Homeಮುಖಪುಟಚುನಾವಣೆಯಲ್ಲಿ ಹಸ್ತಕ್ಷೇಪ ಆರೋಪ; ಬಂಗಾಳ ರಾಜ್ಯಪಾಲ ಆನಂದ ಬೋಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಚುನಾವಣೆಯಲ್ಲಿ ಹಸ್ತಕ್ಷೇಪ ಆರೋಪ; ಬಂಗಾಳ ರಾಜ್ಯಪಾಲ ಆನಂದ ಬೋಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

- Advertisement -
- Advertisement -

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ರಾಜ್ಯದಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಮಧ್ಯಪ್ರವೇಶಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗುರುವಾರ ಆರೋಪ ಮಾಡಿದೆ.

“2024ರ ಲೋಕಸಭೆ ಚುನಾವಣೆಯಲ್ಲಿ ಪದೇಪದೆ ಮಧ್ಯಪ್ರವೇಶಿಸಿದ್ದಾರೆ; ಮತ್ತು ಮತದಾನದ ದಿನದಂದು ಮತದಾನ ನಡೆಯುವ ಪ್ರದೇಶಗಳಿಗೆ ಭೇಟಿ ನೀಡಲು ಪ್ರಯತ್ನಿಸಿದ್ದು, ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ” ಎಂದು ಟಿಎಂಸಿ ನಾಯಕರೊಬ್ಬರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯ ಮೊದಲ ಹಂತದ ಮುನ್ನಾದಿನದಂದು ತಮ್ಮ ಉದ್ದೇಶಿತ ಕೂಚ್ ಬೆಹಾರ್ ಪ್ರವಾಸವನ್ನು ರದ್ದುಗೊಳಿಸುವಂತೆ ಚುನಾವಣಾ ಆಯೋಗವು ಪಶ್ಚಿಮ ಬಂಗಾಳ ರಾಜ್ಯಪಾಲರಿಗೆ ಸಲಹೆ ನೀಡಿದೆ. ಏಕೆಂದರೆ, ಇದು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಇದನ್ನೂ ಓದಿ; ಲೋಕಸಭೆ ಚುನಾವಣೆಗಳು ಆಶ್ಚರ್ಯಕರ ಫಲಿತಾಂಶ ನೀಡುತ್ತವೆ: ಭಗವಂತ್ ಮಾನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...