನು ಪ್ರಜಾಪ್ರಭುತ್ವದ ಪ್ರಮುಖ ಕಿಟಕಿ ಬಾಗಿಲುಗಳನ್ನು ಮುಚ್ಚಿ ನಡೆಸಲಾಗುತ್ತಿದೆ. ಇಂತಹ ಚುನಾವಣೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ.

ಚುನಾವಣೆ ಒಂದೆರಡು ದಿನ ಬಾಕಿ ಇರುವಂತೆ ಮುಖಂಡನ್ನು ಬಿಡುಗಡೆಗೊಳಿಸಿದರೆ ಸಾಲದು. ಎಲ್ಲಾ ಪಕ್ಷಗಳು (ಬಿಜೆಪಿ ಹೊರತುಪಡಿಸಿ) ಚುನಾವಣೆ ಬಹಿಷ್ಕರಿಸಿರುವುದರಿಂದ ಬಿಡಿಸಿ ಚುನಾವಣೆ ಮುಂದೂಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...